ಉತ್ತರಾಖಂಡ ಉಪ ಚುನಾವಣೆ: ಚಂಪಾವತ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಪುಷ್ಕರ್ ಧಾಮಿ

ಚಂಪಾವತ್(ಉತ್ತರಾಖಂಡ), ಮೇ 9: ಮೇ 31ರಂದು ನಡೆಯಲಿರುವ ಚಂಪಾವತ್ ವಿಧಾನಸಭೆ ಉಪ ಚುನಾವಣೆಗೆ ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಕಳೆದ ವರ್ಷ ಫೆಬ್ರವರಿಯಲ್ಲಿ ನಡೆದ ವಿಧಾನ ಸಭೆ ಚುನಾವಣೆಯಲ್ಲಿ ಖಟಿಮಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪುಷ್ಕರ್ ಸಿಂಗ್ ಧಾಮಿ ಅವರು ಸೋತಿದ್ದರು.
ಈ ಹಿನ್ನೆಲೆಯಲ್ಲಿ ಧಾಮಿ ಅವರಿಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿ ಕೊಡಲು ಚಂಪಾವತ್ ವಿಧಾನ ಸಭಾ ಸ್ಥಾನಕ್ಕೆ ಬಿಜೆಪಿ ಶಾಸಕ ಕೈಲಾಸ್ ಗೆಹ್ಟೋರಿ ರಾಜೀನಾಮೆ ನೀಡಿದ್ದರು. ಉತ್ತರಾಖಂಡದ 2022ರ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಿದ್ದರೂ ಧಾಮಿ ಅವರು ಖಟಿಮಾ ಕ್ಷೇತ್ರದಲ್ಲಿ ಪರಾಭವಗೊಂಡಿದ್ದರು. ಪ್ರಸ್ತುತ ಧಾಮಿ ಅವರು ರಾಜ್ಯ ವಿಧಾನ ಸಭೆಯಲ್ಲಿ ಸದಸ್ಯರಲ್ಲ. ನಾಮಪತ್ರ ಸಲ್ಲಿಸುವುದಕ್ಕಿಂತ ಮುನ್ನ ಧಾಮಿ ಅವರು ಬನ್ಬಾಸದಲ್ಲಿ ಪ್ರಾರ್ಥನೆ ಸಲ್ಲಿಸಿದರು.
Next Story