Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರಜಾಪ್ರಭುತ್ವದ ಮೌಲ್ಯಗಳ ರಕ್ಷಣೆಗಾಗಿ...

ಪ್ರಜಾಪ್ರಭುತ್ವದ ಮೌಲ್ಯಗಳ ರಕ್ಷಣೆಗಾಗಿ ಶ್ರಮಿಸಿದ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿ: ಬಿ.ಕೆ.ಹರಿಪ್ರಸಾದ್

ವಡ್ಡರ್ಸೆ ರಘುರಾಮ ಶೆಟ್ಟಿಯವರ ಬರಹಗಳ ಸಂಕಲನ "ಬೇರೆಯೇ ಮಾತು" ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ20 May 2022 8:23 PM IST
share
ಪ್ರಜಾಪ್ರಭುತ್ವದ ಮೌಲ್ಯಗಳ ರಕ್ಷಣೆಗಾಗಿ ಶ್ರಮಿಸಿದ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿ: ಬಿ.ಕೆ.ಹರಿಪ್ರಸಾದ್

ಮಂಗಳೂರು: ವಡ್ಡರ್ಸೆ ರಘುರಾಮ ಶೆಟ್ಟಿಯವರು ಸಾಮಾಜಿಕ ಕಾಳಜಿಯೊಂದಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ರಕ್ಷಣೆಗಾಗಿ ತಮ್ಮ ಪತ್ರಿಕೆಯ ಮೂಲಕ ಶ್ರಮಿಸಿದ ಪತ್ರಕರ್ತರಾಗಿದ್ದರು ಎಂದು ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ತಿಳಿಸಿದ್ದಾರೆ.

ರಂಗಚಾವಡಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘಟನೆಯ ವತಿಯಿಂದ ನಗರದ ಸಹೋದಯ  ಸಭಾಂಗಣ ದಲ್ಲಿಂದು ಹಮ್ಮಿಕೊಂಡಿದ್ದ ವಡ್ಡರ್ಸೆ ರಘುರಾಮ ಶೆಟ್ಟಿಯವರ ಬರಹಗಳ ಬೇರೆಯೇ ಮಾತು ಕೃತಿ ಬಿಡುಗಡೆ ಗೊಳಿಸಿ ಮಾತನಾಡುತ್ತಿದ್ದರು.

ಸಮಾಜದಲ್ಲಿ ವಡ್ಡರ್ಸೆ ರಘುರಾಮ ಶೆಟ್ಟಿಯವರಂತಹ ಪತ್ರಕರ್ತರ ಪ್ರಜಾಪ್ರಭುತ್ವದ ಮೌಲ್ಯ ಗಳನ್ನು ಉಳಿದಿದೆ. ದುರ್ಬಲ ವರ್ಗದವರು, ಶೋಷಿತರು, ತುಳಿತಕ್ಕೊಳಗಾದವರ ಪರವಾಗಿ ಮುಂಗಾರು ಪತ್ರಿಕೆಯ ಮೂಲಕ ಅವರ ಧ್ವನಿಯಾಗಿದ್ದರು. ಡಾ.ಬಾಬಾ ಸಾಹೇಬ್, ಜ್ಯೋತಿ ಬಾಪುಲೆ, ನಾರಾಯಣ ಗುರುಗಳ ಸಾಮಾಜಿಕ ಕ್ರಾಂತಿ ಯನ್ನು ಬೆಂಬಲಿಸಿ ವಡ್ಡರ್ಸೆ ರಘುರಾಮ ಶೆಟ್ಟಿಯವರು ಬೆಂಬಲಿಸಿದ್ದರು. ಕರಾವಳಿಯ ಜನರಿಗಿದ್ದ ಗೌರವ ಇತ್ತೀಚೆಗೆ ಕುಸಿದಿದೆ. ಕರಾವಳಿ ಸೇರಿದಂತೆ  ದೇಶದ ವೈವಿಧ್ಯತೆಯಲ್ಲಿ ಏಕತೆಯನ್ನು ಉಳಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಹರಿಪ್ರಸಾದ್ ತಿಳಿಸಿದ್ದಾರೆ.

"ಬೇರೆಯೇ ಮಾತು" ಕೃತಿಯ ಸಂಪಾದಕ ದಿನೇಶ್ ಅಮೀನ್ ಮಟ್ಟು ಮಾತನಾಡುತ್ತಾ ಶಿಕ್ಷಣ, ಉದ್ಯೋಗ, ಬ್ಯಾಂಕಿಂಗ್ ಕ್ಷೇತ್ರದ ಜೊತೆಗೆ ಹಿಂದು, ಮುಸ್ಲಿಂ, ಕ್ರೈಸ್ತರ ಸೌಹಾರ್ದತೆಗೆ ಖ್ಯಾತಿ ಪಡೆದಿರುವ ಕರಾವಳಿಯಲ್ಲಿ ಸಣ್ಣ ಪುಟ್ಟ ಘಟನೆಗಳ ಮೂಲಕ ಸೌಹಾರ್ದತೆಗೆ ಇಲ್ಲಿನ ಮೂಲ ಸಂಸ್ಕೃತಿಯ ಮೇಲೆ ಕೋಮುವಾದಿ ಶಕ್ತಿ ಗಳಿಂದ ದಾಳಿ ನಡೆಯುತ್ತಿರುವುದು ಖೇದಕರ ಸಂಗತಿ ಎಂದರು. ಇಂತಹ ಸಂದರ್ಭದಲ್ಲಿ ಕಷ್ಟದಲ್ಲಿರುವವರ ಪರ ಬೆಂಬಲವಾಗಿ ನಿಲ್ಲುತ್ತಿದ್ದ ವಡ್ಡರ್ಸೆ ರಘುರಾಮ ಶೆಟ್ಟಿಯವರು ನೆನಪಾಗುತ್ತಾರೆ. ಅವರ ಬರಹಗಳು ಮುಂದಿನ ಪೀಳಿಗೆಗೆ ದಾರಿ ದೀಪವಾಗಲಿ ಎಂದು ದಿನೇಶ್ ಅಮೀನ್ ಮಟ್ಟು ತಿಳಿಸಿದ್ದಾರೆ.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ "ವಾರ್ತಾಭಾರತಿ" ಪತ್ರಿಕೆಯ ಸಂಪಾದಕ ಅಬ್ದುಸ್ಸಲಾಮ್ ಪುತ್ತಿಗೆ ಮಾತನಾಡುತ್ತಾ "ವಡ್ಡರ್ಸೆ ರಘುರಾಮ ಶೆಟ್ಟಿಯವರು ಲೆಕ್ಕಾಚಾರದ 'ಬುದ್ಧಿವಂತ'ರಾಗಿರಲಿಲ್ಲ.  ಹಾಗಾಗಿ ಅವರು ದಿನಪತ್ರಿಕೆ ಆರಂಭಿಸುವ ಭಾರೀ ಸವಾಲಿನ ಕೆಲಸಕ್ಕೆ ಕೈಹಾಕಿದರು. ಮುಂಗಾರು ಆರಂಭಿಸಿದ್ದೇ ದೊಡ್ಡ ಸಾಧನೆ. ಅವರು ಬದ್ಧತೆಯೊಂದಿಗೆ ಪತ್ರಿಕೆ ನಡೆಸಿದವರು ಮತ್ತು ಪತ್ರಕರ್ತರಿಗೆ ಸ್ಫೂರ್ತಿಯಾದರು. ಅವರ  ಬರಹಗಳ ಸಂಕಲನ ಇತರರಿಗೆ ಸ್ಫೂರ್ತಿಯಾಗಲಿ" ಎಂದು ಹಾರೈಸಿದರು.

ಮುಖ್ಯ ಅತಿಥಿಯಾಗಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರ ಕರ್ತಕರ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ ಮಾತನಾಡುತ್ತಾ, ಕ್ರೀಯಾಶೀಲ ಪತ್ರಕರ್ತರಾಗಿದ್ದ ವಡ್ಡರ್ಸೆಯವರು ಪತ್ರಕರ್ತರಿಗೆ ಮಾದರಿ ಅವರ ಹೆಸರಿನಲ್ಲಿ ದತ್ತಿ ನಿಧಿ ಸ್ಥಾಪಿಸುವ ಇಂಗಿತವಿದೆಯೆಂದು ತಿಳಿಸಿದ್ದಾರೆ.

ಪುಸ್ತಕದ ಪ್ರಕಾಶಕಿ ಅಕ್ಷತಾ ಹುಂಚದಕಟ್ಟೆ ಉಪಸ್ಥಿತರಿದ್ದರು. ರಂಗ ಚಾವಡಿ ಸಂಘಟನೆ ಯ ಸಂಚಾಲಕ ಜಗನ್ನಾಥ ಶೆಟ್ಟಿ ಬಾಳ ವಂದಿಸಿದರು. ಸಲಹೆಗಾರರಾದ ನರೇಶ್ ಕುಮಾರ್ ‌ಸಸಿಹಿತ್ಲು  ಸ್ವಾಗತಿಸಿದರು. ಪುಷ್ಪರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X