Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು | ಬಿಬಿಎಂಪಿ ಚುನಾವಣೆಗೆ...

ಬೆಂಗಳೂರು | ಬಿಬಿಎಂಪಿ ಚುನಾವಣೆಗೆ ಬ್ಯಾಲೆಟ್ ಪೇಪರ್ ಬಳಕೆಗೆ ಆಗ್ರಹಿಸಿ ಕಾಂಗ್ರೆಸ್ ಧರಣಿ

ವಾರ್ತಾಭಾರತಿವಾರ್ತಾಭಾರತಿ15 May 2022 12:59 PM IST
share
ಬೆಂಗಳೂರು | ಬಿಬಿಎಂಪಿ ಚುನಾವಣೆಗೆ ಬ್ಯಾಲೆಟ್ ಪೇಪರ್ ಬಳಕೆಗೆ ಆಗ್ರಹಿಸಿ ಕಾಂಗ್ರೆಸ್ ಧರಣಿ

ಬೆಂಗಳೂರು, ಮೇ 15: ಮುಂದಿನ ಬಿಬಿಎಂಪಿ ಚುನಾವಣೆಗೆ ಇವಿಎಂ (ವಿದ್ಯುನ್ಮಾನ ಮತಯಂತ್ರ) ಬದಲಿಗೆ ಮತಪತ್ರಗಳನ್ನೇ ರಾಜ್ಯ ಚುನಾವಣಾ ಆಯೋಗ ಬಳಕೆ ಮಾಡಬೇಕೆಂದು ಒತ್ತಾಯಿಸಿ ಕೆಪಿಸಿಸಿ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯರು ಧರಣಿ ನಡೆಸಿದರು.

ನಗರದಲ್ಲಿಂದು ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನ ಮುಂಭಾಗ ಕೆಪಿಸಿಸಿ ಸೇವಾದಳ ಯಂಗ್ ಬ್ರಿಗೇಡ್ ಅಧ್ಯಕ್ಷ ಜುನೈದ್ ಪಿ.ಕೆ. ನೇತೃತ್ವದಲ್ಲಿ ಜಮಾಯಿಸಿದ ಸದಸ್ಯರು ಬಿಬಿಎಂಪಿ ಚುನಾವಣೆ ಘೋಷಣೆ ಮಾಡಿ ಮತ್ತು ಇವಿಎಂ ಬೇಡ, ಬ್ಯಾಲೆಟ್ ಪೇಪರ್ ಬಳಸಿ ಮತದಾನ ನಡೆಸಿ ಎಂದು ಘೋಷಣೆ ಕೂಗಿದರು.

ಧರಣಿಯನ್ನುದ್ದೇಶಿಸಿ ಮಾತನಾಡಿದ ಜುನೈದ್ ಪಿ.ಕೆ., ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ 15 ದಿನಗಳ ಒಳಗೆ ನೋಟಿಫಿಕೇಷನ್ ಹೊರಡಿಸಿಬೇಕು ಎಂದಿದೆ. ರಾಜ್ಯ ಚುನಾವಣಾ ಆಯೋಗ ಇದನ್ನು ಗಂಭೀರವಾಗಿ ಪರಿಗಣಿಸಿ ಚುನಾವಣೆ ದಿನಾಂಕ ಘೋಷಣೆ ಮಾಡಬೇಕು. ಜತೆಗೆ  ಇವಿಎಂ ಮತಯಂತ್ರಗಳ ಬಗ್ಗೆ ದೇಶಾದ್ಯಂತ ಸಂಶಯ ವ್ಯಕ್ತವಾಗುತ್ತಿದೆ. ಹೀಗಾಗಿ ಮುಂದಿನ ಬಿಬಿಎಂಪಿ ಚುನಾವಣೆಯಲ್ಲಿ  ಬ್ಯಾಲೆಟ್‌ ಪೇಪರ್‌ಗಳನ್ನೇ ಬಳಸಿದರೆ ಒಳ್ಳೆಯದು ಎಂದು ಒತ್ತಾಯಿಸಿದರು.

ಬಿಜೆಪಿ ನಾಯಕ ಎಲ್.ಕೆ. ಅಡ್ವಾಣಿ ಅವರೂ ಮತ ಯಂತ್ರಗಳ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಅಮೆರಿಕ, ಜರ್ಮನಿಯಂತಹ ದೇಶಗಳು ಇವಿಎಂಗೆ ಹೋಗಿ  ಈಗ ಮತ್ತೆ ಬ್ಯಾಲೆಟ್‌ ಪೇಪರ್‌ ನಲ್ಲಿ ಚುನಾವಣೆ ನಡೆಸುತ್ತಿವೆ. ಇಲ್ಲೂ ಹಾಗೇ ಆಗಬೇಕು. ಅದು ಅದಲ್ಲದೇ, 2005-09ರಲ್ಲಿ ಇವಿಎಂ ಯಂತ್ರ ಬಳಸುತ್ತಿದ್ದ ಜರ್ಮನಿ ಇದೀಗ ಮರಳಿ ಬ್ಯಾಲೆಟ್ ಪೇಪರ್ ಪದ್ದತಿ ಅಳವಡಿಸಿಕೊಂಡಿದ್ದು, ಇವಿಎಂ ದುರ್ಬಳಕೆ ಕುರಿತು ವಿಶ್ವದ ಎಲ್ಲಾ ರಾಷ್ಟ್ರಗಳೂ ಚಕಾರವೆತ್ತಿವೆ. ಅದರಂತೆ ನೆದರ್ ಲ್ಯಾಂಡ್ ಕೂಡ 1990-2007ರವರೆಗೂ ಇವಿಎಂ ಬಳಸಿ ಮರಳಿ ಬ್ಯಾಲೆಟ್ ಪೇಪರ್ ಅನ್ನು ಅಪ್ಪಿಕೊಂಡಿದೆ. ಐರ್ಲ್ಯಾಂಡ್ 2002-04ರವೆಗೆ ಇವಿಎಂ ಬಳಿಸಿ ಮತ್ತೆ ಬ್ಯಾಲೆಟ್ ಪೇಪರ್ ಬಳಸುತ್ತಿದೆ ಎಂದರು.

ಇವಿಎಂ ಮತಯಂತ್ರದಲ್ಲಿ ದೋಷವಿದ್ದು, ಬ್ಯಾಲೆಟ್ ಪೇಪರ್ ಪದ್ದತಿಯನ್ನು ಮರುಜಾರಿಗೊಳಿಸಬೇಕು.ಇದು ಮೊಟ್ಟ ಮೊದಲು ಬಿಬಿಎಂಪಿ ಚುನಾವಣೆಯಿಂದಲೇ ಆರಂಭವಾಗಬೇಕು. ಹೀಗಾಗಿ, ರಾಜ್ಯ ಚುನಾವಣಾ ಆಯೋಗ ಇದನ್ನು ಗಂಭೀರವಾಗಿ ಪರಿಗಣಿಸಲಿ ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಎನ್ಎಸ್ ಯುಐ ರಾಜ್ಯಾಧ್ಯಕ್ಷ ಕೀರ್ತಿಗಣೇಶ್,ಸುರೇಂದ್ರ, ಡಾ‌.ಭರತ್ ಶ್ರೀ,ವಿಜಯನ್,ಮಹೇಶ್ ಸೇರಿದಂತೆ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X