ಪಿಎಚ್‌ಡಿ ಪದವಿ ಅಧ್ಯಯನಕ್ಕೆ ಅರ್ಜಿ ಆಹ್ವಾನ
ಉಡುಪಿ : ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರವು ಪಿಎಚ್‌ಡಿ ಅಧ್ಯಯನಕ್ಕಾಗಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಾನ್ಯತೆ ಪಡೆದಿದ್ದು, ಪ್ರಸ್ತುತ ೨೦೨೨-೨೦೨೩ನೇ ಸಾಲಿನ ಅಧ್ಯಯನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸ್ನಾತಕೋತ್ತರ ಪದವಿಯಲ್ಲಿ ಶೇ.೫೫ ಮತ್ತು ಮೇಲ್ಪಟ್ಟು ಅಂಕ ಪಡೆದ ಅಭ್ಯರ್ಥಿಗಳು ಕನ್ನಡ ಮತ್ತು ಚರಿತ್ರೆ ವಿಷಯಗಳಲ್ಲಿ ಅಧ್ಯಯನ ಮಾಡಲು ಅವಕಾಶವಿದೆ. ಆಸಕ್ತರು ಅರ್ಜಿಯನ್ನು ವಿಶ್ವವಿದ್ಯಾಲಯದ ವೆಬೆಸೈಟ್ - - ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಕೇಂದ್ರಕ್ಕೆ ಅರ್ಜಿ ಸಲ್ಲಿಸಲು ಜೂನ್ ೫ ಕೊನೆಯ ದಿನವಾಗಿದ್ದು, ಆಸಕ್ತರು ಕೂಡಲೇ ಕೇಂದ್ರದ ಕಚೇರಿಯನ್ನು ಸಂಪರ್ಕಿಸುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೨೦-೨೫೨೧೧೫೯/ ೯೪೪೮೮೬೮೮೬೮ನ್ನು ಸಂಪರ್ಕಿಸಬಹುದು ಎಂದು ಕೇಂದ್ರದ ಪ್ರಕಟಣೆ ತಿಳಿಸಿದೆ.
Next Story





