ಉಡುಪಿ ಜಿಲ್ಲೆಯಾದ್ಯಂತ ಗುಡುಗು ಮಿಂಚು ಸಹಿತ ಭಾರೀ ಮಳೆ

ಉಡುಪಿ, ಮೇ ೧೬: ಉಡುಪಿ ಜಿಲ್ಲೆಯಾದ್ಯಂತ ಮೇ ೧೬ರಂದು ಸಂಜೆ ವೇಳೆ ಗುಡುಗು ಗಾಳಿ ಸಹಿತ ಭಾರೀ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.
ಜಿಲ್ಲೆಯ ಹಲವೆಡೆ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಕಂಡು ಬಂದಿದ್ದು, ಕೆಲವು ಕಡೆಗಳಲ್ಲಿ ಮಳೆಯಾಗಿತ್ತು. ಮಧ್ಯಾಹ್ನ ನಂತರ ಬಿಸಿಲಿನ ವಾತಾವರಣ ಕಂಡುಬಂದಿದ್ದು, ಸಂಜೆ ವೇಳೆ ಭಾರೀ ಮಳೆಯಾಗಿದೆ.
ಕುಂದಾಪುರ, ಬೈಂದೂರು, ಉಡುಪಿ, ಬ್ರಹ್ಮಾವರ, ಕಾಪು ಸೇರಿದಂತೆ ಜಿಲ್ಲೆಯ ವಿವಿಧೆಡೆ ಗಾಳಿ, ಮಿಂಚು, ಗುಡುಗು ಸಹಿತ ಭಾರೀ ಮಳೆಯಾಗಿದೆ. ಇದರಿಂದ ಕೆಲವು ಕಡೆ ಮರದ ರೆಂಬೆಗಳು ಮುರಿದು ಬಿದ್ದು ವಿದ್ಯುತ್ ವ್ಯತ್ಯಯ ಉಂಟಾ ಗಿದೆ ಎಂದು ತಿಳಿದುಬಂದಿದೆ.
Next Story