ಪಿ.ಯು. ಕಾಲೇಜುಗಳಲ್ಲಿ ಹೊಸ ಭಾಷೆ, ಹೆಚ್ಚುವರಿ ವಿಭಾಗ ಪ್ರಾರಂಭಕ್ಕೆ ಅರ್ಜಿ ಆಹ್ವಾನ
ಉಡುಪಿ : ಜಿಲ್ಲೆಯಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಅನುದಾನಿತ, ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ಭಾಷೆ ಅಥವಾ ಸಂಯೋಜನೆ ಹಾಗೂ ಹೆಚ್ಚುವರಿ ವಿಭಾಗಗಳನ್ನು ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಪ್ರಾರಂಭಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹೊಸದಾಗಿ ಪ್ರಾರಂಭಿಸಲು ಇಚ್ಛಿಸುವ ಖಾಸಗಿ ಅನುದಾನಿತ, ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳು ಅರ್ಜಿಗಳನ್ನು ಇಲಾಖೆಯ ವೆಬ್‌ಸೈಟ್ -www.puc.karnataka.gov.in- ಇಲ್ಲಿ ೨೦೨೨-೨೩ ನ್ಯೂ ಕಾಂಬಿನೇಷನ್ ಅಥವಾ ಲಾಂಗ್ವೇಜ್ ಅಂಡ್ ಆಡ್ ಸೆಕ್ಷನ್ ಅಪ್ಲಿಕೇಷನ್‌ನಲ್ಲಿ ಮೇ ೨೫ರೊಳಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲು ಅವಕಾಶವಿರುವುದಿಲ್ಲ. ಈ ಕುರಿತ ಸುತ್ತೋಲೆ ಮತ್ತು ವೇಳಾಪಟ್ಟಿ ಯನ್ನು ಇಲಾಖಾ ವೆಬ್‌ಸೈಟ್‌ನಿಂದ ಪಡೆಯಬಹುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story