ಕೊರಗ ಕುಟುಂಬಕ್ಕೆ ದೀನ ದಯಾಳ್ ನಿವಾಸ ಹಸ್ತಾಂತರ

ಮಣಿಪಾಲ : ಉಡುಪಿ ನಗರ ಬಿಜೆಪಿ ವತಿಯಿಂದ ಮಣಿಪಾಲ ನೆಹರೂ ನಗರದ ಕೊರಗ ಕಾಲನಿಯಲ್ಲಿ ನಿರ್ಮಿಸ ಲಾದ ದೀನ ದಯಾಳ್ ನಿವಾಸವನ್ನು ಕೊರಗ ಸಮುದಾಯದ ಅಪ್ಪಿ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಂಗಳವಾರ ಹಸ್ತಾಂತರಿಸಿದರು.
ಬಳಿಕ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಸಮಾಜದ ಕಟ್ಟಕಡೆಯ ವ್ಯಕಿತಿಗೂ ಸಾಮಾಜಿಕ, ಶೈಕ್ಷಣಿಕ ನ್ಯಾಯ ನೀಡುವುದು ಸರಕಾರದ ಜವಾಬ್ದಾರಿ. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರಕಾರದ ಚಿಂತನೆಗಳು ಶ್ರೇಷ್ಠವಾಗಿವೆ ಎಂದು ತಿಳಿಸಿದರು.
ರಾಜ್ಯ ಮೀನುಗಾರಿಕಾ, ಬಂದರು ಮತ್ತು ಒಳನಾಡು ಸಾರಿಗೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಮಾತನಾಡಿದರು. ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ಅಧ್ಯಕ್ಷತೆ ವಹಿಸಿದ್ದರು.
ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಶಾಸಕ ಕೆ.ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಎಸ್.ಸಿ. ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ, ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ರಾಜ್ಯ ಎಸ್.ಟಿ. ಮೋರ್ಚಾ ತಿಪ್ಪರಾಜು ಹವಾಲ್ದಾರ್, ಉಡುಪಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ವೀಣಾ ವಿ. ನಾಯ್ಕ್, ರಾಜ್ಯ ಎಸ್‌ಟಿ ಮೋರ್ಚಾ ಕಾರ್ಯದರ್ಶಿ ಉಮೇಶ್ ನಾಯ್ಕ್, ಜಿಲ್ಲಾ ಎಸ್‌ಟಿ. ಮೋರ್ಚಾ ಅಧ್ಯಕ್ಷ ನಿತ್ಯಾನಂದ ನಾಯ್ಕ್, ನಗರ ಎಸ್‌ಸಿ ಮೋರ್ಚಾ ಅಧ್ಯಕ್ಷ ಅಶೋಕ್ ನಾಯ್ಕ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಡಿ.ಬಾಲಕೃಷ್ಣ ಶೆಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಕಲ್ಮಾಡಿ, ನಗರಸಭಾ ಸದಸ್ಯರಾದ ವಿಜಯಲಕ್ಷ್ಮೀ, ಮಂಜುನಾಥ್ ಮಣಿಪಾಲ ಉಪಸ್ಥಿತರಿದ್ದರು.