Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಧಾರ್ಮಿಕ ಭಾವನೆ ಕೆರಳಿಸಿ ಜನರ ಗಮನ...

ಧಾರ್ಮಿಕ ಭಾವನೆ ಕೆರಳಿಸಿ ಜನರ ಗಮನ ಬೇರೆಡೆ ಸೆಳೆಯಲು ಮತಾಂತರ ನಿಷೇಧ ಕಾಯ್ದೆ ಜಾರಿ: ಸಿದ್ದರಾಮಯ್ಯ ಆರೋಪ

ವಾರ್ತಾಭಾರತಿವಾರ್ತಾಭಾರತಿ13 May 2022 10:45 AM IST
share
ಧಾರ್ಮಿಕ ಭಾವನೆ ಕೆರಳಿಸಿ ಜನರ ಗಮನ ಬೇರೆಡೆ ಸೆಳೆಯಲು ಮತಾಂತರ ನಿಷೇಧ ಕಾಯ್ದೆ ಜಾರಿ: ಸಿದ್ದರಾಮಯ್ಯ ಆರೋಪ

ಬೆಂಗಳೂರು, ಮೇ 13: ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ನಿತ್ಯ ಬೆತ್ತಲೆ ಆಗುತ್ತಿರುವ ರಾಜ್ಯದ ಬಿಜೆಪಿ ಸರಕಾರ ಧಾರ್ಮಿಕ ಭಾವನೆ ಕೆರಳಿಸಿ ಜನರ ಗಮನ ಬೇರೆಡೆ ಸೆಳೆಯುವ ದುರುದ್ದೇಶದಿಂದ ಸುಗ್ರೀವಾಜ್ಞೆ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ ಜಾರಿಗೊಳಿಸಲು ಹೊರಟಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ರಾಜ್ಯ ಸರಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಹೊರಟಿರುವ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ ಬಗ್ಗೆ ವಿರೋಧ ಪಕ್ಷದ ನಾಯಕ ಪತ್ರಿಕಾ ಹೇಳಿಕೆ ಮೂಲಕ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಅಲ್ಪಸಂಖ್ಯಾತ ಸಮುದಾಯವನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶದ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ ಜಾರಿಯ ಸುಗ್ರೀವಾಜ್ಞೆಯನ್ನು ತಿರಸ್ಕರಿಸಬೇಕೆಂದು ರಾಜ್ಯದ ಘನತೆವೆತ್ತ ರಾಜ್ಯಪಾಲರಿಗೆ ಮನವಿ ಮಾಡುತ್ತಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಆಮಿಷ, ಒತ್ತಡ, ಬೆದರಿಕೆಗಳ ಮೂಲಕ ನಡೆಯುವ ಬಲಾತ್ಕಾರದ ಮತಾಂತರಗಳನ್ನು ತಡೆಯಲು ನಮ್ಮ ಕಾನೂನು ಸಶಕ್ತವಾಗಿದೆ. ಹೀಗಿದ್ದಾಗ ಹೊಸ ಕಾಯ್ದೆಯ ಅವಶ್ಯಕತೆ ಏನಿದೆ? ಅಲ್ಪಸಂಖ್ಯಾತರನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶವಲ್ಲದೆ ಈ ಕಾಯ್ದೆಗೆ ಬೇರೆ ಸದುದ್ದೇಶಗಳೇನಿದೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸಹಬಾಳ್ವೆ-ಸೌಹಾರ್ದಾ ಪರಂಪರೆಯ ಹಿಂದೂ ಧರ್ಮದ ನೈಜ ಅನುಯಾಯಿಗಳು ಯಾರೂ ಇಂತಹದ್ದೊಂದು ಅನಗತ್ಯ ಕಾಯ್ದೆಗೆ ಒತ್ತಾಯಿಸಿಲ್ಲ, ಇದನ್ನು ಒಪ್ಪುವುದೂ ಇಲ್ಲ. ಇದು ಸಂಘ ಪರಿವಾರದ ರಾಜಕೀಯ ಹಿಂದುತ್ವದ ಅಜೆಂಡಾ ಆಗಿದೆ. ಇದನ್ನು ಸಹೃದಯ ಹಿಂದು ಬಾಂಧವರೆಲ್ಲರೂ ಖಂಡಿಸಬೇಕು ಎಂದು ಅವರು ಹೇಳಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬಂದಾಗೆಲ್ಲ ಅಲ್ಪಸಂಖ್ಯಾತರು ಮತ್ತು ಅವರ ಪೂಜಾಸ್ಥಳಗಳ ಮೇಲೆ ದಾಳಿ ನಡೆಯವುದಕ್ಕೆ ದೇಶ ಸಾಕ್ಷಿಯಾಗಿದೆ. ಕರ್ನಾಟಕದಲ್ಲಿ ಚರ್ಚ್ ಗಳ ಮೇಲೆ ನಡೆದಿರುವ ದಾಳಿಯಿಂದ ರಾಜ್ಯದ ಜನತೆ ತಲೆತಗ್ಗಿಸುವಂತಾಗಿದೆ. ತರಾತುರಿಯ ಮತಾಂತರ ನಿಷೇಧ ಕಾಯ್ದೆ ಇಂತಹ ದಾಳಿಗೆ ದುಷ್ಕರ್ಮಿಗಳ ಕೈಗೆ ನೀಡುವ ಆಯುಧವೇ ಬೊಮ್ಮಾಯಿಯವರೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸ್ವಇಚ್ಛೆಯಿಂದ ಮತಾಂತರಗೊಳ್ಳುವ ಹಕ್ಕು ಸಂವಿಧಾನವೇ ನೀಡಿದೆ. ಇದರ ಹೊರತಾದ ಮತಾಂತರ ತಡೆಯಲು ಕಾನೂನು ಇದೆ. ಇರುವ ಕಾನೂನನ್ನು ಜಾರಿಗೆ ತರುವ ಪೊಲೀಸ್ ಇಲಾಖೆ ಮತ್ತು ತಪ್ಪು-ಒಪ್ಪುಗಳ ನ್ಯಾಯ ಒದಗಿಸುವ ನ್ಯಾಯಾಂಗದ ಮೇಲೆ ರಾಜ್ಯ ಸರಕಾರಕ್ಕೆ ನಂಬಿಕೆ ಇಲ್ಲವೇ? ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ ಕಾಯ್ದೆಯ ದುರುಪಯೋಗವನ್ನು ತಡೆಯಲು ಕಾಂಗ್ರೆಸ್ ಪಕ್ಷ ಖಂಡಿತ ಅವಕಾಶ ನೀಡುವುದಿಲ್ಲ. ಅನ್ಯಾಯ-ದೌರ್ಜನ್ಯಕ್ಕೊಳಗಾಗುವ ಪ್ರತಿಯೊಬ್ಬ ಅಲ್ಪಸಂಖ್ಯಾತ ಬಂಧುವಿನ ಜೊತೆ ನಮ್ಮ ಪಕ್ಷ ನಿಲ್ಲಲಿದ್ದು ಈ ಕಾಯ್ದೆಯ ವಿರುದ್ದ ನಮ್ಮ ಪಕ್ಷ ಜನಾಂದೋಲನ ನಡೆಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X