Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆ;...

ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆ; ಜನಜೀವನ ಅಸ್ತವ್ಯಸ್ತ

ಅಸಾಮಿ ಚಂಡಮಾರುತದ ಎಫೆಕ್ಟ್

ವಾರ್ತಾಭಾರತಿವಾರ್ತಾಭಾರತಿ11 May 2022 4:32 PM IST
share
ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆ; ಜನಜೀವನ ಅಸ್ತವ್ಯಸ್ತ

ಉಡುಪಿ : ಅಸಾಮಿ ಚಂಡಮಾರುತದ ಪರಿಣಾಮ ಉಡುಪಿ ಜಿಲ್ಲೆಯಾದ್ಯಂತ ಬೆಳಗ್ಗೆಯಿಂದ ಭಾರೀ ಮಳೆಯಾಗಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿರುವ ಬಗ್ಗೆ ವರದಿಯಾಗಿದೆ.

ಮುಂಜಾನೆಯಿಂದ ಮೋಡ ಕವಿದ ವಾತಾವರಣದ ಕಂಡುಬಂದಿದ್ದು, ಬಳಿಕ  ಜಿಟಿಜಿಟಿ ಮಳೆ ಬಿರುಸು ಪಡೆದು ಕೊಂಡಿತು. ಉಡುಪಿ, ಕಾಪು, ಕಾರ್ಕಳ, ಬ್ರಹ್ಮಾವ, ಹೆಬ್ರಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ವಿವಿಧೆಡೆ  ನಿರಂತರವಾಗಿ ಎಡಬಿಡದೇ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ಥ ಗೊಂಡಿದೆ.

ಕೊಲ್ಲೂರು, ಸಿದ್ಧಾಪುರ ಸೇರಿದಂತೆ ಕೆಲವೆಡೆ ವಿಪರೀತ ಮಳೆಯಾಗಿ ರುವ ಬಗ್ಗೆ ವರದಿಯಾಗಿದೆ. ಉಡುಪಿ ನಗರ ಸೇರಿದಂತೆ ಹಲವು ತಗ್ಗು ಪ್ರದೇಶದಲ್ಲಿ ಕೃತಕ ನೆರೆ ಉಂಟಾಗಿ, ಜನ ಪರದಾಡುವಂತಾಗಿದೆ.

ಮಲ್ಪೆ ಬೀಚ್ ಖಾಲಿ ಖಾಲಿ!

ಪ್ರವಾಸಿಗರಿಂದ ತುಂಬಿ ಹೋಗುತ್ತಿದ್ದ ಮಲ್ಪೆ ಬೀಚ್, ಇದೀಗ ಚಂಡ ಮಾರುತದ ಪರಿಣಾಮವಾಗಿ ಸಮುದ್ರ ಪ್ರಕ್ಷುಬ್ಧಗೊಂಡಿರುವುದರಿಂದ ಜನರಿಲ್ಲದೆ ಬೀಕೋ ಎನ್ನುತ್ತಿದೆ.

ಸಮುದ್ರ ಪ್ರಕ್ಷುಬ್ದಗೊಂಡಿರುವುದರಿಂದ ಕಡಲ ಅಬ್ಬರ ಹೆಚ್ಚಾಗಿ ಬೃಹತ್ ಅಲೆಗಳು ತೀರಕ್ಕೆ ಅಪ್ಪಳಿಸುತ್ತಿವೆ. ಅಲ್ಲದೆ ಎರಡು ದಿನಗಳ ಹಿಂದೆ ಜಿಲ್ಲಾಡಳಿತ ಮಲ್ಪೆ ಬೀಚ್‌ನಲ್ಲಿ ವಾಟರ್‌ ಸ್ಪೋರ್ಟ್ಸ್, ಪ್ರವಾಸಿ ಬೋಟು, ಸೈಂಟ್ ಮೇರಿಸ್ ದ್ವೀಪ ಪ್ರವೇಶ ಮತ್ತು ಪ್ರವಾಸಿಗರು ನೀರಿಗೆ ಇಳಿಯದಂತೆ ನಿಷೇಧ ಹೇರಿತ್ತು.

ಅಲ್ಲದೆ ಇಂದು ಬೆಳಗ್ಗೆಯಿಂದ ಭಾರೀ ಮಳೆಯಾಗುತ್ತಿರುವುದರಿಂದ ಬೀಚ್ ಖಾಲಿಯಾಗಿರುವುದು ಕಂಡುಬಂತು. ಈ ಮಧ್ಯೆ ಈಗಾಗಲೇ ಪ್ರವಾಸ ಹೊರಟು ಉಡುಪಿ ತಲುಪಿರುವ ಹೊರ ಜಿಲ್ಲೆ ಹಾಗೂ ರಾಜ್ಯಗಳ ಪ್ರವಾಸಿಗರು ದೂರದಲ್ಲೇ ಬೀಚ್ ವೀಕ್ಷಿಸಿ ವಾಪಾಸ್ಸಾಗುತ್ತಿದ್ದಾರೆ. ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಪ್ರವಾಸ ಬಂದಿರುವ ಪ್ರವಾಸಿಗರಿಗೆ ಮಳೆಯಿಂದ ಸಾಕಷ್ಟು ನಿರಾಸೆ ಆಗಿದೆ.

ಹೆದ್ದಾರಿಯಲ್ಲಿ ಕೃತಕ ನೆರೆ

ಬೆಳಗ್ಗೆಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಕುಂದಾಪುರದ ಕೋಟೇಶ್ವರ, ಕೆ.ಎಸ್.ಆರ್.ಟಿ.ಸಿ ಎದುರು, ಬೀಜಾಡಿ, ಕುಂಭಾಸಿ, ತೆಕ್ಕಟ್ಟೆ, ಕೋಟ ಸಾಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ನಿಂತು ಕೃತಕ ನೆರೆ ಸೃಷ್ಠಿಯಾಗಿದೆ.

ಕೆಲ ದಿನದಿಂದಲೂ ಕೂಡ ಆಗಾಗ್ಗೆ ಮಳೆಯಾಗುತ್ತಿದ್ದು ವಾರ್ಷಿಕ ಮಳೆಗಾಲದ ಋತು ಆಗಮಿಸುತ್ತಿದ್ದರೂ ಕೂಡ ಸಂಬಂಧಪಟ್ಟ ಇಲಾಖೆ ಮಾತ್ರ ರಾಷ್ಟ್ರೀಯ ಹೆದ್ದಾರಿ ಚರಂಡಿ ನಿರ್ವಹಣೆ ವ್ಯವಸ್ಥೆಯಲ್ಲಿ ಬೇಜವಾಬ್ದಾರಿತನ ಪ್ರದರ್ಶನ ಮಾಡುತ್ತಿರುವುದರ ಬಗ್ಗೆ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕುಂದಾಪುರದ ಅಂಕದಕಟ್ಟೆ, ಬಸ್ರೂರು ಮೂರುಕೈ ಬಳಿ, ಕುಂದಾಪುರ- ಬೈಂದೂರು ಸರ್ವೀಸ್ ರಸ್ತೆಯ ವಿವಿದೆಡೆ ಸರ್ವೀಸ್ ರಸ್ತೆಯಲ್ಲಿ ಅವೈಜ್ಞಾನಿಕ ಕಾಮಗಾರಿ ಹಾಗೂ ಚರಂಡಿ ಅವ್ಯವಸ್ಥೆ ಹಿನ್ನೆಲೆ ಮಳೆ ನೀರು ಮೊಣಕಾಲೆತ್ತರ ನಿಂತು ಸುಗಮ ವಾಹನ ಸಂಚಾರಕ್ಕೆ ಅಡ್ಡಿ ಮಾಡಿದೆ.

ಈ ತಿಂಗಳಿನಲ್ಲಿ ಬಹುತೇಕ ಕಡೆಗಳಲ್ಲಿ ಸಾಂಸ್ಕೃತಿಕ, ಮನೋರಂಜನಾ, ಕ್ರೀಡಾ, ಧಾರ್ಮಿಕ ಸೇರಿದಂತೆ ವಿವಿಧ ಶುಭ ಕಾರ್ಯಕ್ರಮಗಗಳು ಈಗಾಗಲೇ ನಿಗದಿಯಾಗಿವೆ. ಆದರೆ ಈ ಅನಿರೀಕ್ಷಿತ ಮಳೆ ಈಗಾಗಲೇ ನಿಗದಿಯಾಗಿರುವ ಶುಭ ಸಮಾರಂಭಗಳಿಗೆ ಅಡ್ಡಿಯಾಗುವ ಆತಂಕ ಎದುರಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X