Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಜೆಟ್ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ...

ಬಜೆಟ್ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಸಹಿಸುವುದಿಲ್ಲ: ಸಿಎಂ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ9 May 2022 8:31 PM IST
share
ಬಜೆಟ್ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಸಹಿಸುವುದಿಲ್ಲ: ಸಿಎಂ ಬೊಮ್ಮಾಯಿ

ಬೆಂಗಳೂರು, ಮೇ 9: ನನ್ನ ಸರಕಾರ ಬಜೆಟ್ ಘೋಷಿತ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬವನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. 

ಸೋಮವಾರ ಬೆಂಗಳೂರಿನಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಎಲ್ಲ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳ ಸಭೆಯಲ್ಲಿ ಸಿಇಒಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ. 

ನಿಮ್ಮೆಲ್ಲರನ್ನು ನಾನು ಗಮನಿಸುತ್ತಿದ್ದೇನೆ. ನೀವೆಲ್ಲರೂ ನನ್ನ(ರಡಾರ್) ಕಣ್ಗಾವಲಿನಲ್ಲಿದ್ದೀರಿ. ನೀವು ಸರಿಯಾಗಿ ಕೆಲಸ ಮಾಡದಿದ್ದರೆ ನಾನು ನಿಮ್ಮನ್ನು ವಿಚಾರಿಸಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. 

ನೀವೆಲ್ಲರೂ ಯುವಕರಿದ್ದೀರಿ. ನವ ಭಾರತಕ್ಕಾಗಿ ನವ ಕರ್ನಾಟಕ ನಿರ್ಮಾಣದಲ್ಲಿ ನಿಮ್ಮ ಕೊಡುಗೆಯನ್ನು ನೀಡಿ. ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡೋಣ. ನಾನು ನಿಮ್ಮ ಜೊತೆ ಇದ್ದೇನೆ. ಆದರೆ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಮತ್ತು ಭ್ರಷ್ಟಾಚಾರವನ್ನು ಎಂದೂ ಸಹಿಸುವುದಿಲ್ಲ. ಅದಕ್ಕೆ ಅವಕಾಶವನ್ನೂ ಮಾಡಿಕೊಡುವುದಿಲ್ಲ. ಈ ಮಾತುಗಳನ್ನು ನೀವು ಸ್ಪಷ್ಟವಾಗಿ ನೆನಪಿನಲ್ಲಿಟ್ಟುಕೊಂಡು ಕೆಲಸ ಮಾಡಿ ಎಂದು ಸಿಎಂ ಸೂಚನೆ ನೀಡಿದರು.

ಶಾಲಾ ಮಕ್ಕಳಿಗೆ, ಮಹಿಳಾ ಸಬಲೀಕರಣ, ಸ್ತ್ರೀಶಕ್ತಿ ಸಂಘಗಳಿಗೆ ವಿಶೇಷ ಕಾರ್ಯಕ್ರಮ ಇವೆಲ್ಲ ಪ್ರಮುಖ ಕಾರ್ಯಕ್ರಮಗಳು. ಸಾರ್ವಜನಿಕರಿಗೆ ಒಳಿತು ಮಾಡುವ ನಿರ್ಧಾರಗಳನ್ನು ಧೈರ್ಯವಾಗಿ ತೆಗೆದುಕೊಳ್ಳಿ. ವ್ಯವಸ್ಥೆ ಮೇಲಿನ ವಿಶ್ವಾಸವನ್ನು ಪುನರ್ ಸ್ಥಾಪಿಸೋಣ. ನಿಮ್ಮ ಕಾರ್ಯವೈಖರಿಯನ್ನು ಗಮನಿಸಲಾಗುತ್ತದೆ. ಸಾರ್ವಜನಿಕರು ತರುವ ಅರ್ಜಿಗಳಿಗೆ ಪರಿಹಾರ ಕೊಡುವ ಕೆಲಸವಾಗಬೇಕು. ನಿಮ್ಮ ಕಾರ್ಯದಲ್ಲಿ ನಿಖರತೆ ಇರಲಿ. ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಬೊಮ್ಮಾಯಿ ಸೂಚಿಸಿದರು.

ಸಭೆಯ ಮುಖ್ಯಾಂಶಗಳು: ವರ್ಷದ ಮೊದಲನೇ ತ್ರೈಮಾಸಿಕದಲ್ಲಿ ಸಭೆ. ಅಧಿಕಾರದ ವಿಕೇಂದ್ರೀಕರಣವಾಗಿ 3 ದಶಕಗಳ ಮೇಲಾಗಿದೆ. ಅದರ ಲಾಭವನ್ನು ಒಮ್ಮೆ ಹಿಂದಿರುಗಿ ನೋಡಬೇಕಾಗಿದೆ. ಕೇಂದ್ರೀಕೃತವಾದ ಆಡಳಿತ ಮಾಡಿದರೆ ಜನರಿಗೆ ಆಡಳಿತದ ಲಾಭ, ಸರಕಾರದ ಕಾರ್ಯಕ್ರಮಗಳು ಮುಟ್ಟುವುದಿಲ್ಲ ಎಂದು ನಾವೆಲ್ಲರೂ ಒಪ್ಪಿಕೊಂಡಿದ್ದೇವೆ. ಜನರಿಂದ ಜನರಿಗೋಸ್ಕರ ಆಡಳಿತವಾಗಬೇಕು. ಅಧಿಕಾರದ ಸುತ್ತಲೂ ಜನ ಓಡಾಡಬಾರದು. ಜನರ ಸುತ್ತಲೂ ಅಭಿವೃದ್ಧಿಯಾಗಬೇಕು ಎನ್ನುವ ಕಲ್ಪನೆ. 

ಸಿಇಓಗಳು ತಮ್ಮ ಹಂತದಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು. ತಮ್ಮ ಅಧಿಕಾರದ ಮಹತ್ವವನ್ನು ಅರಿತು ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕು. ಪಿಡಿಒಗಳನ್ನು ಶಿಸ್ತಿನಲ್ಲಿಡಬೇಕು. ಸ್ಥಳಗಳಿಗೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಬೇಕು. ನಿಮ್ಮ ಪಾತ್ರ, ಕರ್ತವ್ಯ ಹಾಗೂ ಅಧಿಕಾರದ ಬಗ್ಗೆ ಸ್ಪಷ್ಟತೆ ಇರಬೇಕು. ಸರಕಾರದ ಆಯವ್ಯಯದ ಬಹುತೇಕ ಕಾರ್ಯಕ್ರಮಗಳನ್ನು ಜಿಲ್ಲಾ ಪಂಚಾಯತ್ ಸಿಇಒಗಳು ಅನುಷ್ಠಾನ ಮಾಡುತ್ತಾರೆ.  ಬಜೆಟ್ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ರೋಡ್ ಮ್ಯಾಪ್ ಮಾಡಿಕೊಳ್ಳಬೇಕು. ಸಿಇಒಗಳು ಜಿಲ್ಲೆಯ ಸಿಎಸ್(ಮುಖ್ಯ ಕಾರ್ಯದರ್ಶಿಗಳು)ಗಳಂತೆ ಕಾರ್ಯ ನಿರ್ವಹಿಸಬೇಕು. ಜಿಲ್ಲೆಗಳಲ್ಲಿ ಮನೆ ನಿರ್ಮಾಣ, ಫಲಾನುಭವಿಗಳ ಆಯ್ಕೆ ಶೀಘ್ರವಾಗಿ ಮುಗಿಸಬೇಕು. ಪಡಿತರ ಚೀಟಿ ವಿತರಣೆ, ಶಾಲಾ ಕೊಠಡಿಗಳು, ಆಸ್ಪತ್ರೆಗಳ ವಸ್ತುಸ್ಥಿತಿ ಬಗ್ಗೆ ವರದಿ ನೀಡಬೇಕು.

ಆಯಾ ವರ್ಷದ ಕ್ರಿಯಾ ಯೋಜನೆಗಳು ಅದೇ ವರ್ಷದಲ್ಲಿ ಅನುಷ್ಠಾನವಾಗುವುದಿಲ್ಲ. ಅನುಷ್ಠಾನ ಅವಧಿ 10 ತಿಂಗಳೊಳಗೆ ಆಗಬೇಕು ಕಾಲಮಿತಿಯೊಳಗೆ ಕಾರ್ಯಕ್ರಮಗಳ ಅನುಷ್ಠಾನವಾಗಬೇಕೆಂಬ ಧ್ಯೇಯವಿರಬೇಕು. ಯೋಜನೆಯ ಅನುಷ್ಠಾನದ ಎಲ್ಲ ಹಂತಗಳ ಬಗ್ಗೆ ಗಮನಹರಿಸಬೇಕು. ರಾಯಚೂರಿನಲ್ಲಿ ಇಷ್ಟು ವರ್ಷಗಳ ಕಾರ್ಯಕ್ರಮಗಳ ಹೊರತಾಗಿಯೂ ಅನೀಮಿಯಾ ಪ್ರಮಾಣದಲ್ಲಿ ಹೆಚ್ಚಳವಿದೆ. ಅಪೌಷ್ಟಿಕತೆ ನಿವಾರಣೆಗೆ ಆರೋಗ್ಯ ಇಲಾಖೆಯ ಸಮನ್ವಯದೊಂದಿಗೆ ಕಾರ್ಯಕ್ರಮಗಳನ್ನು ರೂಪಿಸಿ. ಎಸ್‍ಸಿ, ಎಸ್‍ಟಿ, ಹಿಂದುಳಿದ ವರ್ಗದ ಯೋಜನೆಗಳು ನಿಗದಿತ ಅವಧಿಯಲ್ಲಿ ಮುಗಿಯಲೇಬೇಕು. ತಳಹಂತದ ಜನರ ಬದುಕನ್ನು ಬದಲಿಸುವ ಇಂತಹ ಯೋಜನೆಗಳ ಅನುμÁ್ಠನದ ಬಗ್ಗೆ ಸೂಕ್ಷ್ಮತೆಯಿಂದ ಕಾರ್ಯನಿರ್ವಹಿಸಬೇಕು ಎಂಬ ಅಂಶಗಳು ಸೇರಿದಂತೆ ಹಲವು ಕಟ್ಟುನಿಟ್ಟಿನ ಸೂಚನೆಗಳನ್ನು ಸಿಎಂ ಬೊಮ್ಮಾಯಿ ಅವರು ನೀಡಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X