ಐಪಿಎಲ್ ಬೆಟ್ಟಿಂಗ್ ಜಾಲ ಪಾಕ್‌ನಿಂದ ಮಾಹಿತಿ ಪಡೆದುಕೊಂಡಿದೆ: ಸಿಬಿಐ

ಹೊಸದಿಲ್ಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್) ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ಜಾಲವು ಪಾಕಿಸ್ತಾನದಿಂದ ಪಡೆದ ಮಾಹಿತಿಯ ಆಧಾರದ ಮೇಲೆ 2019 ರಲ್ಲಿ ನಡೆದ ಪಂದ್ಯಗಳ ಮೇಲೆ ಪ್ರಭಾವ ಬೀರಿದೆ ಎಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಶನಿವಾರ ತಿಳಿಸಿದೆ.
ಈ ವಿಚಾರದ ಕುರಿತು ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಸಿಬಿಐ ತಿಳಿಸಿದೆ.
"ಪಾಕಿಸ್ತಾನದಿಂದ ಪಡೆದ ಮಾಹಿತಿಗಳ ಆಧಾರದ ಮೇಲೆ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳ ಫಲಿತಾಂಶದ ಮೇಲೆ ೀ ಈ ಜಾಲ ಪ್ರಭಾವ ಬೀರುತ್ತಿದೆ. ಐಪಿಎಲ್ ಪಂದ್ಯಗಳಿಗೆ ಸಂಬಂಧಿಸಿದ ಬೆಟ್ಟಿಂಗ್‌ನ ಸೋಗಿನಲ್ಲಿ ಅವರು ಸಾರ್ವಜನಿಕರನ್ನು ಬೆಟ್ಟಿಂಗ್‌ಗೆ ಪ್ರೇರೇಪಿಸುವ ಮೂಲಕ ಮೋಸ ಮಾಡುತ್ತಿದ್ದಾರೆ" ಎಂದು ಸಿಬಿಐ ಹೇಳಿದೆ.
ಬೆಟ್ಟಿಂಗ್ ಉದ್ದೇಶಗಳಿಗಾಗಿ ಈ ಜಾಲವು ಅಪರಿಚಿತ ಬ್ಯಾಂಕ್ ಅಧಿಕಾರಿಗಳೊಂದಿಗೆ ಶಾಮೀಲಾಗಿ ನಕಲಿ ಐಡಿಗಳನ್ನು ಬಳಸಿಕೊಂಡು ಬ್ಯಾಂಕ್ ಖಾತೆಗಳನ್ನು ತೆರೆದಿದೆ ಎಂದು ಕೇಂದ್ರೀಯ ಸಂಸ್ಥೆ ತಿಳಿಸಿದೆ.
Next Story





