Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರಿನಲ್ಲಿ ಕಾಂಗ್ರೆಸ್, ಜೆಡಿಎಸ್...

ಮೈಸೂರಿನಲ್ಲಿ ಕಾಂಗ್ರೆಸ್, ಜೆಡಿಎಸ್ ಘಟಾನುಘಟಿ ನಾಯಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ: ಸಚಿವ ಸೋಮಶೇಖರ್

ವಾರ್ತಾಭಾರತಿವಾರ್ತಾಭಾರತಿ14 May 2022 11:44 AM IST
share
ಮೈಸೂರಿನಲ್ಲಿ ಕಾಂಗ್ರೆಸ್, ಜೆಡಿಎಸ್ ಘಟಾನುಘಟಿ ನಾಯಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ: ಸಚಿವ ಸೋಮಶೇಖರ್

ಮೈಸೂರು, ಮೇ 14: ಮೈಸೂರು, ಹಳೆ ಮೈಸೂರು ಭಾಗದ ಘಟಾನುಘಟಿ ನಾಯಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಇದರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡು ಪಕ್ಷದವರೂ ಇದ್ದಾರೆ. ಸದ್ಯಕ್ಕೆ ಹೆಸರು ಬಹಿರಂಗಪಡಿಸುವಂತಿಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೈಸೂರು ಭಾಗದ ಅನ್ಯ ಪಕ್ಷದವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದರು.

ಪಕ್ಷ ಸೇರ್ಪಡೆ ಕುರಿತು ಚರ್ಚೆಯಾಗುತ್ತಿದೆ. ಅಂತಿಮವಾಗಿ ಪಕ್ಷದ ಅಧ್ಯಕ್ಷರು ತೀರ್ಮಾನ ಮಾಡಲಿದ್ದಾರೆ. ಮೊದಲ ಬ್ಯಾಚ್ ನಲ್ಲಿ ಐದಾರು ಮಂದಿ ಪಕ್ಷಕ್ಕೆ ಸೇರಿದ್ದಾರೆ. ಈಗ ಎರಡನೇ ಬ್ಯಾಚ್ ರೆಡಿಯಾಗುತ್ತಿದೆ. ವಿವಿಧ ಹಂತಗಳಲ್ಲಿ ಚರ್ಚೆ ನಡೆಯುತ್ತಿದ್ದು, ಗ್ರೀನ್ ಸಿಗ್ನಲ್ ಸಿಕ್ಕ ಬಳಿಕ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿದರು.

 ಮೈಸೂರು, ಹಳೆ ಮೈಸೂರು ಭಾಗದ ಐದಾರು ಮಂದಿ ಯಾವುದೇ ಷರತ್ತು ಇಲ್ಲದೇ ಸೇರುತ್ತಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ನ ಎರಡು ಪಕ್ಷದವರೂ ಇದ್ದಾರೆ ಎಂದು ಸೋಮಶೇಖರ್ ಹೇಳಿದರು.

ಕಾಂಗ್ರೆಸ್ ನಲ್ಲಿ ಆಂತರಿಕ ಬಿಕ್ಕಟ್ಟು ಉಂಟಾಗಿದೆ. ಎಐಸಿಸಿ ನಾಯಕತ್ವ ದುರ್ಬಲ ಆಗುತ್ತಿದ್ದಂತೆ ಇಲ್ಲಿ ಎಲ್ಲರೂ ನಾಯಕರು ಆಗಲು ಹೊರಟಿದ್ದಾರೆ. ಪರಿಸ್ಥಿತಿ ಇನ್ನೂ ವಿಕೋಪಕ್ಕೆ ಹೋಗಿ ಕಾಂಗ್ರೆಸ್ ಪಕ್ಷ ಇಬ್ಭಾಗವಾಗಲಿದೆ ಎಂದರು.

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ವರ್ಸಸ್ ಡಿಕೆ ಶಿವಕುಮಾರ್ ಎಂಬುದೊಂದೇ ಅಲ್ಲ, ಅಲ್ಲಿ ನಾಲ್ಕು ಗುಂಪು ಇದೆ. ಒಬ್ಬರಿಗೊಬ್ಬರು ಸೇರುವುದಿಲ್ಲ. ಸಿಕ್ಕಾಗ ಕಾಟಾಚಾರಕ್ಕೆ ನಗ್ತಾರೆ. ಕೆಪಿಸಿಸಿ ಅಧ್ಯಕ್ಷರು, ವಿರೋಧ ಪಕ್ಷದ ನಾಯಕರು ಒಟ್ಟಾಗಿ ಹೋಗುವ ಯಾವ ಮುನ್ಸೂಚನೆ ಇಲ್ಲ ಎಂದು ಹೇಳಿದರು.

ಮುಖ್ಯಮಂತ್ರಿ ದುರ್ಬಲ ಇಲ್ಲ. ಎಲ್ಲರಿಗೂ ಅನುಕೂಲ ಆಗುವ ರೀತಿಯಲ್ಲಿ ಸಂಪುಟದಲ್ಲಿ ಸಾಧಕಬಾಧಕ ಕುರಿತು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಅಸ್ತಿತ್ವ ಉಳಿಸಿಕೊಳ್ಳಲು ಇಲ್ಲಸಲ್ಲದ ಮಾತಾಡ್ತಾರೆ. ನಾನು ಇದ್ದೀನಿ ಎಂದು ತೋರಿಸಿಕೊಳ್ಳಲಷ್ಟೇ ಮಾತನಾಡುತ್ತಾರೆ ಎಂದರು.

ಜಿಟಿ ದೇವೇಗೌಡರು ಅವರ ಕ್ಷೇತ್ರದಲ್ಲಿನ ಕೆಲವು ಕಾರ್ಯಕ್ರಮಗಳ ಉದ್ಘಾಟನೆಗೆ ಆಹ್ವಾನಿಸಲು ಆಗಮಿಸಿದ್ದರು. ಆದರೆ ನೀತಿ ಸಂಹಿತೆ ಇರುವುದರಿಂದ ಸದ್ಯಕ್ಕೆ ಸಾಧ್ಯವಿಲ್ಲ ಎಂದು ಹೇಳಲಾಯಿತು. ಸ್ವಕ್ಷೇತ್ರದ ಜಿಲ್ಲೆಯ ಉಸ್ತುವಾರಿ ಕೊಡಬಾರದು ಎಂದು ಮೈಸೂರು ಜಿಲ್ಲೆ ಕೊಟ್ಟಿದ್ದಾರೆ ಎಂದು ಹೇಳಿದರು.

ಮೈಸೂರು ಜಿಲ್ಲೆಯಲ್ಲಿ ವಿಧಾನಪರಿಷತ್ ಚುನಾವಣೆ ಪ್ರಚಾರ ಆರಂಭಿಸಲಾಗಿದೆ. ಶುಕ್ರವಾರ ಹುಣಸೂರು ಭಾಗದಲ್ಲಿ ಇಂದು ಹೆಚ್.ಡಿ.ಕೋಟೆ ಭಾಗದಲ್ಲಿ ಚುನಾವಣೆ ಪ್ರಚಾರ ಕೈಗೊಳ್ಳಲಾಗಿದೆ. ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X