ಜೌತಿಷ ವಿಶ್ವಕೋಶದ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ

ಉಡುಪಿ : ಪರ್ಯಾಯ ಕೃಷ್ಣಾಪುರ ಮಠದ ಆಶ್ರಯದಲ್ಲಿ ಉಡುಪಿ ಮಾಧ್ವಸಿದ್ಧಾಂತ ಪ್ರಬೋಧಕ ಸಂಸ್ಕೃತ ಸಂಶೋಧನಾ ಕೇಂದ್ರದ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ಆರ್ಥಿಕ ಅನುದಾನದಿಂದ ಪೂರ್ಣಗೊಂಡ ಜೌತಿಷ ವಿಶ್ವಕೋಶದ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ ಸಮಾರಂಭವು ಶ್ರೀಕೃಷ್ಣಮಠದ ಮಧ್ವ ಮಂಟಪದಲ್ಲಿ ಸೋಮವಾರ ಜರಗಿತು.
ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾಸಾಗರತೀರ್ಥ ಸ್ವಾಮೀಜಿ, ಪೇಜಾವರ ಮಠಾಧೀಶ ಶ್ರೀವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ ಹಾಗೂ ಕಾಣಿ ಯೂರು ಮಠಾಧೀಶ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಅಪ್ಲಿಕೇಶನ್‌ನ್ನು ಲೋಕಾರ್ಪಣೆಗೊಳಿಸಿ ಅನುಗ್ರಹ ಸಂದೇಶ ನೀಡಿದರು.
ಸಂಸ್ಕೃತ ಪಾಠಶಾಲೆಯ ಪ್ರಾಂಶುಪಾಲ ಪ್ರೊ.ಕೆ.ಸತ್ಯನಾರಾಯಣ ರಾವ್ ಮುಖ್ಯ ಅತಿಥಿಯಾಗಿದ್ದರು. ಪದಾಧಿಕಾರಿಗಳಾದ ದೇವಾನಂದ ಉಪಾಧ್ಯಾಯ, ಚಂದ್ರಶೇಖರ ಆಚಾರ್ಯ ಉಪಸ್ಥಿತರಿದ್ದರು. ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ಕಡಂದಲೆ ಗಣಪತಿ ಭಟ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
Next Story