Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಪ್ತಿ ಮಾಡಲಾದ 5,551 ಕೋ.ರೂ....

ಜಪ್ತಿ ಮಾಡಲಾದ 5,551 ಕೋ.ರೂ. ಷರತ್ತುಬದ್ಧ ಬಳಕೆಗೆ ಶಿಯೋಮಿಗೆ ಕರ್ನಾಟಕ ಹೈಕೋರ್ಟ್ ಅವಕಾಶ

ವಾರ್ತಾಭಾರತಿವಾರ್ತಾಭಾರತಿ12 May 2022 10:11 PM IST
share
ಜಪ್ತಿ ಮಾಡಲಾದ 5,551 ಕೋ.ರೂ. ಷರತ್ತುಬದ್ಧ ಬಳಕೆಗೆ ಶಿಯೋಮಿಗೆ ಕರ್ನಾಟಕ ಹೈಕೋರ್ಟ್ ಅವಕಾಶ

ಬೆಂಗಳೂರು,ಮೇ 12: ಚೀನಿ ಸ್ಮಾರ್ಟ್‌ ಫೋನ್ ಕಂಪನಿ ಶಿಯೋಮಿಯ ಬ್ಯಾಂಕ್ ಖಾತೆಗಳಲ್ಲಿರುವ 5,551.27 ಕೋ.ರೂ.ಗಳನ್ನು ಮರುಸ್ತಂಭನಗೊಳಿಸಲು ಕರ್ನಾಟಕ ಉಚ್ಚ ನ್ಯಾಯಾಲಯವು ಗುರುವಾರ ನಿರಾಕರಿಸಿದೆ.

 ಹೊರದೇಶಗಳಿಗೆ ಅಕ್ರಮ ಹಣ ರವಾನೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಈ.ಡಿ.)ವು ಈ ತಿಂಗಳ ಆರಂಭದಲ್ಲಿ ಶಿಯೋಮಿಯ ಬ್ಯಾಂಕ್ ಖಾತೆಗಳನ್ನು ಸ್ತಂಭನಗೊಳಿಸಿತ್ತು. ಆದರೆ ಇದನ್ನು ಪ್ರಶ್ನಿಸಿ ಶಿಯೋಮಿ ಮೇಲ್ಮನವಿಯನ್ನು ಸಲ್ಲಿಸಿದ ಬಳಿಕ ಕರ್ನಾಟಕ ಉಚ್ಚ ನ್ಯಾಯಾಲಯವು ಸ್ತಂಭನಕ್ಕೆ ತಡೆಯಾಜ್ಞೆಯನ್ನು ನೀಡಿತ್ತು. ಈ.ಡಿ.ಬಲವಂತದಿಂದ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ ಮತ್ತು ವಿದೇಶಿ ವಿನಿಮಯ ಉಲ್ಲಂಘನೆಗಳ ಆರೋಪಗಳ ಸಲ್ಲಿಕೆ ‘ನಂತರದ ಚಿಂತನೆ ’ಯಾಗಿದೆ ಎಂದು ಶಿಯೋಮಿ ಆರೋಪಿಸಿತ್ತು. ಸ್ತಂಭನಕ್ಕೆ ತಡೆಯಾಜ್ಞೆ ನೀಡಿರುವ ಮತ್ತು ರಾಯಧನೇತರ ಪಾವತಿಗಳಿಗಾಗಿ ಖಾತೆಗಳಿಂದ ಹಣವನ್ನು ಹಿಂದೆಗೆದುಕೊಳ್ಳಲು ಶಿಯೋಮಿಗೆ ಅವಕಾಶ ನೀಡಿರುವ ತನ್ನ ಆದೇಶವು ಮುಂದುವರಿಯುತ್ತದೆ ಎಂದು ಉಚ್ಚ ನ್ಯಾಯಾಲಯವು ಗುರುವಾರ ಹೇಳಿದೆ.

ಈ ವಿಷಯದಲ್ಲಿ ಇನ್ನಷ್ಟು ವಿಚಾರಣೆಯ ಅಗತ್ಯವಿದೆ ಎಂದು ಹೇಳಿದ ನ್ಯಾ.ಸಿದ್ದಪ್ಪ ಸುನಿಲ ದತ್ ಯಾದವ ಅವರು ಮುಂದಿನ ವಿಚಾರಣೆಯನ್ನು ಮೇ 23ಕ್ಕೆ ನಿಗದಿಗೊಳಿಸಿದರು.

ರಾಯಧನ ಪಾವತಿಯನ್ನು ಹೊರತುಪಡಿಸಿ ಇತರ ಉದ್ದೇಶಗಳಿಗೂ ಹಣವನ್ನು ಹಿಂದೆಗೆದುಕೊಳ್ಳಲು ಬ್ಯಾಂಕುಗಳು ಅವಕಾಶ ನೀಡುತ್ತಿಲ್ಲ ಎಂದು ಶಿಯೋಮಿ ದೂರಿಕೊಂಡಾಗ,ಬ್ಯಾಂಕ್ ಓವರ್‌ಡ್ರಾಫ್ಟ್ ಸೌಲಭ್ಯವನ್ನು ಬಳಸಿಕೊಳ್ಳಲು ನ್ಯಾಯಾಲಯವು ಅದಕ್ಕೆ ಅನುಮತಿ ನೀಡಿತು.
ರಾಯಧನದ ಸೋಗಿನಲ್ಲಿ ಮೂರು ವಿದೇಶಿ ಕಂಪನಿಗಳಿಗೆ ಹಣವನ್ನು ರವಾನಿಸುತ್ತಿದ್ದ ಆರೋಪದಲ್ಲಿ ಶಿಯೋಮಿ ಕಳೆದ ನಾಲ್ಕು ತಿಂಗಳುಗಳಿಂದ ಈ.ಡಿ.ಯ ತನಿಖೆಗೊಳಪಟ್ಟಿದೆ.‌

share
ವಾರ್ತಾಭಾರತಿ
ವಾರ್ತಾಭಾರತಿ
Next Story
X