Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಂಗ್ರೆಸ್ ಗೆ ಹಾರ್ದಿಕ ಪಟೇಲ್ ವಿದಾಯ

ಕಾಂಗ್ರೆಸ್ ಗೆ ಹಾರ್ದಿಕ ಪಟೇಲ್ ವಿದಾಯ

ವಾರ್ತಾಭಾರತಿವಾರ್ತಾಭಾರತಿ18 May 2022 10:41 AM IST
share
ಕಾಂಗ್ರೆಸ್ ಗೆ ಹಾರ್ದಿಕ ಪಟೇಲ್ ವಿದಾಯ

ಹೊಸದಿಲ್ಲಿ,ಮೇ 18: ಹಲವಾರು ದಿನಗಳ ಮುನಿಸಿನ ಬಳಿಕ ಗುಜರಾತಿನ ಕಾಂಗ್ರೆಸ್ ನಾಯಕ ಹಾರ್ದಿಕ ಪಟೇಲ್ ಅವರು ಬುಧವಾರ ಪಕ್ಷಕ್ಕೆ ವಿದಾಯ ಹೇಳಿದ್ದಾರೆ. ಪಟೇಲ್ ತನ್ನ ರಾಜೀನಾಮೆ ಪತ್ರದಲ್ಲಿ 2019ರಲ್ಲಿ ತನ್ನನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದ ರಾಹುಲ್ ಗಾಂಧಿಯವರನ್ನು ಸಾಕಷ್ಟು ಕಿಚಾಯಿಸಿದ್ದಾರೆ. ಹಿರಿಯ ನಾಯಕರು ತಮ್ಮ ಮೊಬೈಲ್ ಫೋನ್ ಗಳಲ್ಲಿಯೇ ವ್ಯಸ್ತರಾಗಿರುತ್ತಿದ್ದರು ಮತ್ತು ಗುಜರಾತ್ ಕಾಂಗ್ರೆಸ್ ಅವರಿಗೆ ‘ಚಿಕನ್ ಸ್ಯಾಂಡ್‌ವಿಚ್’ಗಳ ಪೂರೈಕೆಯನ್ನು ಖಚಿತ ಪಡಿಸಿಕೊಳ್ಳಲು ಹೆಚ್ಚಿನ ಆಸಕ್ತಿಯನ್ನು ಹೊಂದಿತ್ತು ಎಂದು ಪಟೇಲ್ ತನ್ನ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಗುಜರಾತ್ ಕಾಂಗ್ರೆಸ್ ನಾಯಕರು,ಪಟೇಲ್ ಪತ್ರವು ಬಿಜೆಪಿಯಿಂದ ಬರೆಸಲ್ಪಟ್ಟಿದೆ ಮತ್ತು ಕಾಂಗ್ರೆಸ್ ತೊರೆಯುವಂತೆ ಅವರ ಮೇಲೆ ಒತ್ತಡ ಹೇರಲಾಗಿತ್ತು ಎಂದಿದ್ದಾರೆ.ಪಾಟಿದಾರ್ ಸಮುದಾಯದ ನಾಯಕ ಪಟೇಲ್ ಕಳೆದೆರಡು ತಿಂಗಳುಗಳಿಂದ ಬಿಜೆಪಿ ನಾಯಕತ್ವದೊಂದಿಗೆ ಸಂಪರ್ಕದಲ್ಲಿದ್ದರು ಮತ್ತು ವಾರದೊಳಗೆ ಅವರು ಆಡಳಿತ ಪಕ್ಷವನ್ನು ಸೇರುವ ಸಾಧ್ಯತೆಯಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಕಳೆದೆರಡು ವರ್ಷಗಳಲ್ಲಿ ಹಲವಾರು ಯುವನಾಯಕರು ಕೇಸರಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರೂ ಪಟೇಲ್ ತಾನು ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರುವುದನ್ನು ಈವರೆಗೆ ಬಲವಾಗಿ ನಿರಾಕರಿಸುತ್ತಲೇ ಬಂದಿದ್ದಾರೆ.ಇತ್ತೀಚಿಗಷ್ಟೇ ಚಿಂತನ ಶಿಬಿರದಲ್ಲಿ ಪಕ್ಷದ ಪುನಃಶ್ಚೇತನಕ್ಕಾಗಿ ಕಾರ್ಯತಂತ್ರಗಳನ್ನು ಚರ್ಚಿಸಿರುವ ಕಾಂಗ್ರೆಸ್ ಪಾಲಿಗೆ ಪಟೇಲ್ ವಿದಾಯವು ಈ ವರ್ಷ ನಡೆಯಲಿರುವ ಗುಜರಾತ್ ಚುನಾವಣೆಗೆ ಮುನ್ನ ಅಕಾಲಿಕ ನಿರ್ಗಮನವಾಗಿದೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಬರೆದಿರುವ ತನ್ನ ರಾಜೀನಾಮೆ ಪತ್ರದಲ್ಲಿ ಪಟೇಲ್,ಇತ್ತೀಚಿನ ಗುಜರಾತ್ ಭೇಟಿ ಸಂದರ್ಭದಲ್ಲಿ ತನ್ನನ್ನು ಪ್ರತ್ಯೇಕವಾಗಿ ಭೇಟಿಯಾಗಿರದಿದ್ದ ರಾಹುಲ್ ಗಾಂಧಿಯವರ ವಿರುದ್ಧ ಸಾಕಷ್ಟು ಟೀಕಾಬಾಣಗಳನ್ನು ಪ್ರಯೋಗಿಸಿದ್ದಾರೆ.ತಾನು ಹಿರಿಯ ನಾಯಕರನ್ನು ಭೇಟಿಯಾದಾಗ ಅವರು ಗುಜರಾತಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಆಲಿಸುವ ಬದಲು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಮತ್ತು ಇತರ ವಿಷಯಗಳಲ್ಲಿ ವ್ಯಸ್ತರಾಗಿದ್ದರು. ಯಾತ್ರೆಗಳ ಸಂದರ್ಭದಲ್ಲಿ ಜನರೊಂದಿಗೆ ತೊಡಗಿಸಿಕೊಳ್ಳುವ ಬದಲಿಗೆ ಗುಜರಾತಿನ ಹಿರಿಯ ನಾಯಕರು ದಿಲ್ಲಿಯಿಂದ ಬಂದಿದ್ದ ನಾಯಕರಿಗೆ ಚಿಕನ್ ಸ್ಯಾಂಡ್‌ವಿಚ್  ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಹೆಚ್ಚು ಆಸಕ್ತರಾಗಿದ್ದರು ಎಂದು ಪಟೇಲ್ ಬರೆದಿದ್ದಾರೆ.‘ನಿರ್ಣಾಯಕ ಸಮಯದಲ್ಲಿ ಭಾರತಕ್ಕೆ ತನ್ನ ಅಗತ್ಯವಿದ್ದಾಗ ನಮ್ಮ ನಾಯಕರು ವಿದೇಶದಲ್ಲಿದ್ದರು’ ಎಂದೂ ಪಟೇಲ್ ಕುಟುಕಿದ್ದಾರೆ.

#BREAKING | #HardikPatel resigns from #Congress.https://t.co/GLC6tE2NCL

— NDTV (@ndtv) May 18, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X