ಕೈಗಾರಿಕಾ ಅಭಿವೃದ್ಧಿಗೆ ಲ್ಯಾಂಡ್ ಬ್ಯಾಂಕ್ ಯೋಜನೆ : ಸಚಿವ ಮುರುಗೇಶ್ ನಿರಾಣಿ
ʼಉದ್ಯಮಿಯಾಗು, ಉದ್ಯೋಗ ನೀಡು ಕಾರ್ಯಕ್ರಮʼ

ಮಂಗಳೂರು: ಕೈಗಾರಿಕಾ ಅಭಿವೃದ್ಧಿಗೆ ರಾಜ್ಯದಲ್ಲಿ 50 ಸಾವಿರ ಎಕರೆ ಭೂಮಿಯನ್ನು ಬಳಸಲು ಲ್ಯಾಂಡ್ ಬ್ಯಾಂಕ್ ಯೋಜನೆಯನ್ನು ರೂಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಡಾ. ಮುರುಗೇಶ್ ಆರ್ ನಿರಾಣಿ ತಿಳಿಸಿದ್ದಾರೆ.
ನಗರದ ಟಿಎಂಎ ಪೈ ಇಂಟರ್ ನ್ಯಾಷನಲ್ ಕನ್ವೆನ್ಷನ್ ಸೆಂಟರ್ ನಲ್ಲಿಂದು ಕೈಗಾರಿಕಾ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಉದ್ಯಮಿಯಾಗು, ಉದ್ಯೋಗ ನೀಡು ಕಾರ್ಯಕ್ರಮಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಡಾ. ಮುರುಗೇಶ್ ಆರ್ ನಿರಾಣಿ ಅವರು ಚಾಲನೆ ನೀಡಿ ಮಾತನಾಡುತ್ತಿದ್ದರು.
ರಾಜ್ಯದ ಬೆಂಗಳೂರು ನಗರ ಸೇರಿದಂತೆ ಉಳಿದ ಜಿಲ್ಲೆಗಳಲ್ಲೂ ಲ್ಯಾಂಡ್ ಬ್ಯಾಂಕ್ ಯೋಜನೆಗೆ ಲಭ್ಯವಿರುವ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗುವುದು ಎಂದು ನಿರಾಣಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಹೆದ್ದಾರಿ, ಬಂದರು, ವಿಮಾನ ನಿಲ್ದಾಣ ಸೇರಿದಂತೆ ಕೈಗಾರಿಕಾ ಬೆಳವಣಿಗೆಗೆ ಪೂರಕವಾದ ಮೂಲ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲು ಸರಕಾರ ಯೋಜನೆ ಗಳನ್ನು ಕಾರ್ಯ ಗತಗೊಳಿಸುತ್ತಿದೆ. ಕರಾವಳಿ ಯಲ್ಲಿ ಕೈಗಾರಿಕಾ ಅಭಿವೃದ್ಧಿ ಗೆ ಮತ್ತು ಉದ್ಯೋಗ ದಾತರಾಗಲು ವಿಪುಲ ಅವಕಾಶ ವಿದೆ ಎಂದು ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ವೇದಿಕೆಯಲ್ಲಿ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್, ಕೆಐಡಿಬಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎನ್. ಶಿವಶಂಕರ್ ಸೇರಿದಂತೆ ಹಿರಿಯ ಅಧಿಕಾರಿಗಳು, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.