ಪಿಎಸ್ಸೈ ನೇಮಕಾತಿ ಪ್ರಕರಣ: ಮತ್ತೆ ಅಧಿಕಾರಿಗಳು ಸೇರಿ 6 ಜನ ಸೆರೆ

ಬೆಂಗಳೂರು, ಮೇ 10: ಪಿಎಸ್ಸೈ ನೇಮಕಾತಿ ಅಕ್ರಮ ಪ್ರಕರಣ ಸಂಬಂದ ತನಿಖೆ ಮುಂದುವರೆಸಿರುವ ಸಿಐಡಿ, ನೇಮಕಾತಿ ವಿಭಾಗದ ನಾಲ್ವರು ಅಧಿಕಾರಿಗಳು ಸೇರಿದಂತೆ ಆರು ಮಂದಿಯನ್ನು ಬಂಧಿಸಿದ್ದಾರೆ.
ನೇಮಕಾತಿ ವಿಭಾಗದ ಅಧಿಕಾರಿಗಳಾದ ಶ್ರೀನಿವಾಸ್, ಲೋಕೇಶ್, ಶ್ರೀಧರ್, ಹರ್ಷ ಹಾಗೂ ಮಧ್ಯವರ್ತಿಗಳಾದ ಮಂಜುನಾಥ್, ಶರತ್ ಎಂಬುವರು ಬಂಧಿತ ಆರೋಪಿಗಳೆಂದು ಸಿಐಡಿ ಹೇಳಿದೆ.
ಬಂಧಿತರನ್ನು ಇಲ್ಲಿನ 19ನೆ ಎಸಿಎಂಎಂ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ 9 ದಿನಗಳ ಕಾಲ ಸಿಐಡಿ ಕಸ್ಟಡಿ ಪಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿವೊಬ್ಬರು ತಿಳಿಸಿದ್ದಾರೆ.
ಪಿಎಸ್ಸೈ ಪರೀಕ್ಷೆಯ ಬಳಿಕ ಅಭ್ಯರ್ಥಿಗಳು ಬರೆದಿದ್ದ ಓಎಂಆರ್ ಪ್ರತಿಯನ್ನು ಸಿಐಡಿ ಕಚೇರಿಯಲ್ಲಿರುವ ನೇಮಕಾತಿ ವಿಭಾಗದಲ್ಲಿ ಇರಿಸಲಾಗಿತ್ತು. ಈ ವೇಳೆ ಕರ್ತವ್ಯದಲ್ಲಿದ್ದ ಬಂಧಿತ ಅಧಿಕಾರಿಗಳು ಅಕ್ರಮವೆಸಗಿದ್ದು, ಮಧ್ಯವರ್ತಿಗಳೊಂದಿಗೆ ಸಂಪರ್ಕ ಹೊಂದಿರುವ ಗಂಭೀರ ಆರೋಪ ಕೇಳಿಬಂದಿದೆ.
Next Story





