ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ | ಸಾಮಾಜಿಕ ನ್ಯಾಯಕ್ಕೆ ಗಂಡಾಂತರ: ಸಿದ್ದರಾಮಯ್ಯ
ಸರ್ವಪಕ್ಷಗಳ ಸಭೆ ಕರೆಯುವಂತೆ ವಿಪಕ್ಷ ನಾಯಕರ ಒತ್ತಾಯ

ಬೆಂಗಳೂರು: 'ಹಿಂದುಳಿದ ಜಾತಿಗಳ ರಾಜಕೀಯ ಮೀಸಲಾತಿಯ ವಿವಾದದ ಇತ್ಯರ್ಥಕ್ಕೆ ಕಾಯದೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕೆಂಬ ನ್ಯಾಯಾಲಯದ ಆದೇಶದಿಂದ ಸಾಮಾಜಿಕ ನ್ಯಾಯಕ್ಕೆ ಗಂಡಾಂತರ ಎದುರಾಗಿದೆ. ಇದರಿಂದ ಹಿಂದುಳಿದ ಜಾತಿಗಳು ರಾಜಕೀಯ ಪ್ರಾತಿನಿಧ್ಯದಿಂದ ವಂಚಿತರಾಗಲಿದ್ದಾರೆ' ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, 'ಸುಪ್ರೀಂ ಕೋರ್ಟ್ ಆದೇಶ ಕರ್ನಾಟಕ ರಾಜ್ಯಕ್ಕೂ ಸಂಬಂಧಿಸಿರುವ ಕಾರಣ ರಾಜ್ಯ ಸರ್ಕಾರ ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಿ ಹಿಂದುಳಿದ ಜಾತಿಗಳಿಗೆ ಆಗಲಿರುವ ಅನ್ಯಾಯವನ್ನು ನ್ಯಾಯಾಲಯದ ಗಮನಕ್ಕೆ ತರಬೇಕು. ಈ ಬಗ್ಗೆ ಮುಂದಿನ ಕ್ರಮದ ಕುರಿತು ಚರ್ಚಿಸಲು ತಕ್ಷಣ ಸರ್ವಪಕ್ಷಗಳ ಸಭೆ ಕರೆಯಬೇಕು' ಎಂದು ಒತ್ತಾಯಿಸಿದ್ದಾರೆ.
'ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಸ್ಥಿತಿ ಭಿನ್ನವಾಗಿದೆ. ಇಲ್ಲಿ ಈಗಾಗಲೇ ರಾಜ್ಯ ಸರ್ಕಾರ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿ ಸಿದ್ಧವಿದೆ. ಇದರ ಆಧಾರದಲ್ಲಿ ಕಡಿಮೆ ಅವಧಿಯಲ್ಲಿ ಹೊಸ ರಾಜಕೀಯ ಮೀಸಲಾತಿಯನ್ನು ರೂಪಿಸಲು ಸಾಧ್ಯವಿದೆ' ಎಂದು ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶ ಕರ್ನಾಟಕ ರಾಜ್ಯಕ್ಕೂ ಸಂಬಂಧಿಸಿರುವ ಕಾರಣ ರಾಜ್ಯ @BJP4Karnataka ಸರ್ಕಾರ ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಿ ಹಿಂದುಳಿದ ಜಾತಿಗಳಿಗೆ ಆಗಲಿರುವ ಅನ್ಯಾಯವನ್ನು ನ್ಯಾಯಾಲಯದ ಗಮನಕ್ಕೆ ತರಬೇಕು. ಈ ಬಗ್ಗೆ ಮುಂದಿನ ಕ್ರಮದ ಕುರಿತು ಚರ್ಚಿಸಲು @CMofKarnataka ತಕ್ಷಣ ಸರ್ವಪಕ್ಷಗಳ ಸಭೆ ಕರೆಯಬೇಕು.
— Siddaramaiah (@siddaramaiah) May 10, 2022
2/3#SocialJustice







