Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್‌ನಲ್ಲಿ ರಾಹುಲ್ ಗಾಂಧಿ: ಅತೃಪ್ತ...

ಗುಜರಾತ್‌ನಲ್ಲಿ ರಾಹುಲ್ ಗಾಂಧಿ: ಅತೃಪ್ತ ನಾಯಕ ಹಾರ್ದಿಕ್ ಪಟೇಲ್ ಭೇಟಿ ಸಾಧ್ಯತೆ

ವಾರ್ತಾಭಾರತಿವಾರ್ತಾಭಾರತಿ10 May 2022 12:03 PM IST
share
ಗುಜರಾತ್‌ನಲ್ಲಿ ರಾಹುಲ್ ಗಾಂಧಿ: ಅತೃಪ್ತ ನಾಯಕ ಹಾರ್ದಿಕ್ ಪಟೇಲ್ ಭೇಟಿ ಸಾಧ್ಯತೆ

 ಅಹಮದಾಬಾದ್: ಈ ವರ್ಷಾಂತ್ಯದಲ್ಲಿ ನಡೆಯಲಿರುವ ರಾಜ್ಯ ಚುನಾವಣೆಗೆ ತಯಾರಿ ನಡೆಸಲು ಗುಜರಾತ್‌ನಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಪಕ್ಷದ ಅತೃಪ್ತ ನಾಯಕ ಹಾರ್ದಿಕ್ ಪಟೇಲ್ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ.

ಪ್ರಬಲ ಪಾಟಿದಾರ್ ಸಮುದಾಯದ ನಾಯಕ ಹಾಗೂ  ಗುಜರಾತ್‌ನಲ್ಲಿ ಕಾಂಗ್ರೆಸ್‌ನ ಕಾರ್ಯಾಧ್ಯಕ್ಷ ಹಾರ್ದಿಕ್ ಪಟೇಲ್ ಅವರು ತಮ್ಮ ಪಕ್ಷದ ನಾಯಕತ್ವಕ್ಕೆ ಇತ್ತೀಚೆಗಿನ ದಿನಗಳಲ್ಲಿ ಕಳವಳಕಾರಿ ಸಂಕೇತಗಳನ್ನು ಕಳುಹಿಸುತ್ತಿದ್ದಾರೆ. ಇತ್ತೀಚೆಗೆ ಅವರು ಆಡಳಿತಾರೂಢ ಬಿಜೆಪಿಯೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂಬ ಊಹಾಪೋಹಗಳ ಮಧ್ಯೆ ಅವರು ತಮ್ಮ ಟ್ವಿಟರ್ ಬಯೋದಿಂದ "ಕಾಂಗ್ರೆಸ್" ಹಾಗೂ  ಪಕ್ಷದ ಚಿಹ್ನೆಯನ್ನು ತೆಗೆದುಹಾಕಿದ್ದರು.

2019 ರಲ್ಲಿ ಕಾಂಗ್ರೆಸ್‌ಗೆ ಸೇರಿದ 28 ವರ್ಷ ವಯಸ್ಸಿನ ಪಟೇಲ್ ಅವರು ಗುಜರಾತ್‌ನಲ್ಲಿ ಕಾಂಗ್ರೆಸ್ ಮತ್ತು ಅದರ ಉನ್ನತ ನಾಯಕರು ತನ್ನನ್ನು "ನಿರ್ಲಕ್ಷಿಸಿದ್ದಾರೆ" ಎಂದು ದೂರಿದ್ದಾರೆ.

ರಾಹುಲ್ ಗಾಂಧಿ ಅವರು ಅತೃಪ್ತ ನಾಯಕ  ಹಾರ್ದಿಕ್ ಪಟೇಲ್ ಅವರನ್ನು ಸಂಪರ್ಕಿಸಿದ್ದು,  ಪಕ್ಷದಲ್ಲಿ ಮುಂದುವರಿಯುವಂತೆ ಸಂದೇಶವನ್ನು ಕಳುಹಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

ಆದಿವಾಸಿ ಸತ್ಯಾಗ್ರಹ ರ್ಯಾಲಿ ಸೇರಿದಂತೆ ಚುನಾವಣಾ ಪೂರ್ವ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಹುಲ್ ಗಾಂಧಿ ಅವರು ದಾಹೋದ್‌ನಲ್ಲಿದ್ದಾರೆ. ಈ ಸಂದರ್ಭದಲ್ಲಿ ಅವರು ಬುಡಕಟ್ಟು ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಗುಜರಾತ್‌ನಲ್ಲಿ ಬುಡಕಟ್ಟು ಜನರು ಕಾಂಗ್ರೆಸ್‌ಗೆ ಒಲವು ತೋರುತ್ತಿದ್ದಾರೆ. ಆದರೆ ಈ ತಿಂಗಳ ಆರಂಭದಲ್ಲಿ ಎಎಪಿ ಮುಖ್ಯಸ್ಥ ಹಾಗೂ  ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಕೂಡ ಬುಡಕಟ್ಟು ಜನರನ್ನು ಉದ್ದೇಶಿಸಿ ಮಾತನಾಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X