VIDEO- ಪ್ರಮೋದ್ ಮುತಾಲಿಕ್ ರನ್ನು ಮೊದಲು ಒದ್ದು ಒಳಗೆ ಹಾಕಿ: ಎಚ್.ಡಿ ಕುಮಾರಸ್ವಾಮಿ

ಬಾಗಲಕೋಟೆ, ಮೇ 9: ಸಮಾಜದಲ್ಲಿ ಶಾಂತಿ ಕದಡುತ್ತಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸೇರಿದಂತೆ ಇನ್ನಿತರರನ್ನು ಒದ್ದು ಒಳಗೆ ಹಾಕಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಸೋಮವಾರ ಇಲ್ಲಿನ ಬಾದಾಮಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜದಲ್ಲಿ ಸಹಬಾಳ್ವೆಯನ್ನು ಹಾಳು ಮಾಡುತ್ತಿದ್ದಾರೆ. ಆದರೆ, ಸರಕಾರ ಇದಕ್ಕೆ ಪರೋಕ್ಷವಾಗಿ ಬೆಂಬಲ ನೀಡುವಂತೆ ಕಾಣುತ್ತಿದೆ. ಒಂದು ವೇಳೆ ಅಶಾಂತಿ ವಾತಾವರಣ ಸೃಷ್ಟಿಯಾದರೆ, ಯಾರು ಹೊಣೆ? ಹೀಗಾಗಿ, ಮಾಧ್ಯಮಗಳ ಮುಂದೆ ಬಂದು ಸಮಾಜದ ಶಾಂತಿ ಹಾಳು ಮಾಡುವವರನ್ನು ಸರಕಾರ ನಿಯಂತ್ರಿಸಬೇಕು ಎಂದರು.
ಸಾಮಾಜಿಕ ಕಲಹಗಳಾದ ಮೇಲೆ ಅವುಗಳನ್ನು ತಿದ್ದುವ ಕಾರ್ಯ ಮಾಡಿ ಪ್ರಯೋಜನ ಇಲ್ಲ. ಅಝಾನ್ ಬಗ್ಗೆ ಕೋರ್ಟ್ ಏನು ತೀರ್ಪು ನೀಡಿದೆ ಎಂಬುದನ್ನು ಜನರಿಗೆ ತಲುಪಿಸುವ ಕೆಲಸವನ್ನು ಸರಕಾರ ಮಾಡಬೇಕು ಎಂದ ಅವರು ಸಲಹೆ ನೀಡಿದರು.
Next Story







