ಮತಾಂತರ ನಿಷೇಧ ಸುಗ್ರೀವಾಜ್ಞೆ | ರಾಜ್ಯಪಾಲರು ತಿರಸ್ಕರಿಸಬೇಕು: ಆರ್ಚ್ ಬಿಷಪ್ ಡಾ.ಪೀಟರ್ ಮಚಾದೋ

ಬೆಂಗಳೂರು: ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವ ಪ್ರಸ್ತಾವಕ್ಕೆ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿರುವುದು ಖಂಡನೀಯ ಎಂದು ಬೆಂಗಳೂರು ಆರ್ಚ್ ಬಿಷಪ್ ಡಾ.ಪೀಟರ್ ಮಚಾದೋ ಹೇಳಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಯಾವುದೇ ರೀತಿಯ ಮತಾಂತರ ಚಟುವಟಿಕೆಗಳು, ಕಾನೂನು ಬಾಹಿರ ಕೃತ್ಯಗಳು ವರದಿಯಾಗಿಲ್ಲ. ಹೀಗಿದ್ದರೂ, ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಮಸೂದೆಗೆ ಒಪ್ಪಿಗೆ ನೀಡಿದ್ದು, ಇದನ್ನು ಘನತೆವೆತ್ತ ರಾಜ್ಯಪಾಲರು ಅಂಕಿತ ಹಾಕದೆ ತಿರಸ್ಕರಿಸಬೇಕು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





