Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇವನನ್ನು ಪ್ರೀತಿಸುವವನು ಇಡೀ...

ದೇವನನ್ನು ಪ್ರೀತಿಸುವವನು ಇಡೀ ಮನುಷ್ಯರನ್ನು ಪ್ರೀತಿಸುತ್ತಾನೆ: ಮುಹಮ್ಮದ್ ಕುಂಞಿ

‘ಫ್ಯಾಮಿಲಿ ಗೆಟ್ ಟುಗೆದರ್ ಸೌಹಾರ್ದ ಸಂಜೆ-2022’ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ19 May 2022 7:04 PM IST
share
ದೇವನನ್ನು ಪ್ರೀತಿಸುವವನು ಇಡೀ ಮನುಷ್ಯರನ್ನು ಪ್ರೀತಿಸುತ್ತಾನೆ: ಮುಹಮ್ಮದ್ ಕುಂಞಿ

ಭಟ್ಕಳ: ತಾನು ದೇವನನ್ನು ಪ್ರೀತಿಸುತ್ತೇನೆ ಎಂದು ಹೇಳಿಕೊಳ್ಳುವ ವ್ಯಕ್ತಿ ಕೇವಲ ಒಂದು ವರ್ಗ ಅಥವಾ ಧರ್ಮದವರನ್ನು ಪ್ರೀತಿಸದೆ ಇಡೀ ಮನುಷ್ಯ ವರ್ಗವನ್ನು ಪ್ರೀತಿಸುವವನಾಗಿರುತ್ತಾನೆ ಎಂದು ಮಂಗಳೂರು ಶಾಂತಿ ಪ್ರಕಾಶನದ ವ್ಯವಸ್ಥಾಪಕ ಹಾಗೂ ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞಿ ಹೇಳಿದರು.

ಅವರು ಭಟ್ಕಳದ ಜಮಾಅತೆ ಇಸ್ಲಾಮಿ ಹಿಂದ್ ಹಾಗೂ ಸದ್ಭಾವನಾ ಮಂಚ್ ವತಿಯಿಂದ ನಗರದ ಅನ್ಫಾಲ್ ಹೈಪರ್ ಮಾರ್ಕೆಟ್ ಬಳಿಯ ಆಮೀನಾ ಪ್ಯಾಲೇಸ್ ನಲ್ಲಿ  ಆಯೋಜಿಸಿದ್ದ ‘ಫ್ಯಾಮಿಲಿ ಗೆಟ್ ಟುಗೆದರ್ ಸೌಹಾರ್ದ ಸಂಜೆ-2022’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದೇವನ ಮೇಲೆ ಪ್ರೀತಿಯುಳ್ಳವರು ಕೇವಲ ಒಂದು ವರ್ಗವನ್ನು ಪ್ರೀತಿಸದೆ ಇಡೀ ಮನುಷ್ಯ ಕುಲವನ್ನು ಪ್ರೀತಿಸುತ್ತಾರೆ, ಪ್ರವಾದಿ ಮುಹಮ್ಮದರು ಈ ಜಗತ್ತಿನ ಎಲ್ಲ ಮನುಷ್ಯರು ದೇವನ ಕುಟುಂಬದ ಸದಸ್ಯರು ಎಂದು ಕಲಿಸಿಕೊಟ್ಟಿದ್ದಾರೆ. ಎಲ್ಲ ಮನುಷ್ಯರಿಗೆ ಯಾರು ಹೆಚ್ಚು ಉಪಕಾರ ಮಾಡುತ್ತಾರೋ ಅವರನ್ನು ದೇವನು ಹೆಚ್ಚು ಇಷ್ಟಪಡುತ್ತಾನೆ ಎಂದು ಹೇಳುವುದರ ಮೂಲಕ ಪ್ರವಾದಿ ಮುಹಮ್ಮದ್ ಮನುಷ್ಯತ್ವದ ಉದಾತ್ತ ಚಿಂತನೆಗಳನ್ನು ಈ ಜಗತ್ತಿಗೆ ಕಲಿಸಿಕೊಟ್ಟಿದ್ದಾರೆ ಎಂದರು. ಎಲ್ಲ ಹಬ್ಬಗಳು ಉದಾತ್ತವಾದ ಸಂದೇಶಗಳನ್ನು ನೀಡುತ್ತವೆ. ನಾವು ಪರಸ್ಪರರ ಹಬ್ಬಗಳ ಸಂದೇಶಗಳನ್ನು ಅರಿತುಕೊಳ್ಳಬೇಕು ಎಂದು ಕರೆ ನೀಡಿದರು. 

ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಕರಿಕಾಲ್ ಸೆಕ್ರಡ್ ಹಾರ್ಟ್ ಚರ್ಚ್ ನ ಧರ್ಮಗುರು ಫಾ. ಲವಾರೆನ್ಸ್ ಫೆರ್ನಾಂಡಿಸ್ ಈದ್ ಸಂದೇಶವನ್ನು ನೀಡಿ “ಮನುಷ್ಯ ತನ್ನ ಮನುಷ್ಯತ್ವ ಗುಣಗಳನ್ನು ಮರೆತಾಗ ಮೃಗನಾಗು ತ್ತಾನೆ. ಆದ್ದರಿಂದ ನಾವು ಮೊದಲು ಮನುಷ್ಯರಾಗಿ ಬಾಳುವುದನ್ನು ಕಲಿತುಕೊಳ್ಳೋಣ ಎಂಬ ಸಂದೇಶ ನೀಡಿದರು.

ಭಟ್ಕಳ ಉಪವಿಭಾಗದ ಸಹಾಯಕ ಆಯುಕ್ತೆ ಮಮತಾ ದೇವಿ ಮಾತನಾಡಿ, ತಾನು ಭಟ್ಕಳಕ್ಕೆ ಬರುವ ಮುಂಚೆ ಭಟ್ಕಳದ ಕುರಿತಂತೆ ತಪ್ಪು ಮಾಹಿತಿಗಳನ್ನು ಕೇಳಿದ್ದೇ, ಆದರೆ ಭಟ್ಕಳದ ಜನರು ಅತ್ಯಂತ ಶಾಂತಿ, ಸೌಹಾರ್ದತೆಯಿಂದ ಬಾಳುತ್ತಿದ್ದಾರೆ. ಇದಕ್ಕೆ ಈ ಈದ್ ಸೌಹಾರ್ದ ಕಾರ್ಯಕ್ರಮವೇ ಸಾಕ್ಷಿಯಾಗಿದೆ ಎಂದರು. 

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸಾಹಿತಿ ಗಂಗಾಧರ್ ನಾಯ್ಕ ಮಾತನಾಡಿ, ಭಟ್ಕಳದ ಮಣ್ಣಿನಲ್ಲಿ ಸಾಮರಸ್ಯದ ಗುಣವಿದೆ. ಇಲ್ಲಿನ ಇತಿಹಾಸವನ್ನು ಇಣುಕಿ ಹಾಕಿದಾಗ ಅದು ನಮಗೆ ಗೊತ್ತಾಗುತ್ತದೆ. ಆದ್ದರಿಂದ ಭಟ್ಕಳ ಸೂಕ್ಷ್ಮ ಪ್ರದೇಶವಲ್ಲ, ಇದು ಕೋಮು ಸೌಹಾರ್ದತೆಗೆ ಸೂಕ್ತ ಪ್ರದೇಶವಾಗಿದೆ, ಸೌಹಾರ್ದತೆಯೆ ಈ ನೆಲದ ಉಸಿರಾಗ ಬೇಕು ಎಂಬುದು ನಮ್ಮೆಲ್ಲರ ಆಶಯವಾಗಿದೆ ಎಂದರು.

ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸವೀತಾ ಕಾಮತ್ ಮಾತನಾಡಿ ನಮಗೆ ಗಾಂಧಿಯ ಹಿಂದೂ ಬೇಕೆ ಹೊರತು ಗೋಡ್ಸೆಯ ಹಿಂದುವಲ್ಲ, ಪ್ರವಾದಿ ಮುಹಮ್ಮದ್ ರ ಇಸ್ಲಾಮ್ ಬೇಕೆ ಹೊರತು ಉಸಾಮಾ ಬಿನ್ ಲಾಡೆನ್ ಇಸ್ಲಾಮ್ ಅಲ್ಲ ಎಂದರು.

ಮಾಜಿ ಶಾಸಕ ಜೆ.ಡಿ.ನಾಯ್ಕ, ಉ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ರಾಧಕೃಷ್ಣ ಭಟ್, ಸದ್ಭಾವನಾ ಮಂಚ್ ಅಧ್ಯಕ್ಷ ಸತೀಶ್ ಕುಮಾರ್ ನಾಯ್ಕ, ಸಂದರ್ಭೋಚಿತವಾಗಿ ಮಾತನಾಡಿ ಸೌಹಾರ್ದ ಸಂದೇಶವನ್ನು ನೀಡಿದರು.

ಭಟ್ಕಳದ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಅಧ್ಯಕ್ಷ ಎಸ್.ಎಂ.ಪರ್ವಾಝ್, ಜನತಾ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎ.ಬಿ.ರಾಮರಥ, ಉ.ಕ.ಜಿಲ್ಲಾ ಜರ್ನಲಿಸ್ಟ್ ಯುನಿಯನ್ ಅಧ್ಯಕ್ಷ ಮನಮೋಹನ್ ನಾಯ್ಕ, ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯ ಮಹಿಳಾ ಘಟಕದ ಅಧ್ಯಕ್ಷೆ ಸಾಜಿದಾ ಅಂಜುಮ್, ಅನ್ಫಾಲ್ ಹೈಪರ್ ಮಾರ್ಕೇಟ್ ಮಾಲಿಕ ಇಷ್ತಿಯಾಕ್, ವೇದಿಕೆಯಲ್ಲಿ ಉಪಸ್ಥಿತರಿದ್ದರು. 

ಭಟ್ಕಳ ಜಮಾಅತೆ ಇಸ್ಲಾಮಿ ಹಿಂದ್ ಅಧ್ಯಕ್ಷ ಇಂಜಿನಿಯರ್ ನಝೀರ್ ಆಹ್ಮದ್ ಖಾಝಿ ಧನ್ಯವಾದ ಅರ್ಪಿಸಿದರು. ಕಾರ್ಯಕ್ರಮದ ಸಂಚಾಲಕ ಮುಹಮ್ಮದ್ ರಝಾ ಮಾನ್ವಿ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದು.

ಈ ಸಂದರ್ಭದಲ್ಲಿ ಉ.ಕ ಜಿಲ್ಲಾ ಮಟ್ಟದ ಸೀರತ್ ಪ್ರಬಂಧ ಸ್ಪರ್ಧೆಯ ವಿಜೇತರಾದ ಶಿರಸಿಯ ರಾಜೇಶ್ವರಿ ಹೆಗಡೆ, ಭಟ್ಕಳದ ರಾಘವೇಂದ್ರ ಮಡಿವಾಳ, ಗೋಕರ್ಣದ ಸಂಗೀತಾ ಶೇಟ್ಟಿಯವರಿಗೆ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವನ್ನು ನೀಡಲಾಯಿತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X