Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮುಲ್ಕಿಯಲ್ಲಿ ಸರಣಿ ಅಪಘಾತ: ದ್ವಿಚಕ್ರ...

ಮುಲ್ಕಿಯಲ್ಲಿ ಸರಣಿ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ10 May 2022 9:12 PM IST
share
ಮುಲ್ಕಿಯಲ್ಲಿ ಸರಣಿ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು

ಮುಲ್ಕಿ : ಸ್ಕೂಟರ್ ಮತ್ತು ಕಾರುಗಳ ಮಧ್ಯೆ‌‌ ಸರಣಿ ಅಪಘಾತ ನಡೆದು ಸ್ಕೂಟರ್ ‌ಸವಾರ ಸಾವನ್ನಪ್ಪಿರುವ ಘಟನೆ ರಾ.ಹೆದ್ದಾರಿ 66 ರ ಕಾರ್ನಾಡ್‌‌ ಬೈಪಾಸ್ ಬಳಿ‌ ಮಂಗಳವಾರ ನಡೆದಿದೆ

ಅಪಘಾತದಲ್ಲಿ ಮೃತ ಪಟ್ಟ ಸ್ಕೂಟರ್ ಸವಾರನನ್ನು ನಿಡ್ಡೋಡಿ ಮುಚ್ಚೂರು ಬಳಿಯ ನಿವಾಸಿ ಮೋಹನ್ ಗೌಡ (50) ಎಂದು ತಿಳಿದು ಬಂದಿದೆ. ಸಹಸವಾರ ಬಾಲಕ ಚರಣರಾಜ್ ಗಾಯಗೊಂಡಿದ್ದಾರೆ.

ಮೋಹನ್ ಗೌಡ‌ ಅವರು ಚಿತ್ರಾಪು ಶಾಂಭವಿ ನದಿಯಲ್ಲಿ ಮೀನು ಹಿಡಿದು ತನ್ನ ಸ್ಕೂಟರ್ ನಲ್ಲಿ ನಿಡ್ಡೋಡಿಯ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭ ಈ ದುರ್ಘಟನೆ‌‌‌ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಘಟನೆಯ ವಿವರ: ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಈಕೊ ಕಾರು ಕಾರ್ನಾಡ್ ಬೈಪಾಸ್ ಬಳಿ ತಲುಪುತ್ತಿದ್ದಂತೆ ಏಕಾಏಕಿ ಚಿತ್ರಾಪು ಒಳ ರಸ್ತೆಯಿಂದ ಕಾರ್ನಾಡ್ ಒಳಪೇಟೆಗೆ ಹೆದ್ದಾರಿ ದಾಟುತ್ತಿದ್ದ ಸ್ಕೂಟಿಗೆ ಢಿಕ್ಕಿ ಹೊಡೆಯಿತೆನ್ನಲಾಗಿದೆ.‌

ಈ ಸಂದರ್ಭ ಕಾರು ಚಾಲಕ ಅಪಘಾತ ತಪ್ಪಿಸಲು ಯತ್ನಿಸಿದ್ದು, ಆದರೂ ನಿಯಂತ್ರಣ ಕಳೆದುಕೊಂಡು ಸ್ಕೂಟರ್ ಗೆ ಢಿಕ್ಕಿ ಹೊಡೆದು ಬಳಿಕ ಹೆದ್ದಾರಿ ಬದಿ ಹೈವೇ ಪ್ಯಾಟ್ರೋಲಿಂಗ್ ಮಾಡುತ್ತಿದ್ದ ನವಯುಗ ಸಂಸ್ಥೆಯ ವಾಹನಕ್ಕೆ ಢಿಕ್ಕಿ ಹೊಡೆಯಿತು ಎಂದು ತಿಳಿದು ಬಂದಿದೆ. ಈ ವೇಳೆ ಹೈವೇ ಪ್ಯಾಟ್ರೋಲಿಂಗ್ ಮಾಡುತ್ತಿದ್ದ ವಾಹನದಲ್ಲಿದ್ದ ನವಯುಗ ಸಂಸ್ಥೆಯ ನಾಲ್ವರು ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಅಪಘಾತದಿಂದಾಗಿ ಕೆಲಹೊತ್ತು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಮಂಗಳೂರು ಉತ್ತರ ಸಂಚಾರ ಪೊಲೀಸರು ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X