Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಶ್ರೀಲಂಕಾದಲ್ಲಿ 2 ದಿನದಲ್ಲಿ ಸರಕಾರ...

ಶ್ರೀಲಂಕಾದಲ್ಲಿ 2 ದಿನದಲ್ಲಿ ಸರಕಾರ ರಚನೆಯಾಗದಿದ್ದರೆ ಅರ್ಥವ್ಯವಸ್ಥೆ ಕುಸಿತ: ಸೆಂಟ್ರಲ್ ಬ್ಯಾಂಕ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ11 May 2022 11:25 PM IST
share
ಶ್ರೀಲಂಕಾದಲ್ಲಿ 2 ದಿನದಲ್ಲಿ ಸರಕಾರ ರಚನೆಯಾಗದಿದ್ದರೆ ಅರ್ಥವ್ಯವಸ್ಥೆ ಕುಸಿತ: ಸೆಂಟ್ರಲ್ ಬ್ಯಾಂಕ್ ಎಚ್ಚರಿಕೆ

ಕೊಲಂಬೊ, ಮೇ 11: ರಾಜಕೀಯ ಸ್ಥಿರತೆಗಾಗಿ ದೇಶದಲ್ಲಿ 2 ದಿನದೊಳಗೆ ನೂತನ ಸರಕಾರ ರಚನೆಯಾಗದಿದ್ದರೆ ದೇಶದ ಅರ್ಥವ್ಯವಸ್ಥೆ ಚೇತರಿಸಿಕೊಳ್ಳದ ರೀತಿಯಲ್ಲಿ ಕುಸಿಯಲಿದೆ ಎಂದು ಶ್ರೀಲಂಕಾದ ಸೆಂಟ್ರಲ್ ಬ್ಯಾಂಕ್ನ ಗವರ್ನರ್ ನಂದಲಾಲ್ ವೀರಸಿಂಘೆ ಬುಧವಾರ ಹೇಳಿದ್ದಾರೆ.

ದೇಶದಲ್ಲಿ ತಲೆದೋರಿರುವ ಗುಂಪು ಹಿಂಸಾಚಾರ ಪ್ರಕರಣ ಅರ್ಥವ್ಯವಸ್ಥೆಗೆ ಚೇತರಿಕೆ ನೀಡಲು ಬ್ಯಾಂಕ್ ರೂಪಿಸಿದ ಯೋಜನೆಗಳನ್ನು ಹಳಿತಪ್ಪಿಸಿದೆ, ಪ್ರಧಾನಿಯ ರಾಜೀನಾಮೆ ಮತ್ತು ಬದಲಿ ವ್ಯವಸ್ಥೆ ಮಾಡದಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಜಟಿಲಗೊಳಿಸಿದೆ.ಆರ್ಥಿಕ ಸುಧಾರಣೆ ಕ್ರಮಗಳನ್ನು ಜಾರಿಗೊಳಿಸಲು ರಾಜಕೀಯ ಸ್ಥಿರತೆ ಅಗತ್ಯವಿದೆ. ಸೆಂಟ್ರಲ್ ಬ್ಯಾಂಕ್ನ ಗವರ್ನರ್ ಆಗಿ ಒಂದು ತಿಂಗಳ ಹಿಂದೆ ಅಧಿಕಾರ ಸ್ವೀಕರಿಸಿದಾಗ ದೇಶದ ಅರ್ಥವ್ಯವಸ್ಥೆ ತೀವ್ರಗತಿಯಲ್ಲಿ ಕುಸಿಯುತ್ತಿತ್ತು. ಇದಕ್ಕೆ ಬ್ರೇಕ್ ಹಾಕಲು ಸಾಧ್ಯವಿದೆ ಎಂದು ಭಾವಿಸಿದ್ದೆವು. ಆದರೆ ಸೋಮವಾರದ ಘಟನೆ ಬ್ರೇಕ್ ವ್ಯವಸ್ಥೆಯನ್ನು ಹಾಳುಗೆಡವಿದೆ ಎಂದವರು ಹೇಳಿದ್ದಾರೆ. ಒಂದು ಅಥವಾ 2 ವಾರದೊಳಗೆ ಅರ್ಥವ್ಯವಸ್ಥೆ ಸಂಪೂರ್ಣ ಕುಸಿಯಲಿದೆ.

ಆ ಹಂತದಲ್ಲಿ ಶ್ರೀಲಂಕಾವನ್ನೂ ಯಾರೊಬ್ಬರೂ ರಕ್ಷಿಸಲು ಸಾಧ್ಯವಾಗದು. ಸರಕಾರ ರಚನೆಗೆ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ನಾನು ಹುದ್ದೆಗೆ ರಾಜೀನಾಮೆ ನೀಡುತ್ತೇನೆ ಎಂದು ವೀರಸಿಂಘೆ ಹೇಳಿದ್ದಾರೆ. ಕಳೆದ ತಿಂಗಳು ಸೆಂಟ್ರಲ್ ಬ್ಯಾಂಕ್ಬ ಗವರ್ನರ್ ಆಗಿ ನೇಮಕಗೊಂಡ ತಕ್ಷಣ ಅವರು ಬಡ್ಡಿ ದರವನ್ನು ದ್ವಿಗುಣಗೊಳಿಸಿದ್ದರು ಮತ್ತು ವಾಣಿಜ್ಯ ಬ್ಯಾಂಕ್ಗಳು ವಿದೇಶ ವಿನಿಮಯ ದಾಸ್ತಾನು ಹೆಚ್ಚಿಸಿಕೊಳ್ಳಲು ಯೋಜನೆ ರೂಪಿಸಿದ್ದರು. ರಾಜಕೀಯ ಸ್ಥಿರತೆ ಸಾಧ್ಯವಾಗದಿದ್ದರೆ ಈಗ ಅಲ್ಪಪ್ರಮಾಣದಲ್ಲಿ ಇರುವ ಪೆಟ್ರೋಲ್, ಡೀಸೆಲ್ ದಾಸ್ತಾನು ಬರಿದಾಗಲಿದೆ. ಆಗ ಜನತೆ ಬೀದಿಗಿಳಿದು ಶಾಂತರೀತಿಯಲ್ಲಿ ಅಥವಾ ಹಿಂಸಾತ್ಮಕವಾಗಿ ಪ್ರತಿಭಟನೆ ನಡೆಸಲಿದ್ದಾರೆ ಎಂದವರು ಹೇಳಿದ್ದಾರೆ.

 ಜನಾಂಗೀಯ ಅಸಾಮರಸ್ಯ ಮೂಡಿಸುವ ಪ್ರಯತ್ನ: ಶ್ರೀಲಂಕಾ ಅಧ್ಯಕ್ಷರ ಎಚ್ಚರಿಕೆ 

ದೇಶದಲ್ಲಿ ಜನಾಂಗೀಯ ಮತ್ತು ಧಾರ್ಮಿಕ ಅಸಾಮರಸ್ಯದ ಪರಿಸ್ಥಿತಿ ಹುಟ್ಟುಹಾಕಲು ನಡೆಯುತ್ತಿರುವ ಪ್ರಯತ್ನಗಳನ್ನು ವಿಫಲಗೊಳಿಸುವಂತೆ ಜನತೆಗೆ ಕರೆ ನೀಡಿರುವ ಶ್ರೀಲಂಕಾ ಅಧ್ಯಕ್ಷ ಗೊತಬಯ ರಾಜಪಕ್ಸ, ದೇಶದಲ್ಲಿ ಜಾರಿಗೊಳಿಸಿರುವ ಕರ್ಫ್ಯೂವನ್ನು ಮತ್ತೆ 24 ಗಂಟೆ ವಿಸ್ತರಿಸಿರುವುದಾಗಿ ಘೋಷಿಸಿದ್ದಾರೆ. ದೇಶಕ್ಕೆ ಎದುರಾಗಿರುವ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸವಾಲನ್ನು ಮೀರಿ ನಿಲ್ಲಲು ಎಲ್ಲಾ ಶ್ರೀಲಂಕನ್ನರೂ ಒಗ್ಗೂಡುವ ಸಮಯ ಇದಾಗಿದೆ . ಸಂಯಮ, ಸಹಬಾಳ್ವೆ ಮತ್ತು ಸಹಿಷ್ಣುತೆಯನ್ನು ಉತ್ತೇಜಿಸುವ ಅಗತ್ಯವಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ದೇಶದಾದ್ಯಂತ ಸೋಮವಾರ ಹಿಂಸಾತ್ಮಕ ಘರ್ಷಣೆ ಭುಗಿಲೆದ್ದ ಹಿನ್ನೆಲೆಯಲ್ಲಿ ದೇಶದಾದ್ಯಂತ ಬುಧವಾರದವರೆಗೆ (ಮೇ 11) ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಇದೀಗ ಇದನ್ನು ಮತ್ತೆ 24 ಗಂಟೆ ವಿಸ್ತರಿಸಲಾಗಿದೆ ಎಂದು ಅಧ್ಯಕ್ಷರ ಹೇಳಿಕೆ ತಿಳಿಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X