ಗ್ರಾಪಂ ಉಪ ಚುನಾವಣೆ: ಮದ್ಯ ಮಾರಾಟ ನಿಷೇಧ
ಉಡುಪಿ : ಉಡುಪಿ ತಾಲೂಕು ಅಲೆವೂರು ಗ್ರಾಪಂ ಉಪ ಚುನಾವಣೆಗೆ ಸಂಬಂಧಿಸಿದಂತೆ, ಮೇ 20ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಮೇ 18ರ ಸಂಜೆ ೫ರಿಂದ ಮೇ ೨೦ರ ಸಂಜೆ ೫ರವರೆಗೆ ಅಲೆವೂರು ಗ್ರಾಪಂ ವ್ಯಾಪ್ತಿಯ ಎಲ್ಲಾ ರೀತಿಯ ಮದ್ಯದಂಗಡಿ, ಮದ್ಯ ಮಾರಾಟ ಡಿಪೋ, ಮಧ್ಯ ತಯಾರಿಕಾ ಡಿಸ್ಟಿಲರಿಗಳನ್ನು, ಸ್ಟಾರ್ ಹೋಟೆಲ್‌ಗಳನ್ನು, ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶಿಸಿ, ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.
Next Story