Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಶಬ್ದ ಮಾಲಿನ್ಯ ನಿಯಂತ್ರಣ...

ರಾಜ್ಯದಲ್ಲಿ ಶಬ್ದ ಮಾಲಿನ್ಯ ನಿಯಂತ್ರಣ ಕಾನೂನಿನ ಕಟ್ಟುನಿಟ್ಟಿನ ಜಾರಿಗೆ ಕ್ರಮ: ಸಚಿವ ಆರಗ ಜ್ಞಾನೇಂದ್ರ

''ಯಾವುದೇ ತಾರತಮ್ಯ ಇಲ್ಲದಂತೆ ಕಾನೂನನ್ನು ಜಾರಿಗೊಳಿಸಲಾಗುವುದು''

ವಾರ್ತಾಭಾರತಿವಾರ್ತಾಭಾರತಿ11 May 2022 1:25 PM IST
share
ರಾಜ್ಯದಲ್ಲಿ ಶಬ್ದ ಮಾಲಿನ್ಯ ನಿಯಂತ್ರಣ ಕಾನೂನಿನ ಕಟ್ಟುನಿಟ್ಟಿನ ಜಾರಿಗೆ ಕ್ರಮ: ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು, ಮೇ 11: ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟಿನ ಆದೇಶದಂತೆ, ರಾಜ್ಯದಲ್ಲಿ ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸಲಾಗಿದೆ. ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 6 ಗಂಟೆಯವರೆಗೆ ಯಾವುದೇ ದ್ವನಿವರ್ಧಕ ಗಳ ಉಪಯೋಗಕ್ಕೆ ಅವಕಾಶವಿಲ್ಲ ಎಂದು ಗೃಹ ಸಚಿವ  ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು,  'ಬೇರೆ ಸಮಯದಲ್ಲಿ ದ್ವನಿ ವರ್ಧಕ ಗಳಿಂದ ಉತ್ಪತ್ತಿಯಾಗುವ ಶಬ್ದದ ಪ್ರಮಾಣ ಯಾವ ಸಾಂದ್ರತೆ ಯಲ್ಲಿರಬೇಕು, ಎಂಬುದರ ಬಗ್ಗೆ, ಮಾರ್ಗಸೂಚಿಯಲ್ಲಿ ಹೇಳಲಾಗಿದೆ. ಯಾವ ದರ್ಜೆಯ ಅಧಿಕಾರಿಗಳು, ದ್ವನಿವರ್ಧಕಗಳಿಗೆ ಅನುಮತಿ ನೀಡಬಹುದು ಹಾಗೂ ಕಾನೂನು ಬಾಹಿರವಾಗಿ ಇರುವ ದ್ವನಿವರ್ಧಕಗಳನ್ನು ತೆಗೆದು ಹಾಕಬಹುದು ಎಂಬುದರ ಬಗ್ಗೆಯೂ, ಮಾರ್ಗಸೂಚಿ ಗಳು ಸ್ಪಷ್ಟವಾಗಿ ಉಲ್ಲೇಖಿಸುತ್ತವೆ' ಎಂದು ಹೇಳಿದರು.

'ಕೈಗಾರಿಕಾ ವಲಯ, ವಸತಿ ಪ್ರದೇಶಗಳು, ವಾಣಿಜ್ಯ ವಲಯ ಹಾಗೂ ನಿಶಬ್ದ ವಲಯ ಗಳಲ್ಲಿ ಯಾವ ಪ್ರಮಾಣದಲ್ಲಿ ಶಬ್ದ ಸಾಂದ್ರತೆ ಇರಬಹುದು ಎಂದೂ ಮಾರ್ಗಸೂಚಿ ಯಲ್ಲಿ ಹೇಳಲಾಗಿದೆ. ಖಾಸಗಿ ಪ್ರದೇಶದಲ್ಲಿ ಸಹ ಶಬ್ದ ಪ್ರಮಾಣವನ್ನು ನಿಗದಿ ಪಡಿಸಲಾಗಿದೆ. ಅನುಮತಿ ಇಲ್ಲದೆ ದ್ವನಿವರ್ಧಕ ಗಳನ್ನು ಉಪಯೋಗಿಸುತ್ತಿರುವವರು ಇನ್ನು 15 ದಿನದ ಒಳಗೆ, ಸಂಬಂಧ ಪಟ್ಟ ಸಕ್ಷಮ ಅಧಿಕಾರಿಗಳಿಂದ ಅನುಮತಿ ಪಡೆದುಕೊಳ್ಳಬೇಕು. ಇದಕ್ಕೆ ತಪ್ಪಿದ್ದಲ್ಲಿ, ಸಂಬಂಧ ಪಟ್ಟ ಅಧಿಕಾರಿಗಳು ದ್ವನಿವರ್ಧಕ ಗಳನ್ನು ತೆಗೆಸಿ ಹಾಕುತ್ತಾರೆ. ಇದರಿಂದ ಯಾರಿಗೂ ವಿನಾಯಿತಿ ಇಲ್ಲ' ಎಂದರು.  

ಚರ್ಚುಗಳು, ಮಸೀದಿಗಳು ಹಾಗೂ ದೇವಸ್ಥಾನಗಳನ್ನು ಒಳಗೊಂಡಂತೆ ಯಾವುದೇ ತಾರತಮ್ಯ ಇಲ್ಲದಂತೆ ಕಾನೂನನ್ನು ಜಾರಿಗೊಳಿಸಲಾಗುವುದು. ಶಬ್ದ ಮಾಲಿನ್ಯ ಉಂಟುಮಾಡುವ ಹಾಗೂ ಅನುಮತಿ ಇಲ್ಲದ ದ್ವನಿವರ್ಧಕ ಗಳನ್ನು ತೆಗೆದು ಹಾಕುವ ಪ್ರಕ್ರಿಯೆ ಇಡೀ ರಾಜ್ಯದಲ್ಲಿ ನಡೆಯಲಿದೆ ಎಂದು ತಿಳಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X