Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೋಧಕರ ನಿಯೋಜನೆ ರದ್ದತಿಗೆ ವಿದ್ಯಾರ್ಥಿಗಳ...

ಬೋಧಕರ ನಿಯೋಜನೆ ರದ್ದತಿಗೆ ವಿದ್ಯಾರ್ಥಿಗಳ ಹಿತವೇ ಕಾರಣ: ಸಚಿವ ಅಶ್ವತ್ಥನಾರಾಯಣ ಸ್ಪಷ್ಟನೆ

''ಶಾಸನಸಭೆಯಲ್ಲೂ ಹಲವು ಬಾರಿ ಶಾಸಕರೇ ಚರ್ಚಿಸಿದ್ದರು''

ವಾರ್ತಾಭಾರತಿವಾರ್ತಾಭಾರತಿ9 May 2022 9:26 PM IST
share
ಬೋಧಕರ ನಿಯೋಜನೆ ರದ್ದತಿಗೆ ವಿದ್ಯಾರ್ಥಿಗಳ ಹಿತವೇ ಕಾರಣ: ಸಚಿವ ಅಶ್ವತ್ಥನಾರಾಯಣ ಸ್ಪಷ್ಟನೆ

ಬೆಂಗಳೂರು, ಮೇ 9: ಸರಕಾರಿ ಪ್ರಥಮದರ್ಜೆ ಕಾಲೇಜುಗಳ ಉಪನ್ಯಾಸಕರ ನಿಯೋಜನೆಯನ್ನು ರದ್ದುಪಡಿಸಿ, ಅವರನ್ನೆಲ್ಲ ಮೂಲಕಾಲೇಜುಗಳಿಗೆ ಕಳಿಸುವಂತೆ ಮರಿತಿಬ್ಬೇಗೌಡರೂ ಸೇರಿದಂತೆ ಎಲ್ಲ ಪಕ್ಷಗಳ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ವಿಧಾನಮಂಡಲ ಅಧಿವೇಶನದಲ್ಲಿ ಆಗ್ರಹಿಸಿದ್ದರು. ಅವರ ಮನವಿಗೆ ಸ್ಪಂದಿಸಿ ಉನ್ನತ ಶಿಕ್ಷಣ ಇಲಾಖೆಯು ಬೋಧಕರ ನಿಯೋಜನೆಯನ್ನು ರದ್ದುಪಡಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಸ್ಪಷ್ಟಪಡಿಸಿದ್ದಾರೆ. 

ಬೋಧಕರ ನಿಯೋಜನೆಯನ್ನು ಏಕಾಏಕಿ ಮಾಡಲಾಗಿದೆ ಎಂದು ಎಂಎಲ್ಸಿ ಮರಿತಿಬ್ಬೇಗೌಡ ಅವರು ಮಾಡಿರುವ ಆರೋಪ ಸತ್ಯಕ್ಕೆ ದೂರವಾದುದು. ಈ ಕುರಿತು ಹಲವು ಸುತ್ತಿನ ಮಾತುಕತೆಗಳ ನಡೆದಿವೆ ಎಂದು ಸಚಿವರು ಪ್ರತಿಕ್ರಿಯಿಸಿದರು. ಮರಿತಿಬ್ಬೇಗೌಡರು ನಡೆಸಿರುವ ಧರಣಿ ಬಗ್ಗೆ ಸೋಮವಾರ ಪ್ರತಿಕ್ರಿಯಿಸಿರುವ ಅವರು ಹೀಗೆಂದಿದ್ದಾರೆ. 

2021ರ ವರ್ಗಾವಣೆ ನಿಯಮಗಳ ಪ್ರಕಾರ, ಬೋಧಕರ ನಿಯೋಜನೆಗೆ ಅವಕಾಶವೇ ಇಲ್ಲ. ಈಗ ಈ ನಿಯಮವನ್ನು ಅನುಸರಿಸಿ, ನಿಯೋಜನೆ ರದ್ದುಪಡಿಸಲಾಗಿದೆ. ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಕೊರೋನ ಹಿನ್ನೆಲೆಯಲ್ಲಿ ಬೋಧಕರ ನಿಯೋಜನೆಯನ್ನು ರದ್ದುಪಡಿಸುವ ಕೆಲಸ ಎರಡು ವರ್ಷ ಮುಂದೂಡಲ್ಪಟ್ಟಿತ್ತು. ಇತ್ತೀಚೆಗೆ ಈ ಪ್ರಕ್ರಿಯೆ ಕೈಗೆತ್ತಿಕೊಂಡಾಗ ಕೆಲವರು ಒಂದು ವಾರ ಮುಂದೂಡುವಂತೆ ಕೇಳಿಕೊಂಡಿದ್ದರು. ಇದಾದ ಮೇಲಷ್ಟೇ ಬೋಧಕರ ನಿಯೋಜನೆಯನ್ನು ರದ್ದು ಪಡಿಸಲಾಗಿದೆ ಎಂದು ಅವರು ವಿವರಿಸಿದರು. 

ಬೋಧಕರನ್ನು ನಿಯೋಜನೆ ಮೇಲೆ ಕಳಿಸಿರುವುದರಿಂದ ಹಲವು ಕಾಲೇಜುಗಳಲ್ಲಿ ಕೇವಲ ಅತಿಥಿ ಉಪನ್ಯಾಸಕರ ಮೇಲೆಯೇ ಅವಲಂಬನೆ ಹೆಚ್ಚಾಗಿತ್ತು. ಆದ್ದರಿಂದ ಇವರನ್ನೆಲ್ಲ ಮೂಲಸಂಸ್ಥೆಗೆ ಕಳಿಸಬೇಕೆಂದು ಕಾಲೇಜು ಅಭಿವೃದ್ಧಿ ಮಂಡಲಿಯ ಮುಖ್ಯಸ್ಥರೂ ಆಗಿರುವ ಶಾಸಕರು ಆಗ್ರಹಿಸಿದ್ದರು. ಆದರೆ ಈಗ ಅದನ್ನು ಮರೆತು, ಮರಿತಿಬ್ಬೇಗೌಡರು ನನ್ನ ಕಚೇರಿಯ ಮುಂದೆ ಧರಣಿ ಕೂತಿರುವುದು ಸೋಜಿಗದ ಸಂಗತಿಯಾಗಿದೆ ಎಂದು ಅವರು ಪ್ರತಿಪಾದಿಸಿದರು. 

ಪ್ರಸ್ತುತ, ಕಾಲೇಜು ಶಿಕ್ಷಣ ಇಲಾಖೆಯಲ್ಲಿ 700ಕ್ಕೂ ಹೆಚ್ಚು ಬೋಧಕರು ನಿಯೋಜನೆ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದರಲ್ಲಿ, ಇ ವಲಯಕ್ಕೆ ಸೇರುವ ಹೋಬಳಿ ಮಟ್ಟದ ಸರಕಾರಿ ಪ್ರಥಮದರ್ಜೆ ಕಾಲೇಜುಗಳ 150ಕ್ಕಿಂತ ಹೆಚ್ಚು ಕಾಯಂ ಬೋಧಕರು ಮೂಲ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸದೇ ಇತರ ಉನ್ನತ ವಲಯದ ಕಾಲೇಜುಗಳಿಗೆ ನಿಯೋಜನೆಗೊಂಡಿದ್ದಾರೆ. ಅದೇ ರೀತಿ ಆ ವಲಯಕ್ಕೆ ಸೇರುವ ತಾಲ್ಲೂಕು ಮಟ್ಟದ ಸರಕಾರಿ ಪ್ರಥಮದರ್ಜೆ ಕಾಲೇಜುಗಳ ಸುಮಾರು 250ಕ್ಕೂ ಹೆಚ್ಚು ಬೋಧಕರು ಮೂಲ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸದೇ ಇತರ ವಲಯದ ಕಾಲೇಜುಗಳಿಗೆ ನಿಯೋಜನೆಗೊಂಡಿರುತ್ತಾರೆ. ಹೀಗಾಗಿ, ಈ ನಿಯೋಜನೆಗಳಿಂದಾಗಿ ಒಟ್ಟು 400ಕ್ಕೂ ಹೆಚ್ಚು ಬೋಧಕರು ಮೂಲ ಕಾಲೇಜುಗಳಲ್ಲಿ ಇಲ್ಲದೇ, ಹೋಬಳಿ ಮತ್ತು ತಾಲ್ಲೂಕು ಮಟ್ಟದ ಕಾಲೇಜುಗಳ ಬಹುತೇಕ ಗ್ರಾಮೀಣ ಭಾಗಗಳಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ತೊಂದರೆಯಾಗಿದೆ ಎಂದು ವಿವರಿಸಿದ್ದಾರೆ. 

ನಿಯೋಜನೆ ರದ್ದತಿಗೆ ಮುನ್ನ ಅತಿಥಿ ಉಪನ್ಯಾಸಕರ ಬಗ್ಗೆಯೂ ಆಲೋಚಿಸಲಾಗಿದೆ. ಅವರ ಕಾರ್ಯಭಾರದಲ್ಲಿ ವ್ಯತ್ಯಾಸವಾದರೆ ಸಮೀಪದಲ್ಲೇ ಇರುವ ಕಾಲೇಜುಗಳಲ್ಲಿ ಕಾರ್ಯಭಾರ ಹೊಂದಿಸಲಾಗುವುದು. ನಿಯೋಜನೆ ರದ್ದತಿ ಆದೇಶವನ್ನು ರಾತ್ರೋರಾತ್ರಿಯೇನೂ ಹೊರಡಿಸಿಲ್ಲ ಎಂದು ಸಚಿವರು ನುಡಿದರು. 

ಮರಿತಿಬ್ಬೇಗೌಡರಿಗೆ ಬೆಂಬಲ ಸೂಚಿಸಲು ಸ್ಥಳಕ್ಕೆ ಬಂದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅವರು ನಿಯೋಜನೆ ವಿಷಯ ಬಿಟ್ಟು ವರ್ಗಾವಣೆ ಬಗ್ಗೆ ಮಾತನಾಡಿದ್ದು ಆಶ್ಚರ್ಯ ಉಂಟು ಮಾಡಿದೆ. ಯಾವ ಕಾರಣಕ್ಕೆ ಗೌಡರು ಧರಣಿ ಕುಳಿತಿದ್ದಾರೆ ಎನ್ನುವುದನ್ನು ತಿಳಿಯದೆ ಟೀಕೆ ಮಾಡುವುದಕ್ಕೇ ಬಂದ ಹಾಗೆ ಇತ್ತು ಎಂದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X