Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರಾಜ್ಯದಲ್ಲಿ 250 ಕೋಟಿ ರೂ. ವೆಚ್ಚದಲ್ಲಿ...

ರಾಜ್ಯದಲ್ಲಿ 250 ಕೋಟಿ ರೂ. ವೆಚ್ಚದಲ್ಲಿ ದೀನದಯಾಳ್ ಉಪಾಧ್ಯಾಯ ಹಾಸ್ಟೆಲ್‌ಗಳ ನಿರ್ಮಾಣ: ಸಚಿವ ಕೋಟ

ವಾರ್ತಾಭಾರತಿವಾರ್ತಾಭಾರತಿ14 May 2022 10:37 PM IST
share
ರಾಜ್ಯದಲ್ಲಿ 250 ಕೋಟಿ ರೂ. ವೆಚ್ಚದಲ್ಲಿ ದೀನದಯಾಳ್ ಉಪಾಧ್ಯಾಯ ಹಾಸ್ಟೆಲ್‌ಗಳ ನಿರ್ಮಾಣ: ಸಚಿವ ಕೋಟ

ಉಡುಪಿ : ರಾಜ್ಯದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಭ್ಯದ ಕೊರತೆ ಉಂಟಾಗದಂತೆ  ರಾಜ್ಯದ ವಿವಿಧ ಭಾಗಗಳಲ್ಲಿ 1000 ವಿದ್ಯಾರ್ಥಿಗಳ ಸಾಮರ್ಥ್ಯದ, ತಲಾ 50 ಕೋಟಿ ರೂ ವೆಚ್ಚದಲ್ಲಿ ಐದು ದೀನ ದಯಾಳ್ ಉಪಾಧ್ಯಾಯ ವಿದ್ಯಾರ್ಥಿನಿಲಯಗಳನ್ನು ನಿರ್ಮಾಣ ಮಾಡಲಾಗುವುದು ಎಂದು  ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗ ಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಶನಿವಾರ ಮಣಿಪಾಲದಲ್ಲಿ 4.24 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಶ್ರೀಮತಿ ಇಂದಿರಾ ಗಾಂಧಿ ಮೆಟ್ರಿಕ್ ನಂತರದ ನರ್ಸಿಂಗ್ ವಿದ್ಯಾರ್ಥಿನಿ ನಿಲಯವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ, ಪ.ಜಾತಿ ಮತ್ತು ಪ.ವರ್ಗ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ  ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳಿಗೆ ಒಂದೇ ವಿದ್ಯಾರ್ಥಿ ನಿಲಯದಲ್ಲಿ ವಸತಿ ಸೌಲಭ್ಯ ಒದಗಿಸಲು ದೀನ ದಯಾಳ್ ಉಪಾದ್ಯಾಯ ಹಾಸ್ಟೆಲ್‌ಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು,  ರಾಜ್ಯದ 5 ಕಡೆಗಳಲ್ಲಿ ಈ ಹಾಸ್ಟೆಲ್‌ಗಳ ನಿರ್ಮಾಣಕ್ಕೆ 250 ಕೋಟಿ ರೂ ವೆಚ್ಚವಾಗಲಿದೆ ಎಂದರು.

ವಿದ್ಯಾರ್ಥಿ ನಿಲಯಗಳಿಗೆ ಪ್ರತಿವರ್ಷ ಬೇಡಿಕೆ ಹೆಚ್ಚುತ್ತಿದ್ದು, ಈ ಬಾರಿ 3.5 ಕೋಟಿ ರೂ ವೆಚ್ಚದಲ್ಲಿ ರಾಜ್ಯದಲ್ಲಿ 50 ಕನಕದಾಸ ಹಾಸ್ಟೆಲ್‌ಗಳ ನಿರ್ಮಾಣ ಮಾಡಲಿದ್ದು, ಪ.ಜಾತಿ ಮತ್ತು ಪಂಗಡದವರಿಗಾಗಿ  ಡಾ.ಬಿ.ಆರ್. ಅಂಬೇಡ್ಕರ್ ಹೆಸರಿನಲ್ಲಿ 100 ವಸತಿ ಶಾಲೆಗಳನ್ನು ನಿರ್ಮಾಣ ಮಾಡಲಾಗುವುದು. ಕರಾವಳಿ ಜಿಲ್ಲೆಗಳಲ್ಲಿ ನಾರಾಯಣಗುರುಗಳ ಹೆಸರಿನಲ್ಲಿ, ಉಡುಪಿ, ಉತ್ತರ ಕನ್ನಡ, ದ.ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ 29 ಕೋಟಿ ರೂ ವೆಚ್ಚದಲ್ಲಿ ವಸತಿ ಶಾಲೆ ನಿರ್ಮಾಣ ಮಾಡಲಾಗುವುದು ಎಂದರು.

ರಾಜ್ಯದ ವಿದ್ಯಾರ್ಥಿನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ 5 ಕೋಟಿ ರೂ ವೆಚ್ಚದಲ್ಲಿ ಇಂಗ್ಲಿಷ್ ಸ್ಪೀಕಿಂಗ್ ಕೋರ್ಸ್ ಈ ವರ್ಷದಿಂದ ಆರಂಭಿಸಲಾಗುತ್ತಿದೆ. 6ನೇ ತರಗತಿ ಮೇಲ್ಪಟ್ಟ ವಿದ್ಯಾರ್ಥಿನಿಯರಿಗೆ ಆತ್ಮ ರಕ್ಷಣೆ ಕಲೆ ಕರಾಟೆ ಕಲಿಸಲಾಗುವುದು ಹಾಗೂ ಹಾಸ್ಟೆಲ್‌ನಲ್ಲಿರುವ ಬಾಲಕರಿಗೂ ಕರಾಟೆ ಕಲಿಸುವ ಚಿಂತನೆ ಇದ್ದು, ಹಾಸ್ಟೆಲ್‌ಗಳಿಗೆ  ನೀಡಲಾಗುವ ಊಟೋಪಚಾರದ ವೆಚ್ಚವನ್ನು ಹೆಚ್ಚಳ ಮಾಡಲಾಗುವುದು ಎಂದರು.

ಉಡುಪಿ ನಗರದಲ್ಲಿ 250 ವಿದ್ಯಾರ್ಥಿನಿಯರಿಗೆ ಅನುಕೂಲವಾಗುವಂತೆ 6.5 ಕೋಟಿ ವೆಚ್ಚದ ಹಾಸ್ಟೆಲ್ ನಿರ್ಮಾಣಕ್ಕೆ ಶೀಘ್ರದಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು.  ಇದಕ್ಕೆ ಈಗಾಗಲೇ ಅಗತ್ಯ ಮಂಜೂರಾತಿ ಹಾಗೂ ಹಣಕಾಸು ಸೌಲಭ್ಯ ಭ್ಯವಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ರಘುಪತಿ ಭಟ್ ಮಾತನಾಡಿ,  ಜಿಲ್ಲೆಯಲ್ಲಿ ಪ್ರತಿವರ್ಷ ಹಾಸ್ಟೆಲ್‌ಗಳ ಬೇಡಿಕೆ ಹೆಚ್ಚುತ್ತಿದ್ದು, ಇನ್ನು 2 ವರ್ಷದಲ್ಲಿ ಜಿಲ್ಲೆಯಲ್ಲಿ ಅಗತ್ಯವಿರುವ ಸಂಖ್ಯೆಯ ಹಾಸ್ಟೆಲ್‌ಗಳ ನಿರ್ಮಾಣ ಮಾಡಲಾ ಗುವುದು. ವಿದ್ಯಾರ್ಥಿಗಳು ಹಾಸ್ಟಲ್‌ಗಳಲ್ಲಿ ವಿದ್ಯಾಭ್ಯಾಸದ ಜೊತೆಗೆ ಶಿಸ್ತು ರೂಡಿಸಿಕೊಂಡು, ಉತ್ತಮ ಶಿಕ್ಷಣ ಪಡೆಯಬೇಕು ಎಂದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಜಿಲ್ಲಾ ಪಂಚಾಯತ್ ಸಿಇಓ ಪ್ರಸನ್ನ ಹೆಚ್., ಕರ್ನಾಟಕ ಗೃಹ ಮಂಡಳಿಯ ಸಹಾಯಕ ಇಂಜಿನಿಯರ್ ಸಹನಾ  ಉಪಸ್ಥಿತರಿದ್ದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಆಧಿಕಾರಿ ದೇವಿಂದ್ರ ಎಸ್ ಬಿರಾದರ್ ಸ್ವಾಗತಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X