ಉಡುಪಿ: ನೇರ ಸಂದರ್ಶನ
ಉಡುಪಿ : ದಿಯಾ ಸಿಸ್ಟಮ್ ಮತ್ತು ಶಾಲಿಮರ್ ಪ್ರಿಂಟರ್ಸ್ ಕಂಪೆನಿಗಳು ಮೇ ೧೧ರಂದು ಬೆಳಗ್ಗೆ ೦೯:೪೫ರಿಂದ ಮಣಿಪಾಲದ ಜಿಲ್ಲಾಧಿಕಾರಿ ಗಳ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ನೇರ ಸಂದರ್ಶನ ನಡೆಸಲಿದೆ.
ಎಸೆಸೆಲ್ಸಿ, ಪಿಯುಸಿ, ಬಿ.ಸಿ.ಎ, ಎಂ.ಸಿ.ಎ, ಬಿ.ಕಾಂ (ಕಂಪ್ಯೂಟರ್ ಸೈನ್ಸ್), ಬಿ.ಎಸ್ಸಿ (ಕಂಪ್ಯೂಟರ್ ಸೈನ್ಸ್, ಇಲೆಕ್ಟ್ರೋನಿಕ್ಸ್, ಸ್ಟೇಟ್ಟೀಟೀಕ್ಸ್), ಎಂಎಸ್ಸಿ, ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್, ಬಿ.ಇ ಇಂಜಿನಿಯರಿಂಗ್ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ- ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಮೊ.ನಂ.: ೯೯೪೫೮೫೬೬೭೦, ೮೧೦೫೬೧೮೨೯೧ ಮತ್ತು ೮೧೯೭೪೪೦೧೫೫ನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





