Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಳೆ ಸಮೀಕ್ಷೆ ಸಕಾಲದಲ್ಲಿ ಪ್ರಾರಂಭಿಸಿ...

ಬೆಳೆ ಸಮೀಕ್ಷೆ ಸಕಾಲದಲ್ಲಿ ಪ್ರಾರಂಭಿಸಿ ಪೂರ್ಣಗೊಳಿಸಬೇಕು: ಸಚಿವ ಬಿ.ಸಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ14 May 2022 8:27 PM IST
share
ಬೆಳೆ ಸಮೀಕ್ಷೆ ಸಕಾಲದಲ್ಲಿ ಪ್ರಾರಂಭಿಸಿ ಪೂರ್ಣಗೊಳಿಸಬೇಕು: ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು, ಮೇ 14: ‘ಪೂರ್ವ ಮುಂಗಾರು, ಮುಂಗಾರು, ಹಿಂಗಾರು ಮತ್ತು ಬೇಸಿಗೆ ಹಂಗಾಮುಗಳಲ್ಲಿ ನಿಗದಿಪಡಿಸಿದ ಅವಧಿಯೊಳಗೆ ಬೆಳೆ ಸಮೀಕ್ಷೆಯನ್ನು ಸಕಾಲದಲ್ಲಿ ಪ್ರಾರಂಭಿಸಿ ಪೂರ್ಣಗೊಳಿಸಬೇಕು. ಬೆಳೆ ಸಮೀಕ್ಷೆಯನ್ನು 30 ದಿನಗಳಲ್ಲಿ ಹಾಗೂ ಮೇಲ್ವಿಚಾರಣೆಯನ್ನು 15 ದಿನಗಳಲ್ಲಿ ಪೂರ್ಣಗೊಳಿಸಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚನೆ ನೀಡಿದ್ದಾರೆ.

ಶನಿವಾರ ಇಲ್ಲಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಇಲಾಖೆಯಿಂದ ಏರ್ಪಡಿಸಿದ್ದ 2022-23ನೆ ಸಾಲಿನ ಮುಂಗಾರು ಹಂಗಾಮಿನ 2ನೆ ದಿನದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ರೈತರಿಂದ ಸಲ್ಲಿಕೆಯಾಗುವ ಬೆಳೆ ಸಮೀಕ್ಷೆಗೆ ಸಂಬಂಧಿಸಿದ ಆಕ್ಷೇಪಣೆಗಳಿಗೆ ಒಂದು ದಿನಾಂಕವನ್ನು ನಿಗದಿಪಡಿಸಲು ಹಾಗೂ ಮುಕ್ತಾಯಗೊಳಿಸಬೇಕು ಎಂದರು.

‘ಬೆಳೆ ಸಮೀಕ್ಷೆಯ ನಿಖರವಾದ ಮಾಹಿತಿಯನ್ನು ಸಕಾಲದಲ್ಲಿ ಭೂಮಿ ಕೋಶಕ್ಕೆ ಒದಗಿಸಿದಲ್ಲಿ ಪಹಣಿಗಳಲ್ಲಿ ಬೆಳೆಯ ವಿವರಗಳನ್ನು ಆಗಿಂದಾಗ್ಗೆ ಕಾಲೋಚಿತಗೊಳಿಸುವ ಮತ್ತು ಪಹಣಿಗಳಲ್ಲಿ ಮುಂಗಾರು, ಹಿಂಗಾರು ಮತ್ತು ಬೇಸಿಗೆ ಹಂಗಾಮುಗಳ ಜೊತೆಗೆ ಪೂರ್ವ ಮುಂಗಾರಿನ ಬೆಳೆಗಳ ವಿವರಗಳನ್ನು ನಮೂದಿಸಲು ಅವಕಾಶ ಕಲ್ಪಿಸಿಕೊಡುವ ಕುರಿತು ಚರ್ಚಿಸಲಾಯಿತು ಎಂದರು.

‘ಪ್ರಮುಖ ಕಾರ್ಯಕ್ರಮಗಳಾದ ಬೆಳೆ ವಿಮೆ, ಬೆಂಬಲ ಬೆಲೆ, ಬೆಳೆ ನಷ್ಟ ಪರಿಹಾರ ಮತ್ತು ಇತರೆ ಕಾರ್ಯಕ್ರಮಗಳನ್ನು ಸಕಾಲದಲ್ಲಿ ಅನುಷ್ಠಾನಗೊಳಿಸಲು ಮಾಹಿತಿಯು ಪ್ರಮುಖವಾಗಿರುವುದರಿಂದ ಕಡ್ಡಾಯವಾಗಿ ನಿಗದಿಪಡಿಸಿದ ದಿನಾಂಕಗಳಂದು ಎಲ್ಲ ಚಟುವಟಿಕೆಗಳನ್ನು ಪೂರ್ಣಗೊಳಿಸಬೇಕು. ಬೆಳೆ ಸಮೀಕ್ಷೆಯ ರೈತರ ಮತ್ತು ಖಾಸಗಿ ನಿವಾಸಿ ಆಪ್‍ಗಳಲ್ಲಿ ಗುಣಮಟ್ಟವನ್ನು ಉತ್ತಮಪಡಿಸಲು ಯಾವುದಾದರೂ ಬದಲಾವಣೆಗಳು ಅವಶ್ಯಕತೆಯಿದ್ದಲ್ಲಿ ಚರ್ಚಿಸಿ ಮಾರ್ಪಾಡು ಮಾಡಲು ನಿರ್ಧರಿಸಲಾಯಿತು ಎಂದು ಹೇಳಿದರು.

‘ಬಹುವಾರ್ಷಿಕ ಬೆಳೆಗಳ ಸಮೀಕ್ಷೆಯನ್ನು ಕನಿಷ್ಠ ಮೂರು ವರ್ಷಗಳಿಗೆ ಒಂದು ಬಾರಿ ನಡೆಸುವ ಮೂಲಕ ಸಮೀಕ್ಷೆಯ ಒತ್ತಡವನ್ನು ಹಾಗೂ ಸರಕಾರಕ್ಕೆ ಆರ್ಥಿಕ ಹೊರೆಯನ್ನು ತಗ್ಗಿಸಲು ನಿರ್ಧರಿಸಲಾಯಿತು. ಬೆಳೆ ಸಮೀಕ್ಷೆ ಅಡಿ ರೈತರ ತಾಕುಗಳಲ್ಲಿ ಸಂಗ್ರಹಿಸುವ ಬೆಳೆ ವಿವರಗಳಿಗೆ ಸಂಬಂಧಿಸಿದಂತೆ ರೈತರಿಗೆ ಸೂಕ್ತ ಸಂದೇಶಗಳನ್ನು ರವಾನಿಸಲು ಹಾಗೂ ಐವಿಆರ್‍ಎಸ್ ವ್ಯವಸ್ಥೆಯಡಿ ರೈತರಿಗೆ ಮೊಬೈಲ್ ಕರೆಗಳನ್ನು ಮಾಡುವ ಮೂಲಕ ಬೆಳೆ ಸಮೀಕ್ಷೆಯ ಗುಣಮಟ್ಟವನ್ನು ಹೆಚ್ಚಿಸಿ ರೈತರನ್ನು ಸ್ವಾವಲಂಬಿಗಳನ್ನಾಗಿಸುವುದು ಸಮೀಕ್ಷೆ ಉದ್ದೇಶವಾಗಿದ್ದು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವುದು ಸೂಕ್ತವೆಂದು ತೀರ್ಮಾನಿಸಲಾಯಿತು.

ಬೆಳೆ ಸಮೀಕ್ಷೆಯ ರೈತರ ಆ್ಯಪ್ ಕುರಿತು ಗ್ರಾಮ, ಗ್ರಾ.ಪಂ., ಹೋಬಳಿ, ತಾಲೂಕು, ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ಹೆಚ್ಚಿನ ಪ್ರಚಾರ ಮತ್ತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಸಮೀಕ್ಷೆ ಉತ್ತಮಪಡಿಸುವ ನಿಟ್ಟಿನಲ್ಲಿ ಯಾವುದೇ ಸಲಹೆ/ಸಮಸ್ಯೆಗಳಿದ್ದಲ್ಲಿ ಕೇಂದ್ರ ಕಚೇರಿಯ ಅಥವಾ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಹಂಚಿಕೊಳ್ಳಲು ತಿಳಿಸಲಾಯಿತು.

ಕೃಷಿ ಇಲಾಖೆ ಕಾರ್ಯದರ್ಶಿ ಶಿವಯೋಗಿ ಕಳಸದ, ಭೂಮಿ ಉಸ್ತುವಾರಿ ಕೋಶದ ವಿಶೇಷ ಅಧಿಕಾರಿ ನವೀನ್ ಕುಮಾರ್, ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಜಂಟಿ ನಿರ್ದೇಶಕ ಪರಪ್ಪಸ್ವಾಮಿ ಸೇರಿದಂತೆ ಹಿರಿಯ ಅಧಿಕಾರಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X