ಗಾಂಜಾ ಸೇವನೆ ಆರೋಪ: ಮೂವರ ಸೆರೆ
ಮಂಗಳೂರು : ಗಾಂಜಾ ಸೇವನೆ ಮಾಡಿದ ಹಿನ್ನೆಲೆಯಲ್ಲಿ ಮೂವರು ಯುವಕರನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಗರದ ಕರಂಗಲ್ಪಾಡಿ ಬಳಿಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸವಾಗಿರುವ ಯುವಕರು ಮಾದಕ ವಸ್ತು ಸೇವಿಸಿ ಅನುಮಾನಸ್ಪದ ರೀತಿಯಲ್ಲಿ ಸುತ್ತಾಡುತ್ತಿರುವ ಬಗ್ಗೆ ಮಂಗಳವಾರ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು.
ಈ ಪೈಕಿ ಕೇರಳದ ಬಿಲಾಲ್ ಅಹ್ಮದ್ (19), ಸನು (21), ಅಮೆನ್ ಅರ್ಶದ್(20) ಗಾಂಜಾ ಸೇವನೆ ಮಾಡಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದ್ದು ಅವರ ವಿರುದ್ಧ ಎನ್‌ಡಿಪಿಎಸ್ ಕಾಯಿದೆಯಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story