Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅನಾಥ ಮಕ್ಕಳಿಗೆ ಶಿಕ್ಷಣದಲ್ಲಿ ಮೀಸಲಾತಿ...

ಅನಾಥ ಮಕ್ಕಳಿಗೆ ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಲು ಸರಕಾರಕ್ಕೆ ಶೀಘ್ರ ವರದಿ: ಕೆ.ಜಯಪ್ರಕಾಶ್ ಹೆಗ್ಡೆ

ವಾರ್ತಾಭಾರತಿವಾರ್ತಾಭಾರತಿ11 May 2022 10:54 PM IST
share
ಅನಾಥ ಮಕ್ಕಳಿಗೆ ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಲು ಸರಕಾರಕ್ಕೆ ಶೀಘ್ರ ವರದಿ: ಕೆ.ಜಯಪ್ರಕಾಶ್ ಹೆಗ್ಡೆ

ಚಿಕ್ಕಮಗಳೂರು, ಮೇ 11: ಅನಾಥ ಮಕ್ಕಳಿಗೆ ಸಾಮಾಜಿಕ ಮತ್ತು ಶೈಕ್ಷಣಿಕ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಅನಾಥ ಮಕ್ಕಳಿಗೆ ಮೀಸಲಾತಿ ಕಲ್ಪಿಸಬೇಕಿದೆ, ಈ ನಿಟ್ಟಿನಲ್ಲಿ ಸರಕಾರಕ್ಕೆ ಮುಂದಿನ 1 ತಿಂಗಳೊಳಗೆ ವರದಿ ಸಲ್ಲಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ.

ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಅನಾಥ ಮಕ್ಕಳಿಗೆ ಬಾಲಮಂದಿರಗಳಲ್ಲಿ ಆಶ್ರಯ ಕಲ್ಪಿಸಲಾಗಿದ್ದು, ಶೈಕ್ಷಣಿಕ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಈ ಅನಾಥ ಮಕ್ಕಳ ಕೀಳರಿಮೆ ಹೋಗಲಾಡಿಸಿ ಇತರ ಮಕ್ಕಳೊಂದಿಗೆ ಸ್ಫರ್ಧೆ ನಡೆಸಲು ಮೀಸಲಾತಿಯಿಂದ ಅನುಕೂಲವಾಗಲಿದೆ. ತಮಿಳುನಾಡು, ತೆಲಂಗಾಣ ಸೇರಿದಂತೆ ಇತರ ರಾಜ್ಯಗಳಲ್ಲಿ ಅನಾಥ ಮಕ್ಕಳಿಗೆ ಮೀಸಲಾತಿ ನೀಡಲಾಗಿದೆ. ಅದರಂತೆ ರಾಜ್ಯದಲ್ಲಿನ ಅನಾಥ ಮಕ್ಕಳಿಗೆ ಮೀಸಲಾತಿ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅನಾಥ ಮಕ್ಕಳ ಸರ್ವೆ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು.

ಮೀಸಲಾತಿ ಪ್ರಮಾಣಪತ್ರ ನೀಡುವ ಸಂದರ್ಭದಲ್ಲಿ ಕೆಲವು ಗೊಂದಲಗಳಿದ್ದು, ಇದನ್ನು ನಿವಾರಿಸುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಗುತ್ತಿದೆ. ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ ಎಂದ ಅವರು, ಜಿಲ್ಲೆಯ ನರಸಿಂಹರಾಜಪುರ ತಾಲೂಕಿನಲ್ಲಿ ಶೈವರೆಡ್ಡಿ ಜನಾಂಗವನ್ನು ಮೀಸಲಾತಿ ಪಟ್ಟಿಗೆ ಸೇರಿಸುವಂತೆ ಮನವಿ ಮಾಡಿಕೊಂಡಿದ್ದಾರೆ, ತರೀಕೆರೆ, ಕಡೂರು, ಮೂಡಿಗೆರೆ ತಾಲೂಕಿನಲ್ಲಿ ಮಡಿ ಒಕ್ಕಲಿಗರು ಮನವಿ ಸಲ್ಲಿಸಿದ್ದು, ಅವರ ಶೈಕ್ಷಣಿಕ ಹಾಗೂ ಸಾಮಾಜಿಕ ಸ್ಥಿತಿಗತಿಗಳನ್ನು ಪರಿಶೀಲಿಸಿ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು. ಸರಕಾರ ಈ ಸಂಬಂಧ ಪರಿಶೀಲಿಸಿ ಅಗತ್ಯ ಕ್ರಮಕೈಗೊಳ್ಳಲಿದೆ ಎಂದರು.

ಪಂಚಮಸಾಲಿ ವೀರಶೈವ ಜನಾಂಗವನ್ನು ಹಿಂದುಳಿದ ವರ್ಗದ 2ಎ ಪಟ್ಟಿಗೆ ಸೇರಿಸುವ ಬೇಡಿಕೆ ಇದೆ. ಈ ಸಂಬಂಧ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಪರಿಶೀಲನೆ ಮತ್ತು ಉಳಿದ ಲಿಂಗಾಯುತ ಸಮುದಾಯದ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ತಿಳಿಸಿದ ಅವರು, ಕೆಲ ಜನಾಂಗದವರಿಗೆ ತಮ್ಮ ಜನಾಂಗ ಮೀಸಲಾತಿ ಪಟ್ಟಿಯಲ್ಲಿದ್ದೇವೆ ಎನ್ನುವುದೇ ಗೊತ್ತಿಲ್ಲ, ಕೆಲವರಿಗೆ ಮೀಸಲಾತಿ ಪಟ್ಟಿಗೆ ಸೇರಿಸಲು ಇರುವ ಮಾನದಂಡಗಳ ಬಗ್ಗೆ ಮಾಹಿತಿಯೇ ಇಲ್ಲ, ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಅಹವಾಲುಗಳನ್ನು ಸ್ವೀಕರಿಸಲಾಗುತ್ತಿದೆ. ಈಗಾಗಲೇ 5ರಿಂದ 6 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದು, ಮುಂದಿನ ದಿನಗಳಲ್ಲಿ ಇತರ ಜಿಲ್ಲೆಗಳಿಗೂ ಭೇಟಿನೀಡಲಾಗುವುದು ಎಂದರು.

ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮಾತನಾಡಿ, ಸಾರ್ವಜನಿಕರಿಂದ ಬಂದ ಮನವಿಗಳನ್ನು ಸ್ವೀಕರಿಸಿ ಸೌಲಭ್ಯ ವಂಚಿತರಾಗಿದ್ದಾರೆಯೇ ಎಂಬ ಬಗ್ಗೆ ಅಧ್ಯಯನ ಮಾಡಿ ಆಯೋಗಕ್ಕೆ ಶಿಫಾರಸು ಮಾಡಲಾಗುವುದು ಎಂದು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರಾದ ಎಚ್.ಎಸ್.ಕಲ್ಯಾಣ ಕುಮಾರ್, ಕೆ.ಟಿ.ಸುವರ್ಣ, ರಾಜಶೇಖರ್, ಅರುಣ್‍ಕುಮಾರ್, ಶಾರದನಾಯ್ಕ್, ಜಿಪಂ ಸಿಇಒ ಜಿ.ಪ್ರಭು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಸೋಮಶೇಖರ್ ಉಪಸ್ಥಿತರಿದ್ದರು. 

ರಾಜ್ಯದಲ್ಲಿ 1123 ಜಾತಿಗಳಿದ್ದು, ಮೀಸಲಾತಿ ಪ್ರಮಾಣ ಪತ್ರದಲ್ಲಿ ಕೆಲವೊಂದು ದೋಷಗಳಿವೆ. ಈ ದೋಷಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಹಿಂದುಳಿದ ವರ್ಗಗಳ ಆಯೋಗ, ಜಿಲ್ಲಾಧಿಕಾರಿ ಕಚೇರಿ ಅಥವಾ ತಹಶೀಲ್ದಾರ್ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

- ಕೆ.ಜಯಪ್ರಕಾಶ್ ಹೆಗ್ಡೆ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X