ಶ್ರೀರಾಮ ಸೇನೆಯಿಂದ ಶಾಂತಿ ಕದಡುವ ಷಡ್ಯಂತ್ರ; ಅಹಿತಕರ ಘಟನೆ ನಡೆದರೆ ಪೊಲೀಸ್ ಇಲಾಖೆ ಹೊಣೆ : ಮುಸ್ಲಿಂ ಲೀಗ್
ಮಂಗಳೂರು : ರಾಜ್ಯಾದ್ಯಂತ ಕೋಮುಗಲಭೆಗಳನ್ನು ಮತ್ತು ಕೋಮು ಧ್ವೇಷವನ್ನು ಹರಡುವ ಹಾಗೂ ಶಾಂತಿ ಕದಡುವ ಷಡ್ಯಂತ್ರವನ್ನು ಶ್ರೀರಾಮ ಸೇನೆ ಮಾಡುತ್ತಿದೆ. ಸರಕಾರ ಈ ಬಗ್ಗೆ ಕಠಿಣ ಕಾನೂನು ಕ್ರಮ ಕೈಗೊಳ್ಳ ಬೇಕು ಎಂದು ದ.ಕ. ಜಿಲ್ಲಾ ಮುಸ್ಲಿಂ ಲೀಗ್ ಆಗ್ರಹಿಸಿದೆ.
ಶ್ರೀರಾಮ ಸೇನೆ ಅಝಾನ್‌ಗೆ ಪ್ರತಿಯಾಗಿ ಹನುಮಾನ್ ಚಾಲೀಸ ಪಠಣದಂತಹ ವಿಚಾರಗಳನ್ನು ಮುಂದಿಟ್ಟುಕೊಂಡು ತನ್ನ ರಾಜಕೀಯ ಬೇಳೆ ಬೇಯಿಸಲು ಪ್ರಯತ್ನಿಸುತ್ತಿದೆ. ಇದರಿಂದ ಅಹಿತಕರ ಘಟನೆ ನಡೆದರೆ ಪೊಲೀಸ್ ಇಲಾಖೆಯೇ ನೇರ ಹೊಣೆ ಹೊರಬೇಕು ಎಂದು ಲೀಗ್ ಜಿಲ್ಲಾಧ್ಯಕ್ಷ ಕೆ.ಎಂ. ಫಯಾಝ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Next Story