Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯಾದ್ಯಂತ ಶಾಲಾ...

ಉಡುಪಿ ಜಿಲ್ಲೆಯಾದ್ಯಂತ ಶಾಲಾ ಪ್ರಾರಂಭೋತ್ಸವದ ಸಂಭ್ರಮ

ಎಲ್ಲೆಡೆ ಹಬ್ಬದ ವಾತಾವರಣ; ತಳೀರುತೋರಣ, ರಂಗೋಳಿಗಳಿಂದ ಶೃಂಗಾರ

ವಾರ್ತಾಭಾರತಿವಾರ್ತಾಭಾರತಿ16 May 2022 6:21 PM IST
share
ಉಡುಪಿ ಜಿಲ್ಲೆಯಾದ್ಯಂತ ಶಾಲಾ ಪ್ರಾರಂಭೋತ್ಸವದ ಸಂಭ್ರಮ

ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ಇಂದು ಪ್ರಾಥಮಿಕ ಶಾಲೆಗಳ ಪ್ರಾರಂಭೋತ್ಸವವು ಅತ್ಯಂತ ವಿಜೃಂಭಣೆ ಹಾಗೂ ಸಂಭ್ರಮದಿಂದ ನಡೆಯಿತು.

ಜಿಲ್ಲೆಯಲ್ಲಿ ೮ ಪೂರ್ವ ಪ್ರಾಥಮಿಕ, ೨೪೦ ಪ್ರಾಥಮಿಕ, ೫೪೯ ಹಿರಿಯ ಪ್ರಾಥಮಿಕ, ೨೮೬ ಪ್ರೌಢ, ೮ ಕರ್ನಾಟಕ ಪಬ್ಲಿಕ್ ಸ್ಕೂಲ್ ಹಾಗೂ ೨೨ ಇತರೆ ಮತ್ತು ವಿಶೇಷ ಮಕ್ಕಳ ಶಾಲೆ ಸೇರಿದಂತೆ ೧೧೧೦ ಸರಕಾರಿ, ಅನುದಾನ ಹಾಗೂ ಅನುದಾನ ರಹಿತ ಶಾಲೆಗಳಿದ್ದು, ಇವುಗಳಲ್ಲಿ ಇಂದು ಬಹುತೇಕ ಶಾಲೆಗಳು ಪುನಾರಂಭಗೊಂಡವು.

ಸರಕಾರಿಯಲ್ಲಿ ೮ ಪೂರ್ವ ಪ್ರಾಥಮಿಕ, ೨೨೦ ಪ್ರಾಥಮಿಕ, ೩೫೪ ಹಿರಿಯ ಪ್ರಾಥಮಿಕ, ೯೮ ಪ್ರೌಢ, ಎಂಟು ಕರ್ನಾಟಕ ಪಬ್ಲಿಕ್ ಸ್ಕೂಲ್, ೧೨ ಇತರೆ ಮತ್ತು ವಿಶೇಷ ಮಕ್ಕಳ ಶಾಲೆಗಳು, ಅನುದಾನಿತದಲ್ಲಿ ೬ ಪ್ರಾಥಮಿಕ, ೧೪೯ ಹಿರಿಯ ಪ್ರಾಥಮಿಕ, ೭೦ ಪ್ರೌಢ ಸಹಿತ ೨೨೫ ಮತ್ತು ಅನುದಾನ ರಹಿತದಲ್ಲಿ ೧೪ ಪ್ರಾಥಮಿಕ, ೪೩ ಹಿರಿಯ ಪ್ರಾಥಮಿಕ, ೧೧೮ ಪ್ರೌಢಶಾಲೆ, ೨೨ ವಿಶೇಷ ಶಾಲೆಗಳಿವೆ ಎಂದು ಉಡುಪಿ ಜಿಲ್ಲಾ ಸಾರ್ವಜನಿ ಶಿಕ್ಷಣ ಇಲಾಖೆ ತಿಳಿಸಿದೆ.

ಶೃಂಗಾರಗೊಂಡ ಶಾಲೆಗಳು: ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಜಿಲ್ಲೆಯ ಬಹುತೇಕ ಶಾಲೆಗಳನ್ನು ತಳೀರು ತೋರಣ, ಬಾಳೆ ಗಿಡ, ಬಲೂನ್‌ಗಳಿಂದ ಶೃಂಗರಿಸಲಾಗಿತ್ತು.

ರಜೆ ಮುಗಿಸಿ ಶಾಲೆಗೆ ಆಗಮಿಸಿದ ಮಕ್ಕಳನ್ನು ಶಿಕ್ಷಕರು ಆರತಿ ಬೆಳಗಿ, ಗುಲಾಬಿ ಹೂವು ಹಾಗೂ ಸಿಹಿ ನೀಡಿ ಸ್ವಾಗತಿಸಿದರು. ಕಾಪು ತಾಲೂಕಿನ ಕರಂದಾಡಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ವಾದ್ಯ, ಬ್ಯಾಂಡ್, ಚಂಡೆ, ಕೊಂಬು ಸಹಿತ ವಾದ್ಯ ಘೋಷಗಳೊಂದಿಗೆ ಆರತಿ ಬೆಳಗಿ ಬರ ಮಾಡಿಕೊಳ್ಳಲಾಯಿತು.

ಕೆಲವು ಶಾಲೆಗಳನ್ನು ಸುಣ್ಣ ಬಣ್ಣದ ಅಲಂಕಾರ ಮತ್ತು ಚಿತ್ರಗಳೊಂದಿಗೆ ಶೃಂಗಾರಗೊಳಿಸಲಾಗಿತ್ತು. ಉಡುಪಿ ಶಿಕ್ಷಣ ವಲಯ ವ್ಯಾಪ್ತಿಯ ಹೂಡೆ ಸಾಲಿ ಹಾತ್ ಶಾಲೆ, ಇಂದಿರಾನಗರ, ಉಡುಪಿ ಬಾಲಕಿಯರ ಪದವಿ ಪೂರ್ವ ಕಾಲೇಜು ಹಾಗೂ ಒಳಕಾಡು ಸರಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಹೂವು ನೀಡಿ, ಸಿಹಿ ಹಂಚಿ ಸಂಭ್ರಮಿಸಲಾಯಿತು.

ಸಿದ್ಧಾಪುರ ಸರಕಾರಿ ಪ್ರೌಢಶಾಲೆ, ಮೊವಾಡಿ ಸರಕಾರಿ ಶಾಲೆಯಲ್ಲೂ ಹಬ್ಬದ ವಾತಾವರಣ ಕಂಡುಬಂತು. ಮಕ್ಕಳನ್ನು ಚಪ್ಪಾಳೆಗಳ ಸುರಿಮಳೆಯ ಮೂಲಕ ತರಗತಿ ಒಳಗೆ ಬರಮಾಡಿಕೊಳ್ಳಲಾಯಿತು. ಕೆಲವು ಶಾಲೆಗಳ ವಿದ್ಯಾರ್ಥಿನಿ ಯರು ಶಾಲಾ ಆವರಣದಲ್ಲಿ ರಂಗೋಲಿ ಬಿಡಿಸಿ ಸಂಭ್ರಮಿಸಿದರು.

ಶಾಲಾರಂಭದ ದಿನದಂದೇ ಪ್ರತಿಭಟನೆ

ಶಂಕರನಾರಾಯಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕರಾಗಿ ಕಳೆದ ಆರು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ ಸಂತೋಷ್ ಕುಮಾರ್ ಶೆಟ್ಟಿ ಅವರ ವರ್ಗಾವಣೆಯನ್ನು ಖಂಡಿಸಿ ಪೋಷಕರು ಶಾಲಾ ಪ್ರಾರಂಭೋತ್ಸವದ ದಿನದಂದೇ ಶಾಲೆಯ ಎದುರು ಪ್ರತಿಭಟನೆ ನಡೆಸಿದರು.

ಸಂತೋಷ್ ಕುಮಾರ್ ಶೆಟ್ಟಿ ಈ ಶಾಲೆಗೆ ಶಿಕ್ಷಕರಾಗಿ ಬಂದಾಗ ಕೇವಸ ೧೧೦ ವಿದ್ಯಾರ್ಥಿಗಳು ಮಾತ್ರ ಇದ್ದರು. ಕಳೆದ ಶೈಕ್ಷಣಿಕ ವರ್ಷದಲ್ಲಿ ೩೧೦ ವಿದ್ಯಾರ್ಥಿ ಗಳು ಸೇರ್ಪಡೆಗೊಂಡಿದ್ದರು. ಈಗ ಸಂತೋಷ್ ಶೆಟ್ಟಿ ಅವರ ವರ್ಗಾವಣೆ ಯಿಂದ ಪೋಷಕರಲ್ಲಿ ಶಾಲೆಯ ಕುರಿತು ಆತಂಕ ಎದುರಾಗಿದೆ.

ಆದುದರಿಂದ ಶಿಕ್ಷಕರ ವರ್ಗಾವಣೆಯನ್ನು ವಿರೋಧಿಸಿ ಪೋಷಕರು, ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸದೆ ಪ್ರತಿಭಟನೆ ವ್ಯಕ್ತಪಡಿಸಿದರು. ಸ್ಥಳಕ್ಕೆ ಆಗಮಿಸಿದ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಅರುಣ್ ಕುಮಾರ್ ಶೆಟ್ಟಿ ಅವರಿಗೆ ಫೋಷಕರು ಮನವಿ ಸಲ್ಲಿಸಿದರು.

ವಳಕಾಡು ಸರಕಾರಿ ಶಾಲೆಗೆ ಜಿಲ್ಲಾಧಿಕಾರಿ ಭೇಟಿ

ಶಾಲಾ ಪ್ರಾರಂಭೋತ್ಸವದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ವಳಕಾಡು ಸರಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಶುಭಕೋರಿದರು.

ಬಳಿಕ ಮಾತನಾಡಿದ ಜಿಲ್ಲಾಧಿಕಾರಿಗಳು, ರಜೆಯ ಬಳಿಕ ಶಾಲಾ ಪುನಾರಂಭ ವಾಗಿದೆ. ಎಲ್ಲ ಕಡೆಗಳಲ್ಲಿ ಹಬ್ಬ ಹಾಗೂ ಸಂಭ್ರಮದ ಕಂಡುಬಂದಿದೆ. ಶಾಲಾ ಶಿಕ್ಷಕರು, ಸಿಬ್ಬಂದಿ ಹಾಗೂ ಎಸ್‌ಡಿಎಂಸಿ, ಹಳೆ ವಿದ್ಯಾರ್ಥಿಗಳು ಇದಕ್ಕಾಗಿ ಎಲ್ಲ ರೀತಿ ಸಿದ್ಧತೆ ಮಾಡಿಕೊಂಡು ಸಿಹಿ ಹಂಚಿದ್ದಾರೆ ಎಂದರು.

ಕಳೆದ ಎರಡು ವರ್ಷಗಳ ಕಾಲ ಕೊರೋನಾದಿಂದ ಮಕ್ಕಳ ಕಲಿಕೆಗೆ ಕೆಲ ವೊಂದು ತೊಡಕುಗಳಾಗಿತ್ತು. ಅದನ್ನು ಗಮನದಲ್ಲಿಟ್ಟುಕೊಂಡು  ಶಾಲೆಗಳನ್ನು ಬೇಗನೆ ಆರಂಭಿಸಲಾಗಿದೆ. ೮ ಮತ್ತು ೯ನೆ ತರಗತಿಯ ಮಕ್ಕಳಿಗೆ ಕಲಿಕಾ ಚೇತರಿಕೆ ಮತ್ತು ೧೦ನೆ ತರಗತಿ ವಿದ್ಯಾರ್ಥಿಗಳಿಗೆ ಸೇತು ಬಂಧು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬಿಸಿಯೂಟಕ್ಕೆ ಸಂಬಂಧಿಸಿದಂತೆ ಎಲ್ಲವನ್ನು ಶುಚಿಯಾಗಿ ಇಡಲಾಗಿದೆ. ಪ್ರಾರಂಭೋತ್ಸವದಲ್ಲಿ ಸಮುದಾಯಗಳ ಸಹಭಾಗಿತ್ವ ಕೂಡ ಉತ್ತಮವಾಗಿದೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X