ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಆಡಳಿತಾಧಿಕಾರಿಗೆ ಬೀಳ್ಕೊಡುಗೆ

ಮಂಗಳೂರು : ಫಾದರ್ ಮುಲ್ಲರ್ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಲ್ಲಿ 14 ವರ್ಷ ಸೇವೆಯನ್ನು ಸಲ್ಲಿಸಿದ್ದ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಆಡಳಿತಾಧಿಕಾರಿ ಫಾ.ರುಡಾಲ್ಫ್ ರವಿ ಡೇಸಾ ಅವರನ್ನು ಶುಕ್ರವಾರ ಬೀಳ್ಕೊಡಲಾಯಿತು.
ಅಜಿತ್ ಬಿ. ಮೆನೆಜಸ್ ಸ್ವಾಗತಿಸಿದರು. ಆಡಳಿತಾಧಿಕಾರಿಗಳ ಕೃತಿಗಳನ್ನು ಒಳಗೊಂಡ ಗೌರವ ಪ್ರಶಸ್ತಿಯನ್ನು ವೈದ್ಯಕೀಯ ಅಧೀಕ್ಷಕ ಡಾ. ಉದಯಕುಮಾರ್ ವಾಚಿಸಿದರು. ಮಾನವ ಸಂಪನ್ಮೂಲ ವ್ಯವಸ್ಥಾಪಕಿ ಜ್ಯೋತಿ ವಂದಿಸಿದರು. ಸಂಪರ್ಕಾಧಿಕಾರಿ ಡಾ. ಕೆಲ್ವಿನ್ ಪೀಟರ್ ಪಾಯಸ್ ಕಾರ್ಯಕ್ರಮ ನಿರೂಪಿಸಿದರು.
Next Story





