Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಎಂ ಅಭ್ಯರ್ಥಿ ವಿಚಾರ: ಶಾಸಕ ಝಮೀರ್...

ಸಿಎಂ ಅಭ್ಯರ್ಥಿ ವಿಚಾರ: ಶಾಸಕ ಝಮೀರ್ ಅಹ್ಮದ್ ಹೇಳಿಕೆ ವೈಯಕ್ತಿಕ; ಬಿ.ಕೆ.ಹರಿಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ11 May 2022 10:53 PM IST
share
ಸಿಎಂ ಅಭ್ಯರ್ಥಿ ವಿಚಾರ: ಶಾಸಕ ಝಮೀರ್ ಅಹ್ಮದ್ ಹೇಳಿಕೆ ವೈಯಕ್ತಿಕ; ಬಿ.ಕೆ.ಹರಿಪ್ರಸಾದ್

ಬೆಂಗಳೂರು, ಮೇ 11: ‘ಸಿದ್ದರಾಮಯ್ಯ ಅವರೇ ಮುಂದಿನ ಬಾರಿಯೂ ಮುಖ್ಯಮಂತ್ರಿಯಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ' ಎಂಬ ಚಾಮರಾಜಪೇಟೆ ಕ್ಷೇತ್ರದ ಶಾಸಕ ಝಮೀರ್ ಅಹ್ಮದ್ ಖಾನ್ ಅವರ ಹೇಳಿಕೆ ಅವರ ವೈಯಕ್ತಿಕ ಎಂದು ಮೇಲ್ಮನೆ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಸ್ಪಷ್ಟಣೆ ನೀಡಿದ್ದಾರೆ.

ಬುಧವಾರ ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಾಕ್ ಸ್ವಾತಂತ್ರ್ಯದ ಮೇಲೆ ನಾವು ನಂಬಿಕೆ ಇಟ್ಟಿದ್ದು, ನಮ್ಮ ಪಕ್ಷದಲ್ಲಿ ಗೆದ್ದಿರುವ ಶಾಸಕರು ಜಿಲ್ಲಾ ಉಸ್ತುವಾರಿಗಳಿಗೆ ಮುಖ್ಯಮಂತ್ರಿ ಅಭ್ಯರ್ಥಿಗಳ ಬಗ್ಗೆ ಶಿಫಾರಸ್ಸು ಮಾಡುತ್ತಾರೆ. ನಂತರ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳುತ್ತದೆ. ವೈಯಕ್ತಿಕ ಅಭಿಪ್ರಾಯ ಹೇಳಲು ನಮ್ಮ ಪಕ್ಷದಲ್ಲಿ ಅವಕಾಶವಿದೆ' ಎಂದು ಸ್ಪಷ್ಟಣೆ ನೀಡಿದರು.

‘ಸಿಎಂ ಅಭ್ಯರ್ಥಿ ಯಾರೆಂದು ಅಂತಿಮವಾಗಿ ತೀರ್ಮಾನ ಕೈಗೊಳ್ಳುವವರು ಹೈಕಮಾಂಡ್. ಈ ರೀತಿ ಹೇಳಿಕೆ ಕೊಟ್ಟರೆ ತೊಂದರೆ ಇಲ್ಲ. ಒಬ್ಬರು ಇಂತಹ ಹೇಳಿಕೆ ಕೊಟ್ಟರೆ ಎಲ್ಲ 80 ಜನ ಆ ಹೇಳಿಕೆ ಕೊಡಬೇಕು ಎಂದೇನಿಲ್ಲ. ಅವರು ಮುಖ್ಯಮಂತ್ರಿ ಆಗಬೇಕು ಎಂದು ಹೇಳಿದ್ದಾರೆ ಅಷ್ಟೇ’ ಎಂದು ಹರಿಪ್ರಸಾದ್ ಸ್ಪಷ್ಟಣೆ ನೀಡಿದರು.

‘ರಾಜ್ಯದಲ್ಲಿ ಶೋಷಿತರು, ಹಿಂದುಳಿದವರಿಗೆ ಮೀಸಲಾತಿ ಕೊಡಲು ಪ್ರಾರಂಭಿಸಿದ್ದೇ ನಾವು. ದಲಿತರ ಮೇಲಿನ ದೌರ್ಜನ್ಯ ಪ್ರಕರಣ ಬಗೆಹರಿದಿಲ್ಲ. ಜತೆಗೆ ಸಂವಿಧಾನ ಬದ್ಧವಾಗಿ ಇವರಿಗೆ ಸಿಗಬೇಕಾದ ಸೌಲಭ್ಯಗಳನ್ನು ಬುಡಮೇಲು ಮಾಡುವ ಪ್ರಯತ್ನ ನಡೆಯುತ್ತಿದೆ. ಈ ನಕಲಿ ಪ್ರಮಾಣ ಪತ್ರಗಳನ್ನು ಬಿಜೆಪಿಯ ಮೇಲಿಂದ ಕೆಳಗಿನವರೆಗೂ ಬಹುತೇಕ ಮಂದಿ ಹೊಂದಿದ್ದಾರೆ. ಹೀಗಾಗಿ ಒಬ್ಬ ದಕ್ಷ ಹಾಗೂ ದುರ್ಬಲ ವರ್ಗಕ್ಕೆ ಸೇರಿದ ಅಧಿಕಾರಿ ಕ್ರಮ ತೆಗೆದುಕೊಳ್ಳಲು ಹೋದಾಗ ಅವರನ್ನು ವರ್ಗಾವಣೆ ಮಾಡುವುದು ಸರಿಯಲ್ಲ' ಎಂದು ಆಕ್ಷೇಪಿಸಿದರು.

‘ಮೀಸಲಾತಿ ವಿಚಾರದಲ್ಲಿ ಸಾಮಾಜಿಕ ನ್ಯಾಯ ಸಮಿತಿಯಲ್ಲಿ ನಾನು 10 ವರ್ಷಗಳ ಕಾಲ ಸದಸ್ಯನಾಗಿದ್ದೆ. ನಾವು ಪರಿಶಿಷ್ಟರಿಗೆ ಶೇ.18ರಷ್ಟು ಮೀಸಲಾತಿ ನೀಡಬೇಕಾಗಿದ್ದು, ಇದುವರೆಗೂ ಕೇವಲ ಶೇ.11 ರಷ್ಟು ಮಾತ್ರ ನೀಡಿದ್ದೇವೆ. ಇನ್ನು ಹಿಂದುಳಿದವರಿಗೆ ಶೇ.27ರಷ್ಟು ಇದ್ದು, ಕೊಡಲು ಸಾಧ್ಯವಾಗಿರುವುದು ಶೇ.19ರಷ್ಟು ಮಾತ್ರ. ಹೀಗಾಗಿ ದುರ್ಬಲ ವರ್ಗದವರಿಗೆ ದೌರ್ಜನ್ಯವಾಗುತ್ತಿದ್ದು, ಅದನ್ನು ಸರಿಪಡಿಸಲು ಮುಂದಾದವರಿಗೂ ಅನ್ಯಾಯವಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷ ಧ್ವನಿ ಎತ್ತಿದೆ’ ಎಂದು ಅವರು ತಿಳಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X