ಮೇ 17ಕ್ಕೆ ಉಚಿತ ಆರೋಗ್ಯ ತಪಾಸಣಾ ಶಿಬಿರ
ಉಡುಪಿ : ಕಾರ್ಮಿಕ ಇಲಾಖೆ, ಆದರ್ಶ ಆಸ್ಪತ್ರೆ ಉಡುಪಿ ಮತ್ತು ಕಡೆಕಾರು ಹಾಗೂ ಅಂಬಲಪಾಡಿ ಗ್ರಾಮ ಪಂಚಾಯತ್‌ಗಳ ಸಹಯೋಗ ದೊಂದಿಗೆ ಕಡೆಕಾರು ಹಾಗೂ ಅಂಬಲಪಾಡಿ ಗ್ರಾಪಂ ವ್ಯಾಪ್ತಿಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರು ಮತ್ತು ಅವರ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಮೇ ೧೭ರಂದು ಬೆಳಗ್ಗೆ ೧೦ರಿಂದ ಸಂಜೆ ೬ ರವರೆಗೆ ಕಡೆಕಾರು ಗ್ರಾಪಂ ಸಭಾಭವನದಲ್ಲಿ ನಡೆಯಲಿದೆ.
ಕಾರ್ಮಿಕರು ಆಧಾರ್ ಕಾರ್ಡ್, ರೇಶನ್ ಕಾರ್ಡ್ ಹಾಗೂ ಕಟ್ಟಡ ಕಾರ್ಮಿಕರ ಗುರುತಿನ ಚೀಟಿಯೊಂದಿಗೆ ಶಿಬಿರದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಕಡೆಕಾರು ಗ್ರಾಪಂ ಪಿಡಿಓ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story