Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮೇ 28ಕ್ಕೆ ‘ಅಮೃತ ಭಾರತಿಗೆ ಕನ್ನಡದ...

ಮೇ 28ಕ್ಕೆ ‘ಅಮೃತ ಭಾರತಿಗೆ ಕನ್ನಡದ ಆರತಿ’: ಸಚಿವ ಸುನಿಲ್‌ ಕುಮಾರ್

ವಾರ್ತಾಭಾರತಿವಾರ್ತಾಭಾರತಿ10 May 2022 8:16 PM IST
share
ಮೇ 28ಕ್ಕೆ ‘ಅಮೃತ ಭಾರತಿಗೆ ಕನ್ನಡದ ಆರತಿ’: ಸಚಿವ ಸುನಿಲ್‌ ಕುಮಾರ್

ಉಡುಪಿ : 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಜ್ಯದಾದ್ಯಂತ ಸ್ವಾತಂತ್ರ್ಯ ಸಂಗ್ರಾಮದ ನೆನಪುಗಳನ್ನು ಮೆಲುಕು ಹಾಕುವ ‘ಅಮೃತ ಭಾರತಿಗೆ ಕನ್ನಡದ ಆರತಿ’ ಕಾರ್ಯಕ್ರಮ ಆಂದೋಲನದ ರೀತಿ ನಡೆಯಲಿದೆ ಎಂದು ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. 

ಮಂಗಳವಾರ ಮಣಿಪಾಲದ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್ ಆಚಾರ‌್ಯ ಸಭಾಂಗಣದಲ್ಲಿ ೭೫ನೇ ಸ್ವಾತಂತ್ರ್ಯ ಸಂಗ್ರಾಮದ ಅಂಗವಾಗಿ ನಡೆಯಲಿರುವ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. 

ನಮ್ಮ ದೇಶಕ್ಕೆ ಸ್ವಾತಂತ್ರ್ಯವನ್ನು ದೊರಕಿಸಿಕೊಡಲು ಅನೇಕ ಮಹಾನ್ ನಾಯಕರುಗಳು ತಮ್ಮ ಜೀವವನ್ನೇ ತ್ಯಾಗ ಮಾಡಿ, ಹೋರಾಟವನ್ನು ನಡೆಸಿದ್ದಾರೆ. ಇಂತಹ ಹೋರಾಟಗಾರರ ಜೀವನ ಕಥೆ, ಹೋರಾಟದ ವಿವಿಧ ಹಂತಗಳು ಸೇರಿದಂತೆ, ಸ್ವಾತಂತ್ರ್ಯ ಹೋರಾಟಕ್ಕೆ ಕನ್ನಡಿಗರ ಕೊಡುಗೆಯನ್ನು ಇಂದಿನ ಯುವಜನರಿಗೆ, ಸಾರ್ವಜನಿಕರಿಗೆ ಹಾಗೂ ಹೊರ ರಾಜ್ಯದವರಿಗೆ ತಿಳಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ವಿಭಿನ್ನವಾಗಿ ಹಮ್ಮಿಕೊಳ್ಳಲಾಗಿದೆ ಎಂದರು.

ಜಿಲ್ಲೆಯಲ್ಲಿ ಮೇ 28ರಂದು ಬೆಳಗ್ಗೆ 10.30ಕ್ಕೆ ಉಡುಪಿಯ ಅಜ್ಜರಕಾಡಿನಲ್ಲಿ ಹಾಗೂ ಕುಂದಾಪುರದ ಬಸ್ರೂರಿನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಇದು ಸರಕಾರಿ ಕಾರ್ಯಕ್ರಮವಾಗದೇ ಜನಪರ ಕಾರ್ಯಕ್ರಮವಾಗಬೇಕು. ಯುವಕ ಸಂಘಗಳು, ಸಾಮಾಜಿಕ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿ ಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ಕಾರ್ಯಕ್ರಮದ ಯಶಸ್ಸಿಗೆ ತಾಲೂಕು ಮಟ್ಟದಲ್ಲಿ ಸಮಿತಿ ಸಭೆಗಳನ್ನು ವಿವಿಧ ಸಂಘಟನೆಗಳ ಪದಾಧಿಕಾರಿ ಗಳೊಂದಿಗೆ ನಡೆಸಿ, ಕಾರ್ಯಕ್ರಮದ ಯಶಸ್ಸಿಗೆ ರೂಪುರೇಷೆಗಳನ್ನು ಸಿದ್ಧಪಡಿಸಿ. ಅರ್ಥಪೂರ್ಣವಾಗಿ ದೊಡ್ಡ ರೀತಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಬೇಕು ಎಂದರು. 

ಈಗಾಗಲೇ ರಾಜ್ಯದಲ್ಲಿ ಸ್ವಾತಂತ್ರ್ಯ ಹೋರಾಟ ನಡೆದ ೭೫ ಸ್ಥಳಗಳ ಕುರಿತ ಪುಸ್ತಕ ಬಿಡುಗಡೆ ಮಾಡಲಾಗಿದೆ ಎಂದ ಅವರು, ಆಗಸ್ಟ್ ೯ರಿಂದ ೧೫ರವರೆಗೆ ಪ್ರತಿ ಮನೆಯ ಮೇಲೆ ರಾಷ್ಟ್ರಧ್ವಜ ಹಾರಿಸಲಾಗುವುದು ಎಂದರು.

ಜೂನ್ ೧೫ರಿಂದ ೩೦ರವರೆಗೆ ಹೋರಾಟದ ನೆಲದಲ್ಲಿ ಒಂದು ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸ್ವಾತಂತ್ರ್ಯ ಹೋರಾಟ ನಡೆದ ಆಯ್ದ ೧೫ ಸ್ಥಳಗಳಲ್ಲಿ ೧೫ ದಿನ ಕಾರ್ಯಕ್ರಮ ನಡೆಯಲಿದ್ದು, ಆ ಸ್ಥಳದ ಕುರಿತು ಉಪನ್ಯಾಸ ಪ್ರದರ್ಶನ, ಸಾಕ್ಷ್ಯಚಿತ್ರ ಪ್ರದರ್ಶನ ಒಳಗೊಂಡಿರುತ್ತದೆ ಎಂದರು.

ಈ ಸ್ಥಳಗಳಿಗೆ ಸಾರ್ವಜನಿಕರು ಪ್ರೇಕ್ಷಣೀಯ ಸ್ಥಳಕ್ಕೆ ಭೇಟಿ ನೀಡುವ ರೀತಿಯಲ್ಲಿರಬೇಕು. ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳ ಸದಸ್ಯರು ಸ್ಥಳ ಭೇಟಿ ನೀಡುವ ಕುರಿತು ಹೆಚ್ಚಿನ ಪ್ರಚಾರ ನೀಡಬೇಕು ಎಂದರು. 

ಜಿಲ್ಲೆಗೆ ‘ಅಮೃತ ಭಾರತಿಗೆ ಕನ್ನಡದ ಆರತಿ’ ಶೀರ್ಷಿಕೆಯಡಿ ರಥಯಾತ್ರೆಯು ೪ ಕಂದಾಯ ಭಾಗಗಳಲ್ಲಿ ಸಂಚರಿಸಲಿವೆ. ಈ ಸಂದರ್ಭದಲ್ಲಿ ಸ್ಥಳೀಯವಾಗಿ ಎಲ್ಲಾ ಗಣ್ಯರು, ಸಚಿವರು, ಜನಪ್ರತಿನಿಧಿಗಳು, ಸಾರ್ವಜನಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳು ಪಾಲ್ಗೊಳ್ಳಲಿವೆ ಎಂದರು. 

ಜಿಲ್ಲೆಯಾದ್ಯಂತ ರಥಯಾತ್ರೆಯ ಪೂರ್ವಭಾವಿಯಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ದೇಶಭಕ್ತಿ ಸ್ಫರ್ಧೆ, ರಂಗೋಲಿ ಸ್ಪರ್ಧೆ, ಕವನ ರಚನೆ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾ ಗುವುದು ಎಂದರು. 

ರಥಯಾತ್ರೆ ತಂಗುವ ಸ್ಥಳಗಳಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಉಪನ್ಯಾಸ, ಸ್ವಾತಂತ್ರ್ಯ ಹೋರಾಟವನ್ನು ನೆನಪಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಾಕ್ಷ್ಯಚಿತ್ರ ಪ್ರದರ್ಶನ ನಡೆಯಲಿವೆ ಎಂದರು.

ಸಭೆಯಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕಿರಣ್ ಫಡ್ನೇಕರ್, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ತಾಲೂಕುಗಳ ತಹಶೀಲ್ದಾರ್‌ಗಳು, ತಾಪಂ ಕಾರ್ಯ ನಿರ್ವಹಣಾಧಿಕಾರಿಗಳು, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X