Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ:...

ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ: ಆರೋಪಿ ನಾಗೇಶ್ ಬಂಧನಕ್ಕೆ ಪೊಲೀಸರ ಕಾರ್ಯಾಚರಣೆ ಹೇಗಿತ್ತು?

ವಾರ್ತಾಭಾರತಿವಾರ್ತಾಭಾರತಿ14 May 2022 5:27 PM IST
share
ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ: ಆರೋಪಿ ನಾಗೇಶ್ ಬಂಧನಕ್ಕೆ ಪೊಲೀಸರ ಕಾರ್ಯಾಚರಣೆ ಹೇಗಿತ್ತು?

ಬೆಂಗಳೂರು, ಮೇ 14: ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿ ನಾಗೇಶ್ ಬಾಬು, ಆಶ್ರಮವೊಂದರಲ್ಲಿ ಖಾವಿ ಬಟ್ಟೆ ತೊಟ್ಟು ಪರಿಪೂರ್ಣ ಸ್ವಾಮೀಜಿ ಆಗಿದ್ದ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದರು.

ಶನಿವಾರ ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಆ್ಯಸಿಡ್ ದಾಳಿ ನಡೆಸಿದ ಬೆನ್ನಲ್ಲೇ ಆರೋಪಿ ನಾಗೇಶ್, ತನ್ನ ಸ್ನೇಹಿತ ಹಾಗೂ ಅಣ್ಣನಿಗೆ ಕರೆ ಮಾಡಿ ವಿಷಯ ಮುಟ್ಟಿಸಿದ್ದ. ಆನಂತರ, ಅವರು ಪೊಲೀಸರಿಗೆ ಶರಣಾಗುವಂತೆ ಸೂಚಿಸಿದರು. ಇದನ್ನು ಲೆಕ್ಕಿಸದೆ, ನೇರವಾಗಿ ನ್ಯಾಯಾಲಯಕ್ಕೆ ಹೋಗಿ ಕೆಲ ವಕೀಲರನ್ನು ಸಂಪರ್ಕಿಸಿದ್ದ ಎಂದರು.

ಅವರು ಸಹ ಪೊಲೀಸರಿಗೆ ವಿಷಯ ತಿಳಿಸುವಂತೆ ಹೇಳಿದಾಗ, ಅಲ್ಲಿಂದ ತಪ್ಪಿಸಿಕೊಂಡು ಆತ್ಮಹತ್ಯೆಗೆ ಮುಂದಾಗಿದ್ದಾನೆ. ಆದರೆ, ಆ ಯೋಜನೆ ಕೈಬಿಟ್ಟು ಅಲ್ಲಿಂದ ನೇರವಾಗಿ ತಮಿಳುನಾಡಿನ ತಿರುವಣ್ಣಾಮಲೈ ಆಶ್ರಮಕ್ಕೆ ಹೋಗಿ ಖಾವಿ ಬಟ್ಟೆ ತೊಟ್ಟು ಸ್ವಾಮೀಜಿಯಂತೆ ಧ್ಯಾನದಲ್ಲಿ ಮಗ್ನನಾಗಿದ್ದ ಎಂದರು.

ಆರೋಪಿ ಸೆರೆಗೆ ಎಲ್ಲ ಕಡೆಗಳಲ್ಲಿ ಅವನ ಚಿತ್ರಗಳನ್ನು ಆಂಟಿಸಲಾಗಿತ್ತು. ಅದರಂತೆಯೇ ತಿರುವಣ್ಣಾಮಲೈ ಆಶ್ರಮದಲ್ಲಿದ್ದ ಕಾರಣ ಅದನ್ನು ಗಮನಿಸಿದ ಸಾರ್ವಜನಿಕರು ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಅವರು ನೀಡಿದ ಮಾಹಿತಿ ಹಾಗೂ ಚಿತ್ರದ ಆಧಾರದಲ್ಲಿ ತಕ್ಷಣ ಸಮೀಪದಲ್ಲಿಯೇ ಇದ್ದ ಪೊಲೀಸರು ಸ್ಥಳಕ್ಕೆ ತೆರಳಿ ನೋಡಿದಾಗ ಅವನನ್ನು ಆರೋಪಿ ನಾಗೇಶ್ ಎಂದು ಖಚಿತಪಡಿಸಿಕೊಂಡು ಆತನನ್ನು ಬಂಧಿಸಿದ್ದಾರೆ ಎಂದು ತಿಳಿಸಿದರು.

ಕಳೆದ ಏಳು ವರ್ಷಗಳ ಹಿಂದೆ ಇಬ್ಬರು ಒಂದೇ ಕಟ್ಟಡದಲ್ಲಿ ವಾಸವಾಗಿದ್ದು, ಪ್ರೀತಿಸುವುದಾಗಿ ಯುವತಿಯನ್ನು ಪೀಡಿಸುತ್ತಿದ್ದ. ಆ ವಿಷಯವನ್ನು ಯುವತಿ ಮನೆಯವರೆಗೆ ತಿಳಿಸಿದಾಗ ಅವರು ಅವನನ್ನು ಅಲ್ಲಿಂದ ಹೊರ ಹೋಗುವಂತೆ ಒತ್ತಾಯಿಸಿದರು. ಆನಂತರವೂ ಸ್ನೇಹಿತನ ಸಹಾಯದಿಂದ ಆಕೆಯನ್ನು ಹಿಂಬಾಲಿಸುತ್ತಲೇ ಇದ್ದ. 

ಕಳೆದ ಸ್ವಲ್ಪ ದಿನಗಳ ಹಿಂದೆ ಸಂತ್ರಸ್ತೆಯ ಅಕ್ಕನಿಗೆ ಮದುವೆ ನಿಶ್ಚಯವಾಗಿದ್ದು, ಈಕೆಗೂ ಮದುವೆ ಮಾಡುವ ಯೋಚನೆ ಮಾಡುತ್ತಿದ್ದಾರೆ ಎನ್ನುವ ವಿಷಯ ತಿಳಿದು ಮತ್ತೊಂದು ಬಾರಿ ಅವಳನ್ನು ಒಪ್ಪಿಸಲು ಪ್ರಯತ್ನಿಸಿದ್ದಾನೆ. ಅದಕ್ಕೆ ಆಕೆ ನಿರಾಕರಿಸಿದಾಗ ಈ ರೀತಿಯ ಕೃತ್ಯ ಎಸಗಿದ್ದಾನೆ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಗೊತ್ತಾಗಿದೆ ಎಂದು ಅವರು ವಿವರಿಸಿದರು.

ಎರಡು ವರ್ಷಗಳ ಹಿಂದೆಯೇ ಆರೋಪಿ ನಾಗೇಶ್ ಆಕೆಯ ಮೇಲೆ ಆ್ಯಸಿಡ್ ದಾಳಿ ನಡೆಸಲು ಯೋಚಿಸಿದ್ದು, ಕಾರಣಾಂತರಗಳಿಂದ ಅದನ್ನು ಕೈಬಿಟ್ಟಿದ್ದ. ಆದರೆ, ಈ ಬಾರಿ ಪೂರ್ವ ನಿಯೋಜಿಸಿಕೊಂಡಂತೆ, ಮೂರು ತಿಂಗಳ ಹಿಂದೆ ಊರಿನಲ್ಲಿದ್ದ ಜಮೀನನ್ನು ಮಾರಿ ಬೆಂಗಳೂರಿನಲ್ಲಿ ಒಂದು ಕಾರ್ಖಾನೆ ತೆರೆದಿದ್ದ. ಆದರೆ, ಎ.15ರಂದು ಆ ಕಾರ್ಖಾನೆಯ ಯಂತ್ರಗಳನ್ನು ಮಾರಾಟ ಮಾಡಿ ಹಣ ಪಡೆದಿದ್ದ. 

ಅದರೊಂದಿಗೆ ಒಂದು ಪ್ರಿಂಟ್ ಮಾಡುವ ಕಂಪೆನಿಗೆ ಸೇರಿಕೊಂಡಿದ್ದು, ಅದರ ಲೆಟರ್ ಹೆಡ್ ಅಡಿಯಲ್ಲಿ ಸೆಲ್ಫರಿಕ್ ಆ್ಯಸಿಡ್ ಅನ್ನು ಖರೀದಿಸಿದ್ದ. ನಂತರ ಎ.28ರಂದು ತನ್ನ ಯೋಜನೆಯನ್ನು ಕಾರ್ಯರೂಪಕ್ಕೆ ತಂದಿದ್ದಾನೆ ಎನ್ನುವ ಮಾಹಿತಿಯೂ ಬೆಳಕಿಗೆ ಬಂದಿದೆ ಎಂದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಪಶ್ಚಿಮ ವಿಭಾಗದ ಡಿಸಿಪಿ ಡಾ.ಸಂಜೀವ್ ಪಾಟೀಲ್ ಸೇರಿದಂತೆ ಪ್ರಮುಖರಿದ್ದರು.

ಈ ಒಂದು ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಲು ಕಳೆದ 15 ದಿನಗಳಿಂದ ಸುಮಾರು ನೂರಕ್ಕೂ ಹೆಚ್ಚು ಪೊಲೀಸರು ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಅಲ್ಲದೇ 50 ಮಂದಿ ಪೊಲೀಸ್ ಅಧಿಕಾರಿಗಳು ಎಲ್ಲೆಡೆ ಓಡಾಡುವ ಮೂಲಕ ಹಾಗೂ ತನಿಖೆಯ ಸಂಪೂರ್ಣ ಹುಡುಕಾಟವನ್ನು ಮಾಡಲು ಸತತವಾಗಿ ಕೆಲಸ ಮಾಡುತ್ತಿದ್ದರು. ಅವರ ಪರಿಶ್ರಮಕ್ಕೆ 5 ಲಕ್ಷ ರೂ.ಗಳನ್ನೂ ಅಭಿನಂದನೆಯ ರೂಪದಲ್ಲಿ ನೀಡಲಾಗುತ್ತದೆ ಎಂದು ಕಮಲ್ ಪಂತ್ ಘೋಷಿಸಿದರು.

ಶೀಘ್ರದಲ್ಲೇ ಚಾರ್ಜ್‍ಶೀಟ್

ಯುವತಿಯ ಮೇಲೆ ಆ್ಯಸಿಡ್ ದಾಳಿ ನಡೆಸಿದ ಆರೋಪಿ ನಾಗೇಶ್ ಮೇಲೆ ಎಂಟು ದಿನಗಳ ಒಳಗೆ ಚಾರ್ಜ್‍ಶೀಟ್ ಹಾಕಲಾಗುವುದು. ಆದಷ್ಟು ಬೇಗ ಯುವತಿಗೆ ನ್ಯಾಯ ದೊರಕಿಸುವ ಕೆಲಸ ಮಾಡಲಾಗುವುದೆಂದು ಕಮಲ್ ಪಂತ್ ವಿಶ್ವಾಸ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X