ಮನೆ ಮಂಜೂರಾತಿಗೆ ಅರ್ಜಿ ಆಹ್ವಾನ
ಉಡುಪಿ : ಉಡುಪಿ ತಾಲೂಕು ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿಗೆ ಬಸವ ವಸತಿ ಯೋಜನೆ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆಯಡಿ ಹೊಸಮನೆ ನಿರ್ಮಿಸಲು ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಾಮಾನ್ಯ ಹಾಗೂ ಅಲ್ಪಸಂಖ್ಯಾತ ವರ್ಗದ ಸ್ವಂತ ನಿವೇಶನ ಹೊಂದಿದವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮನೆ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಲು ಮೇ ೨೦ ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯತ್ ಕಚೇರಿಯನ್ನು ಸಂಪರ್ಕಿಸುವಂತೆ ಉಡುಪಿ ತಾಪಂ ಕಾರ್ಯನಿರ್ವಹಣಾಧಿ ಕಾರಿಗಳ ಪ್ರಕಟಣೆ ತಿಳಿಸಿದೆ.
Next Story