ಎಸ್ ಸಿಡಿಸಿಸಿ ಬ್ಯಾಂಕ್ ವತಿಯಿಂದ ಕೆ.ಪಿ.ಸುಚರಿತ ಶೆಟ್ಟಿಗೆ ಸನ್ಮಾನ

ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡಿರುವ ಕೆ.ಪಿ. ಸುಚರಿತ ಶೆಟ್ಟಿ ಅವರನ್ನು ಎಸ್ ಸಿಡಿಸಿಸಿ ಬ್ಯಾಂಕ್ ವತಿಯಿಂದ ಗುರುವಾರ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಸನ್ಮಾನಿಸಿದರು.
ನೂತನ ಅಧ್ಯಕ್ಷರಿಗೆ ಶುಭ ಕೋರಿದ ರಾಜೇಂದ್ರ ಕುಮಾರ್ ಅವರು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಸಹಕಾರಿ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದೆ. ಈ ಪರಂಪರೆಯನ್ನು ನೂತನ ಅಧ್ಯಕ್ಷರಾದ ಕೆ.ಪಿ.ಸುಚರಿತ ಶೆಟ್ಟಿ ಅವರು ಮುಂದುವರಿಸಿಕೊಂಡು ಸಂಸ್ಥೆಯ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.
ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕರುಗಳಾದ ಭಾಸ್ಕರ್ ಎಸ್.ಕೋಟ್ಯಾನ್, ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್ ರೈ ಬಾಲ್ಯೋಟ್ಟು, ಎಸ್.ಬಿ.ಜಯರಾಮ ರೈ, ಸ್ಕ್ಯಾಡ್ಸ್ ಅಧ್ಯಕ್ಷರಾದ ರವೀಂದ್ರ ಕಂಬಳಿ, ಕೆಎಂಎಫ್ ನಿರ್ದೇಶಕರುಗಳಾದ ಕಾಪು ದಿವಾಕರ್ ಶೆಟ್ಟಿ , ಸುಧಾಕರ್ ಶೆಟ್ಟಿ , ಹಾಗೂ ಮೇಘರಾಜ್ ಜೈನ್ , ಸುನಿಲ್ ಕುಮಾರ್ ಬಜಗೋಳಿ , ಜಯಪ್ರಕಾಶ್ ಮೊದಲಾದವರು ಉಪಸ್ಥಿತರಿದ್ದರು.





