Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಡ್ಯಾರ್-ಹರೇಕಳ ತಾತ್ಕಾಲಿಕ ಸಂಪರ್ಕ...

ಅಡ್ಯಾರ್-ಹರೇಕಳ ತಾತ್ಕಾಲಿಕ ಸಂಪರ್ಕ ರಸ್ತೆ ಕುಸಿತ

ವಾರ್ತಾಭಾರತಿವಾರ್ತಾಭಾರತಿ15 May 2022 4:57 PM IST
share
ಅಡ್ಯಾರ್-ಹರೇಕಳ ತಾತ್ಕಾಲಿಕ ಸಂಪರ್ಕ ರಸ್ತೆ ಕುಸಿತ

ಮಂಗಳೂರು : ಅಡ್ಯಾರ್-ಹರೇಕಳ-ಪಾವೂರು ಮಧ್ಯೆ ನೇತ್ರಾವತಿ ನದಿ ಮೂಲಕ ಕಲ್ಪಿಸಲಾದ ತಾತ್ಕಾಲಿಕ ಮಣ್ಣಿನ ಸಂಪರ್ಕ ರಸ್ತೆಯು ಶನಿವಾರ ತಡರಾತ್ರಿ ಕುಸಿದಿದೆ. ಇದರಿಂದ ಅತ್ತಿಂದಿತ್ತ ಸಾರ್ವಜನಿಕರ ಸಂಪರ್ಕಕ್ಕೆ ತೊಡಕಾಗಿವೆ.

ಕೆಲವು ತಿಂಗಳಿನಿಂದ ಈ ಮಣ್ಣಿನ ರಸ್ತೆಯಲ್ಲಿ ತಾತ್ಕಾಲಿಕವಾಗಿ ಚಲಿಸುತ್ತಿದ್ದ ವಾಹನಗಳ ಓಡಾಟವು ರವಿವಾರ ಮುಂಜಾನೆಯಿಂದ ಸಂಪೂರ್ಣ ಸ್ಥಗಿತಗೊಂಡಿವೆ. ಹಾಗಾಗಿ ಸಾರ್ವಜನಿಕರು ಎಂದಿನಂತೆ ದೋಣಿಯನ್ನೇ ಆಶ್ರಯಿಸತೊಡಗಿದ್ದಾರೆ.

ಕುಸಿತದ ಬಗ್ಗೆ ಯಾವುದೇ ಮಾಹಿತಿ ಇಲ್ಲದ ಹರೇಕಳ ಪಾವೂರು ಕಡೆಯ ವಾಹನಿಗರು ಮುಂಜಾನೆಯ ವೇಳೆಗೆ ತಮ್ಮ ವಾಹನಗಳನ್ನು ಚಲಾಯಿಸಿಕೊಂಡು ಮತ್ತು ಸಾರ್ವಜನಿಕರು ನಡೆದುಕೊಂಡು ಅಡ್ಯಾರ್‌ ನತ್ತ ಆಗಮಿಸಿದ್ದರು. ಆದರೆ ಸಂಪರ್ಕ ರಸ್ತೆ ಕುಸಿದ ಬಗ್ಗೆ ತಿಳಿಯುತ್ತಲೇ ಮತ್ತೆ ವಾಪಸ್ ಹೋಗಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಹರೇಕಳ-ಪಾವೂರಿನಿಂದ ಅಡ್ಯಾರ್‌ಗೆ ಸಂಪರ್ಕ ಕಲ್ಪಿಸುವ ಅಣೆಕಟ್ಟು ಸಹಿತದ ಸೇತುವೆ ನಿರ್ಮಾಣ ಕಾಮಗಾರಿಯು ಭರದಿಂದ ಸಾಗುತ್ತಿದೆ. ಇದರ  ಪಕ್ಕದಲ್ಲೇ ಮಣ್ಣಿನ ರಸ್ತೆಯನ್ನು ನಿರ್ಮಿಸಲಾಗಿತ್ತು. ಈ ರಸ್ತೆಯಲ್ಲಿ ಅಧಿಕ ಸಂಖ್ಯೆಯಲ್ಲಿ ವಾಹನಗಳು ತಾತ್ಕಾಲಿಕ ನೆಲೆಯಲ್ಲಿ ಚಲಿಸುತ್ತಿತ್ತು. ಇದರಿಂದ ಈ ಭಾಗದ ಸಾವಿರಾರು ಮಂದಿಗೆ ತುಂಬಾ ಅನುಕೂಲವಾಗುತ್ತಿತ್ತು.

ಆದರೆ ಶನಿವಾರ ತಡರಾತ್ರಿ ವೇಳೆ ಅಡ್ಯಾರ್ ಸಮೀಪದಲ್ಲೇ ಪಶ್ಚಿಮಾಭಿಮುಖವಾಗಿ ನೀರಿನ ಹರಿವು ಹೆಚ್ಚಾಗಿ ಮಣ್ಣು ಕೊಚ್ಚಿ ಹೋಗಿವೆ. ಹಾಗಾಗಿ ವಾಹನಗಳ ಓಡಾಟವನ್ನು ಸ್ಥಗಿತಗೊಳಿಸಲಾಗಿದೆ. ಜನರು ಅನಿವಾರ್ಯವಾಗಿ ದೋಣಿ ಮೂಲಕ ಜನರು ಸಂಪರ್ಕ ಸಾಧಿಸುತ್ತಿದ್ದಾರೆ.

ರಾಜ್ಯದ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 192 ಕೋ.ರೂ. ವೆಚ್ಚದಲ್ಲಿ ವೆಂಟೆಡ್ ಡ್ಯಾಂ ಸಹಿತ 520 ಮೀ. ಉದ್ದದ ಮತ್ತು 7.5 ಮೀ. ಅಗಲದ ಸೇತುವೆಯನ್ನು (೧.೨೫ ಮೀ. ಅಗಲದ ಫುಟ್‌ಪಾತ್ ಸಹಿತ) ನಿರ್ಮಿಸಲಾಗುತ್ತಿದೆ. ಈಗಾಗಲೆ ಈ ಯೋಜನೆಯ ಕಾಮಗಾರಿಯು ಶೇ.೯೦ರಷ್ಟು ಪೂರ್ಣಗೊಂಡಿವೆ.

ಡ್ಯಾಂ ಸಹಿತ ಸೇತುವೆ ಕಾಮಗಾರಿ ಪೂರ್ಣಗೊಂಡರೆ ಹರೇಕಳ, ಪಾವೂರು, ಬೋಳಿಯಾರು, ಕೊಣಾಜೆ, ಅಂಬ್ಲಮೊಗರು, ಮುನ್ನೂರು, ಬೆಳ್ಮ, ಕಿನ್ಯ, ಮಂಜನಾಡಿ, ಕುರ್ನಾಡು ಗ್ರಾಮಗಳ ಜನರಿಗೆ ಅನುಕೂಲವಾಗಲಿದೆ.

ಈ ಭಾಗದ ಜನರು ಮಂಗಳೂರಿಗೆ ಸುತ್ತಿ ಬಳಸಿ ಬರುವುದು ತಪ್ಪಲಿದೆ. ಅಲ್ಲದೆ ಉಳ್ಳಾಲ ತಾಲೂಕು ಮತ್ತು ಮಂಗಳೂರು ಮಹಾನಗರ ಪಾಲಿಕೆಯ ಲಕ್ಷಾಂತರ ಮಂದಿಗೆ ಕುಡಿಯುವ ನೀರಿನ ಪೂರೈಕೆಯೂ ಆಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X