ಉಡುಪಿ: ಮನೆಗೆ ಆಕಸ್ಮಿಕ ಬೆಂಕಿ; ಅಪಾರ ನಷ್ಟ

ಉಡುಪಿ: ಇಂದ್ರಾಳಿ ಬಳಿಯ ಬುಡ್ನಾರ್ ನ ಮುಷ್ತಕ್ ಅಲಿ ಎಂಬವರ ಮನೆಯಲ್ಲಿ ಇಂದು ನಸುಕಿನ ವೇಳೆ ಬೆಂಕಿ ಆಕಸ್ಮಿಕ ಸಂಭವಿಸಿರುವ ಬಗ್ಗೆ ವರದಿಯಾಗಿದೆ.
ಈ ಬಗ್ಗೆ ಕೂಡಲೇ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ಮೂಲಕ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
ಈ ಬೆಂಕಿ ಅವಘಡದಿಂದ ಸುಮಾರು 50 ಸಾವಿರ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
Next Story





