Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ...

ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ: ಸುಪ್ರೀಂಕೋರ್ಟ್ ಆದೇಶ ಸೌಹಾರ್ದಯುತ ಅನುಷ್ಠಾನ; ಸಿಎಂ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ9 May 2022 8:14 PM IST
share
ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ: ಸುಪ್ರೀಂಕೋರ್ಟ್ ಆದೇಶ ಸೌಹಾರ್ದಯುತ ಅನುಷ್ಠಾನ; ಸಿಎಂ ಬೊಮ್ಮಾಯಿ

ಬೆಂಗಳೂರು, ಮೇ 9: ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಅದಕ್ಕೆ ಸಂಬಂಧಿಸಿದಂತೆ 2002ರಲ್ಲಿ ಕರ್ನಾಟಕದ ಅಂದಿನ ಸರಕಾರ ಒಂದು ಆದೇಶ ಹೊರಡಿಸಿದೆ. ಅದನ್ನು ಸೌಹಾರ್ದಯುತವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಜಿಲ್ಲೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ಹಾಗೂ ಗಾಯತ್ರಿಪೀಠ ಮಹಾಸಂಸ್ಥಾನದ ಬಳಿ ಮಾಧ್ಯಮದವರೊಂದಿಗೆ ಈ ವಿಷಯದ ಕುರಿತು ಮಾತನಾಡಿದರು.

ಸಾರ್ವಜನಿಕ ಧ್ವನಿವರ್ಧಕ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶವಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಶಿಫಾರಸ್ಸಿನನ್ವಯ ಕೇಂದ್ರ ಸರರ್ಕಾರ ಆಜ್ಞೆ ಮಾಡಿದೆ. ಯಾವ ಸಂದರ್ಭಗಳಲ್ಲಿ ಹಾಗೂ ಧ್ವನಿವರ್ಧಕಗಳಲ್ಲಿ ಎಷ್ಟು ಪ್ರಮಾಣದ ಡೆಸಿಬಲ್ ಇರಬೇಕು ಎನ್ನುವ ಕೋಷ್ಟಕ ಇದೆ. 2000 ಇಸವಿಯಲ್ಲಿ ಕರ್ನಾಟಕ ಸರಕಾರ ಈ ಆಜ್ಞೆಯ ಪಾಲನೆಗೆ ಆದೇಶವನ್ನು ಮಾಡಿತ್ತು. ಈ ರೀತಿ ಸುಪ್ರೀಂ ಕೋರ್ಟ್ ಆದೇಶ, ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರದ ಆದೇಶಗಳನ್ನು ಪರಿಪಾಲನೆ ಮಾಡಲು ತೀರ್ಮಾನಿಸಲಾಗಿದೆ ಎಂದರು.

ಪರಿಪಾಲನೆಗೆ ಸೂಚನೆ: ಆದೇಶದ ಅನುಷ್ಠಾನಕ್ಕಾಗಿ ಡಿವೈಎಸ್‍ಪಿ ದರ್ಜೆಯ ಅಧಿಕಾರಿಗಳಿರಬೇಕು, ವರ್ಷವಿಡೀ ಸಾರ್ವಜನಿಕ ಧ್ವನಿವರ್ಧಕ ಬಳಸುವವರು ಪರವಾನಿಗೆ ತೆಗೆದುಕೊಳ್ಳುವುದೂ ಸೇರಿದಂತೆ ಹಲವಾರು ವಿಚಾರಗಳು ಆದೇಶದಲ್ಲಿವೆ. ಆದೇಶದ ಈ ಎಲ್ಲ ಅಂಶಗಳ ಪರಿಪಾಲನೆಗೆ ಸೂಚನೆ ನೀಡಲಾಗಿದೆ. ಈ ಆದೇಶದ ಅನುಷ್ಠಾನಕ್ಕೆ ಸೂಕ್ತ ಮಾರ್ಗಸೂಚಿಯನ್ನು ನೀಡಲಾಗುವುದು ಎಂದರು.

ಎಲ್ಲರೂ ಆದೇಶ ಪರಿಪಾಲಿಸಬೇಕು: ಧ್ವನಿವರ್ಧಕ ವಿಚಾರದಲ್ಲಿ ಯಾರೂ ಕೂಡ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಆದೇಶವನ್ನು ಎಲ್ಲರೂ ಪರಿಪಾಲನೆ ಮಾಡಬೇಕು. ಆಗ ಎಲ್ಲದ್ದಕ್ಕೂ ಪರಿಹಾರ ದೊರೆಯುತ್ತದೆ. ಉತ್ತರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಇದೇ ರೀತಿಯ ಪಾಲನೆ ಆಗುತ್ತಿದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X