ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ: ಅರ್ಜಿ ಆಹ್ವಾನ
ಉಡುಪಿ : ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ೬ನೇ ತರಗತಿ ಪ್ರವೇಶಕ್ಕಾಗಿ ೫ನೇ ತರಗತಿ ಉತ್ತೀರ್ಣರಾದ ಪ್ರತಿಭಾವಂತ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
೫ನೇ ತರಗತಿಯಲ್ಲಿ ಶೇ.೬೦ ಅಂಕ ಪಡೆದು ಪ್ರಥಮ ದರ್ಜೆಯಲ್ಲಿ ಉತ್ತೀರ್ಣ ರಾದ, ಪೋಷಕರ ವಾರ್ಷಿಕ ಆದಾಯ ೨ ಲಕ್ಷ ರೂ. ಒಳಗಿರುವ ವಿದ್ಯಾರ್ಥಿ ಗಳು ಅರ್ಜಿ ಸಲ್ಲಿಸಲು ಮೇ ೩೧ ಕೊನೆಯ ದಿನವಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ರಜತಾದ್ರಿ ಜಿಲ್ಲಾ ಸಂಕೀರ್ಣ, ಮಣಿಪಾಲ, ಉಡುಪಿ ದೂ.ಸಂಖ್ಯೆ: :೦೮೨೦- ೨೫೭೪೮೧೪, ೨೯೫೦೧೯೮ನ್ನು ಸಂಪರ್ಕಿಸುವಂತೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Next Story