ಮಂಗಳೂರು: ಪಠ್ಯಪುಸ್ತಕದಿಂದ ನಾರಾಯಣ ಗುರು ವಿಷಯ ಕೈಬಿಟ್ಟಿದ್ದನ್ನು ಖಂಡಿಸಿ ಇಂದು ಕಾಂಗ್ರೆಸ್ ಪ್ರತಿಭಟನೆ
ಮಂಗಳೂರು, ಮೇ 19: ದಕ್ಷಿಣ ಭಾರತದ ಶ್ರೇಷ್ಠ ದಾರ್ಶನಿಕ, ಕ್ರಾಂತಿಕಾರ, ಮಹಾನ್ ಮಾನವತವಾದಿ ಬ್ರಹ್ಮಶ್ರೀ ನಾರಾಯಣ ಗುರುಗಳ ಕುರಿತಾದ ಪಠ್ಯವನ್ನು ಶಾಲಾ ಪುಸ್ತಕದಿಂದ ಕೈಬಿಟ್ಟ ರಾಜ್ಯ ಬಿಜೆಪಿ ಸರಕಾರದ ದ್ವಂದ್ವ ನೀತಿಯ ವಿರುದ್ಧ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮೇ 19ರಂದು ಅಪರಾಹ್ನ 3 ಗಂಟೆಗೆ ಮಂಗಳೂರು ಪುರಭವನದ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ, ವಿಧಾನ ಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಹಾಗೂ ಮಾಜಿ ಸಚಿವರಾದ ಬಿ.ರಮಾನಾಥ ರೈ, ಕೆ.ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಮಾಜಿ ಶಾಸಕರಾದ ವಸಂತ ಬಂಗೇರ, ಮೊಯ್ದಿನ್ ಬಾವ, ಜೆ.ಆರ್.ಲೋಬೊ, ಶಕುಂತಳಾ ಶೆಟ್ಟಿ, ಕೆಪಿಸಿಸಿ ಉಪಾಧ್ಯಕ್ಷರುಗಳಾದ ಐವನ್ ಡಿಸೋಜ, ಪಿ.ವಿ.ಮೋಹನ್ ಹಾಗೂ ಡಾ.ರಘು ಭಾಗವಹಿಸುವರು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.





