SSLC Result 2022: 145 ವಿದ್ಯಾರ್ಥಿಗಳಿಗೆ 625 ಅಂಕ

ಬೆಂಗಳೂರು, ಮೇ 19: ಮಾರ್ಚ್ ತಿಂಗಳಿನಲ್ಲಿ ನಡೆದ ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, 145 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಇನ್ನು 309 ವಿದ್ಯಾರ್ಥಿಗಳಿಗೆ 624, 472 ವಿದ್ಯಾರ್ಥಿಗಳು 623 ಅಂಕ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ. ರಾಜ್ಯದ 3,920 ಶಾಲೆಗಳಿಗೆ ಶೇಕಡಾ 100ರಷ್ಟು ಫಲಿತಾಂಶ ಬಂದಿದೆ. ಸರ್ಕಾರಿ ಶಾಲೆಗೆ ಶೇಕಡಾ 88, ಅನುದಾನಿತ ಶಾಲೆಯಲ್ಲಿ ಶೇಕಡಾ 87.84, ಅನುದಾನ ರಹಿತ ಶಾಲೆಗಳಲ್ಲಿ ಶೇಕಡಾ 92.29ರಷ್ಟು ಫಲಿತಾಂಶ ಬಂದಿದೆ.
ಬುಧವಾರ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ , ಈ ವರ್ಷ ಮಾ.28ರಿಂದ ಎ.11ರವರೆಗೆ ನಡೆದ ಎಸೆಸೆಲ್ಸಿ ಪರೀಕ್ಷೆಯಲ್ಲಿ ಖಾಸಗಿ, ಪುನರಾವರ್ತಿತ ಸೇರಿ ನೂತನವಾಗಿ 8,73,859 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಪರೀಕ್ಷೆ ಬರೆದ ಒಟ್ಟು 8,53,436 ವಿದ್ಯಾರ್ಥಿಗಳ ಪೈಕಿ 7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ವರ್ಷ ಶೇ.85.63 ಫಲಿತಾಂಶ ಬಂದಿದೆ. 20,423 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ... ದ.ಕ.: ಎಸೆಸೆಲ್ಸಿಯಲ್ಲಿ 17 ವಿದ್ಯಾರ್ಥಿಗಳಿಗೆ 625 ಅಂಕಗಳು!







