Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಳೆಗಾಲದಲ್ಲಿ ಯಾವುದೇ ಅವಘಡಗಳಾದಂತೆ...

ಮಳೆಗಾಲದಲ್ಲಿ ಯಾವುದೇ ಅವಘಡಗಳಾದಂತೆ ಎಚ್ಚರ ವಹಿಸಲು ದ.ಕ. ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ19 May 2022 10:50 PM IST
share
ಮಳೆಗಾಲದಲ್ಲಿ ಯಾವುದೇ ಅವಘಡಗಳಾದಂತೆ ಎಚ್ಚರ ವಹಿಸಲು ದ.ಕ. ಜಿಲ್ಲಾಧಿಕಾರಿ ಸೂಚನೆ

ಮಂಗಳೂರು : ದ.ಕ.ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದೆ, ಕೆಲವೇ ದಿನಗಳಲ್ಲಿ ಮುಂಗಾರು ಕೂಡ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಾಕೃತಿಕವಾಗಿ ಹಾಗೂ ಮಾನವನಿಂದಾಗುವ ಅವಘಡಗಳು ಸಂಭವಿಸದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸೂಚಿಸಿದರು.

ವಿಪತ್ತು ನಿರ್ವಹಣೆ ಕುರಿತಂತೆ ದ.ಕ.ಜಿಪಂ ಮಿನಿ ಸಭಾಂಗಣದಲ್ಲಿ ಗುರುವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಟ್ಟಡ ನಿರ್ಮಾಣಕ್ಕೆ ವಲಸೆ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಗೆ ಬಂದಿದ್ದಾರೆ, ಮಳೆಗಾಲದ ಸಂದರ್ಭದಲ್ಲಿ ಖಾಸಗಿ ಕಟ್ಟಡ ನಿರ್ಮಾಣಕಾರರು ಅವರ ತಂಗುವಿಕೆಗೆ ಉತ್ತಮ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕು. ಅದೇ ರೀತಿ ಸರಕಾರದ ಏಜೆನ್ಸಿಗಳಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ನಿರ್ವಹಿಸುವ ಕೆಲಸಗಾರರಿಗೆ ಉತ್ತಮ ವ್ಯವಸ್ಥೆ ಮಾಡಿಕೊಡಬೇಕು. ಕಟ್ಟಡ ನಿರ್ಮಾಣದ ಸ್ಥಳದಲ್ಲಿ ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಈ ಬಗ್ಗೆ ಸಂಬಂಧಪಟ್ಟವರು ಖಚಿತಪಡಿಸಿಕೊಳ್ಳಬೇಕು, ಅದೇ ರೀತಿ ಜಿಲ್ಲೆಯಲ್ಲಿರುವ ಕೈಗಾರಿಕೆಗಳಲ್ಲಿ ಯಾವುದೇ ಕಾರ್ಮಿಕರಿಗೆ ತೊಂದರೆ ಆಗದಂತೆ ಕಾರ್ಖಾನೆ ಹಾಗೂ ಬಾಯ್ಲರ್ ಇಲಾಖೆಯ ಉಪ ನಿರ್ದೇಶಕರು ಸಂಬಂಧಿಸಿದ ಆಡಳಿತ ಮಂಡಳಿಯನ್ನು ಸಂಪರ್ಕಿಸಿ ಯಾವುದೇ ರೀತಿಯ ಅವಘಡಗಳು ಆಗದಂತೆ, ಸುರಕ್ಷತಾ ಕ್ರಮಗಳನ್ನು ಕೈಗೊಂಡಿರುವ ಕುರಿತು ಪರಿಶೀಲಿಸುವಂತೆ ನಿರ್ದೇಶನ ನೀಡಿದರು.

ರಾ.ಹೆ. ಅಭಿವೃದ್ಧಿ ಪ್ರಾಧಿಕಾರದಿಂದ ಜಿಲ್ಲೆಯಲ್ಲಿ ಹಲವು ರಸ್ತೆ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿವೆ. ಮಳೆ ಸುರಿಯುತ್ತಿರುವ ಕಾರಣ ಅಲ್ಲಿ ಸಂಚರಿಸುವ ಖಾಸಗಿ ಹಾಗೂ ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಯಾವುದೇ ಅವಘಡಗಳು ಆಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು. ಆಯಾ ವ್ಯಾಪ್ತಿಯಲ್ಲಿ ನಿಗದಿಪಡಿಸಿದ ವೇಗದಲ್ಲಿಯೇ ಸಂಚರಿಸಬೇಕು. ಮಿತಿಮೀರಿದ ವೇಗದಲ್ಲಿ ಸಂಚರಿಸದಂತೆ ಎಚ್ಚರ ವಹಿಸಬೇಕು, ಇತರೆ ವಾಹನ ಸವಾರರಿಗೆ ಅನುಕೂಲವಾಗುವಂತೆ ಗುರುತಿನ ಬೋರ್ಡ್‌ಗಳನ್ನು ಅಳವಡಿಸಬೇಕು, ಮಳೆ ಯಿಂದಾಗಿ ವಾಹನಗಳು ಸ್ಕಿಡ್ ಆಗಿ ಸವಾರ ತೊಂದರೆಗಳಾಗುವ ಸಂಭವವಿರುತ್ತದೆ. ಹಾಗಾಗಿ ಯಾವುದೇ ರೀತಿಯ ಅವಘಡಗಳು ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಲೇ ಕೈಗೊಳ್ಳಬೇಕು. ರಸ್ತೆ ಮಾರ್ಗದಲ್ಲಿ ಮರಗಳು ಬಿದ್ದು ಸಂಚಾರಕ್ಕೆ ತೊಂದರೆಯಾದಲ್ಲಿ ಅವುಗಳನ್ನು ತೆರವುಗೊಳಿಸುವ ಉಪಕರಣಗಳನ್ನು ಸನ್ನದ್ದ ಸ್ಥಿತಿಯಲ್ಲಿರಿಸಿಕೊಳ್ಳಬೇಕು. ಹೆಚ್ಚು ಮಳೆಯಿಂದಾಗಿ ರಸ್ತೆ ಸಂಪರ್ಕ ಅಥವಾ ಇನ್ನಿತರ ಸಮಸ್ಯೆಗಳು ತಲೆದೋರಿ ದಾಗ ಶಾಲೆಗಳು, ಕಾಲೇಜುಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ನೀಡಲು ಸಂಬಂಧಪಟ್ಟ ತಾಲೂಕು ಗಳ ತಹಶೀಲ್ದಾರರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೂಕ್ತ ಸಮಯಕ್ಕೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು ಎಂದು ಡಿಸಿ ಸೂಚಿಸಿದರು.

ಜಿಲ್ಲಾ ಎಸ್ಪಿ ಋಷಿಕೇಶ್ ಭಗವಾನ್ ಸೋನಾವಣೆ ಮಾತನಾಡಿ ಜಿಲ್ಲೆಯಲ್ಲಿ ಹಳ್ಳ-ಕೊಳ್ಳಗಳ ಮೂಲಕ ಹಾದು ಹೋಗುವ ಶಾಲೆಗಳ ಪಟ್ಟಿಯನ್ನು ಸಿದ್ಧಪಡಿಸಿಟ್ಟುಕೊಳ್ಳಬೇಕು, ಇದರಿಂದ ಮಳೆಗಾಲದ ಸಂದರ್ಭ ಸಂಬಂಧಿಸಿದ ಶಾಲೆಗಳಿಗೆ ರಜೆ ಘೋಷಿಸಲು ಅನುಕೂಲವಾಗಲಿದೆ ಎಂದರು.

ಜಿಲ್ಲೆಯಲ್ಲಿ ದುಸ್ಥಿತಿಯಲ್ಲಿರುವ ಶಾಲೆಗಳ ದುರಸ್ತಿಗೆ ೧.೫೦ ಲಕ್ಷ ರೂ. ಅನುದಾನ ನೀಡಲಾಗುವುದು. ಯಾವುದೇ ತುರ್ತು ಕಾಮಗಾರಿ ಅವಶ್ಯಕತೆಯಿದ್ದಲ್ಲಿ ವರದಿ ನೀಡಬೇಕು. ಅಂತಹ ಶಾಲೆಗಳಿಗೆ ಕೂಡಲೇ ಹಣ ಬಿಡುಗಡೆ ಮಾಡಲಾಗುವುದು. ಸಂಭವನೀಯ ಭೂಕುಸಿತ ಗುಡ್ಡ ಕುಸಿತ ಪ್ರಕರಣಗಳಿಂದ ಎಚ್ಚರವಇಸಬೇಕು, ಅದಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ಅಲ್ಲಿ ಜನರಿದ್ದರೆ ಅವರನ್ನು ಸ್ಥಳಾಂತರಿಸಲು ಕ್ರಮವಹಿಸಬೇಕು, ಯಾವುದೇ ರೀತಿಯ ಅವಘಡಗಳು ಸಂಭವಿಸಿದಲ್ಲಿ ಎಸ್‌ಡಿಆರ್‌ಎಫ್ ಹಾಗೂ ಎನ್‌ಡಿ ಆರ್‌ಎಫ್ ಮಾರ್ಗಸೂಚಿಗಳಂತೆ ಪರಿಹಾರವನ್ನು ಕೂಡಲೇ ನೀಡಬೇಕು, ಇದಕ್ಕಾಗಿ ಜಿಲ್ಲೆಯ ಪ್ರತಿಯೊಂದು ತಾಲೂಕುಗಳ ತಹಶೀಲ್ದಾರರ ಖಾತೆಯಲ್ಲಿ ೫೦ ಲಕ್ಷ ರೂ.ಗಳ ಅಗತ್ಯ ಅನುದಾನ ಲಭ್ಯವಿದೆ ಎಂದು ಡಿಸಿ ಹೇಳಿದರು.

ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಪಂ ವ್ಯಾಪ್ತಿಯಲ್ಲಿ ಅಗತ್ಯವಿರುವ ಕಡೆ ಕಾಳಜಿ ಕೇಂದ್ರಗಳನ್ನು ತೆರೆಯಲು ಈಗಲೇ ಅಗತ್ಯ ಸ್ಥಳಗಳನ್ನು ಗುರುತಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಮಳೆಗೆ ಬೆಳೆ ನಾಶವಾದ ಸಂದರ್ಭ ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಂಬಂಧಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ವರದಿ ಸಿದ್ಧಪಡಿಸಿ ನೀಡಬೇಕು, ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿದ್ದು ಈ ಬಗ್ಗೆ ಆರೋಗ್ಯ ಇಲಾಖೆ ನಾಗರೀಕರಲ್ಲಿ ಜಾಗೃತಿ ಮೂಡಿಸಬೇಕು. ಸಮುದ್ರಗಳಲ್ಲಿ ಯಾರೂ ಕೂಡ ಇಳಿಯದಂತೆ ಎಚ್ಚರವಹಿಸಬೇಕು. ಬೀಚ್‌ಗಳಲ್ಲಿ ಕಾವಲಿಗೆ ಪೊಲೀಸ್ ಹಾಗೂ ಹೋಂಗಾರ್ಡ್ ಸಿಬ್ಬಂದಿಯನ್ನು ನಿಯೋಜಿಸುವಂತೆ ತಿಳಿಸಿದರು.

ಎಂಆರ್‌ಪಿಎಲ್ ಹಾಗೂ ಎನ್‌ಎಂಪಿಟಿಗಳಲ್ಲಿ ಇತರೆ ಯಾವುದೇ ರೀತಿಯ ಅವಘಡಗಳು ಸಂಭವಿಸಲು ಆಸ್ಪದ ನೀಡಬಾರದು, ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸಿದ್ದಲ್ಲಿ ಕೂಡಲೇ ಜಿಲ್ಲಾಡಳಿತದ ಗಮನಕ್ಕೆ ತರಬೇಕು, ಕಾರ್ಖಾನೆ ಹಾಗೂ ಬಾಯ್ಲರ್ ಇಲಾಖೆಯ ಉಪ ನಿರ್ದೇಶಕರು ಅಲ್ಲಿನ ಸುರಕ್ಷತೆಗಳ ಬಗ್ಗೆ ಗಮನಹರಿಸಬೇಕು., ವಿಫಲ ಕೊಳವೆ ಬಾವಿಗಳನ್ನು ಪತ್ತೆ ಮಾಡಿ ಅವುಗಳನ್ನು ಮುಚ್ಚಬೇಕು. ಮಾನ್ಸೂನ್ ಅವಧಿಯಲ್ಲಿ ಮೀನುಗಾರರಿಗೆ ಕಾಲಕಾಲಕ್ಕೆ ಅಗತ್ಯ ಮಾಹಿತಿ ನೀಡಲಾಗುವುದು ಎಂದರು.

ಸಭೆಯಲ್ಲಿ ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಡಿಸಿಪಿ ಹರಿರಾಂ ಶಂಕರ್, ಮಂಗಳೂರು ಸಹಾಯಕ  ಆಯುಕ್ತ ಮದನ್ ಮೋಹನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X