Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಬ್ಬಿನ ಬಾಕಿ ಕೊಡದಿದ್ದರೆ ಯಾರೇ ಇದ್ದರೂ...

ಕಬ್ಬಿನ ಬಾಕಿ ಕೊಡದಿದ್ದರೆ ಯಾರೇ ಇದ್ದರೂ ಕಾನೂನು ಕ್ರಮ: ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ

ವಾರ್ತಾಭಾರತಿವಾರ್ತಾಭಾರತಿ11 May 2022 9:43 PM IST
share
ಕಬ್ಬಿನ ಬಾಕಿ ಕೊಡದಿದ್ದರೆ ಯಾರೇ ಇದ್ದರೂ ಕಾನೂನು ಕ್ರಮ: ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ

ಬೆಂಗಳೂರು, ಮೇ 11: ‘ಕಬ್ಬು ಬೆಳೆಗಾರರಿಗೆ ಪಾವತಿ ಬಾಕಿ ವಿಚಾರವಾಗಿ ಯಾವುದೇ ರಾಜಿ ಇಲ್ಲ. ಸಕ್ಕರೆ ಕಾರ್ಖಾನೆಗಳ ಮಾಲಕರು ರಾಜಕೀಯ ಪಕ್ಷಗಳಲ್ಲಿ ಇದ್ದರೂ ರೈತರಿಗೆ ಬಾಕಿ ಕೊಡದಿದ್ದರೆ ಅವರ ವಿರುದ್ಧವೂ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು' ಎಂದು ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಸ್ಪಷ್ಟಪಡಿಸಿದ್ದಾರೆ.

ಬುಧವಾರ ವಿಕಾಸಸೌಧದಲ್ಲಿ ಸಕ್ಕರೆ ಕಾರ್ಖಾನೆ ಮಾಲಕರ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರೈತರಿಗೆ ಕಬ್ಬಿನ ಬಾಕಿ ಕೊಡದಿದ್ದರೆ ಎಲ್ಲರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು. ಹಿಂದಿನ ವರ್ಷ ಮನವಿ ಮಾಡಿದ ಹಿನ್ನೆಲೆಯಲ್ಲಿ ರೈತರಿಗೆ ಬಾಕಿ ಹಣ ನೀಡಿದ್ದರು. ಈ ವರ್ಷ ಇನ್ನೂ ಕಬ್ಬು ಕಟಾವು ನಡೆಯುತ್ತಿದ್ದು, 19,626 ಕೋಟಿ ರೂ.ರೈತರಿಗೆ ಕೊಡಿಸಬೇಕಿದ್ದು, ಆ ಪೈಕಿ 18,224 ಕೋಟಿ ರೂ. ಈಗಾಗಲೇ ಪಾವತಿ ಮಾಡಲಾಗಿದೆ' ಎಂದು ವಿವರ ನೀಡಿದರು.

ಸರಕಾರ ಸೂಚನೆ ಕೊಟ್ಟ ನಂತರ 400 ಕೋಟಿ ಕೊಟ್ಟಿದ್ದಾರೆ. ಶೇ. 93 ರಷ್ಟು ಹಣ ನೀಡಿದ್ದಾರೆ. ಬಾಕಿ 7% ಹಣವನ್ನು ಈ ತಿಂಗಳ ಅಂತ್ಯದೊಳಗೆ ನೀಡುವಂತೆ ಸೂಚಿಸಿದ್ದೇವೆ. 1,435 ಕೋಟಿ ಬಾಕಿ ಉಳಿದಿದೆ. ಇಂದಿನ ಸಭೆಯಲ್ಲಿ 200 ಕೋಟಿ ರೂ. ಹಣ ಬಿಡುಗಡೆ ಮಾಡಿದ್ದಾರೆ. ನಾವು ಮುಂಜಾಗ್ರತ ಕ್ರಮವಾಗಿ ಈಗಲೇ ಕ್ರಮ ವಹಿಸಿದ್ದರಿಂದ ರಾಜ್ಯದ ರೈತರು ಬೀದಿಗಿಳಿಯದಂತೆ ನೋಡಿಕೊಳ್ಳಲಾಗಿದೆ ಎಂದರು.

‘ಮೂರು-ನಾಲ್ಕು ಕಾರ್ಖಾನೆಗಳು ಶೇ.100ರಷ್ಟು ಹಣ ಸಂದಾಯ ಮಾಡಿವೆ. ರಾಜ್ಯದಲ್ಲಿ ಎಥೆನಾಲ್ ಉತ್ಪಾದನೆಯನ್ನು 32 ಸಕ್ಕರೆ ಕಾರ್ಖಾನೆಗಳು ಆರಂಭಿಸಿವೆ. ಕೇಂದ್ರದಿಂದ 68 ಘಟಕಗಳು ಅನುಮತಿ ಪಡೆದಿವೆ. ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆಯನ್ನು ಸರಕಾರವೇ ನಡೆಸಲು 50 ಕೋಟಿ ರೂ. ನೀಡಲಾಗಿದೆ. ಮೈಸೂರಿನ ಶ್ರೀರಾಮ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಕಬ್ಬು ಬೆಳೆದ ರೈತರ ಕಬ್ಬು ಮಹಾರಾಷ್ಟ್ರಕ್ಕೆ ಹೋಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು. 

‘ರಾಜಕೀಯ ಪಕ್ಷಗಳ ನಾಯಕರು ಮಾಲಕತ್ವದ ಸಕ್ಕರೆ ಕಾರ್ಖಾನೆಗಳಿವೆ. ಆದರೆ, ನಾವು ಯಾವುದೇ ಮುಲಾಜಿಲ್ಲದೆ ರೈತರಿಗೆ ಹಣ ಪಾವತಿ ಮಾಡಿಸಲು ಪ್ರಯತ್ನ ಮಾಡಲಾಗುತ್ತಿದೆ. ರೈತ ಸಂಘಟನೆಗಳು ಮಾಡುವ ಆರೋಪದ ಬಗ್ಗೆ ಮಾಹಿತಿ ನೀಡಿದರೆ ಸರಕಾರ ಸೂಕ್ತ ಮಾಹಿತಿ ಒದಗಿಸಲಾಗುವುದು. ಯಾವುದೇ ದಾಖಲೆ ಮುಚ್ಚಿಡುವ ಪ್ರಶ್ನೆ ಇಲ್ಲ' ಎಂದು ಅವರು ಸ್ಪಷ್ಪಡಿಸಿದ್ದರು.

‘ಹಿಂದಿನ ವರ್ಷಗಳದ್ದು 11.58 ಕೋಟಿ ರೂ.ಬಾಕಿ ಇದೆ. ಕಾರ್ಖಾನೆ ಮಾಲಕರು ಇಳುವರಿ ಆಧಾರದಲ್ಲಿ ರೈತರಿಗೆ ಹೆಚ್ಚಿನ ಹಣ ಕೊಡಿಸಲು ತಂಡ ರಚನೆ ಮಾಡಲಾಗಿದ್ದು ವರದಿ ಪಡೆಯಲಾಗಿದೆ ಎಂದ ಅವರು, ಸಚಿವ ಮುರುಗೇಶ್ ನಿರಾಣಿ ಅವರ ಕಾರ್ಖಾನೆಯಿಂದಲೂ ಕಬ್ಬು ಬೆಳೆಗಾರರಿಗೆ ಬಾಕಿ ಇದೆ. ಅವರ ಪುತ್ರ ಸಭೆಗೆ ಆಗಮಿಸಿದ್ದರು. 40 ಕೋಟಿ ರೂ. ಬಿಡುಗಡೆ ಮಾಡಿರುವುದಾಗಿ ಹೇಳಿದ್ದಾರೆ. ಮೈಶುಗರ್ ಕಾರ್ಖಾನೆಗೆ 528 ಕೋಟಿ ರೂ.ನೀಡಲಾಗಿದೆ. ಅದರಲ್ಲಿ ಅವ್ಯವಹಾರವಾಗಿದೆ ಎಂಬ ಆರೋಪ ಇದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ' ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X