Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಸೆಸೆಲ್ಸಿ ಫಲಿತಾಂಶದಲ್ಲಿ ದ.ಕ.ಜಿಲ್ಲೆಗೆ...

ಎಸೆಸೆಲ್ಸಿ ಫಲಿತಾಂಶದಲ್ಲಿ ದ.ಕ.ಜಿಲ್ಲೆಗೆ ಹಿನ್ನಡೆ; ಡಬಲ್ ಇಂಜಿನ್ ಸರಕಾರದ ಗೊಂದಲವೇ ಕಾರಣ: ಎಂ.ಬಿ. ಸದಾಶಿವ ಆರೋಪ

ವಾರ್ತಾಭಾರತಿವಾರ್ತಾಭಾರತಿ20 May 2022 8:49 PM IST
share
ಎಸೆಸೆಲ್ಸಿ ಫಲಿತಾಂಶದಲ್ಲಿ ದ.ಕ.ಜಿಲ್ಲೆಗೆ ಹಿನ್ನಡೆ; ಡಬಲ್ ಇಂಜಿನ್ ಸರಕಾರದ ಗೊಂದಲವೇ ಕಾರಣ: ಎಂ.ಬಿ. ಸದಾಶಿವ ಆರೋಪ

ಮಂಗಳೂರು, ಮೇ 20: 2021-22ನೆ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ದ.ಕ.ಜಿಲ್ಲೆಯು 20ನೆ ಸ್ಥಾನಕ್ಕೆ ಕುಸಿಯಲು ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿಯ ಡಬಲ್ ಇಂಜಿನ್ ಸರಕಾರವು ಶೈಕ್ಷಣಿಕ ಕ್ಷೇತ್ರದಲ್ಲಿ ಸೃಷ್ಟಿಸಿದ ಗೊಂದಲವೇ ಕಾರಣ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ. ಸದಾಶಿವ ಆರೋಪಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರತೀ ವರ್ಷ ದ.ಕ.ಜಿಲ್ಲೆಯು ಎಸೆಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ಅಥವಾ ದ್ವಿತೀಯ ಸ್ಥಾನದಲ್ಲಿರುತ್ತಿತ್ತು. ಆದರೆ ಈ ಬಾರಿ ೨೦ನೆ ಸ್ಥಾನಕ್ಕೆ ಸಮಾಧಾನಪಟ್ಟು ಕೊಳ್ಳುವಂತಾಗಿದೆ. ಈ ಬಗ್ಗೆ ದ.ಕ.ಜಿಲ್ಲೆಯ ವಿದ್ಯಾರ್ಥಿಗಳ ಹೆತ್ತವರು, ಪೋಷಕರು ಗಮನಹರಿಸಬೇಕಿದೆ ಎಂದರು.

ಶೈಕ್ಷಣಿಕ ಕ್ಷೇತ್ರದಲ್ಲಿ ದ.ಕ.ಜಿಲ್ಲೆಯ ಸಾಧನೆಗೆ ದೇಶ-ವಿದೇಶಗಳಲ್ಲಿ ಒಳ್ಳೆಯ ಹೆಸರಿದೆ. ಪ್ರಶಂಸೆಯೂ ವ್ಯಕ್ತವಾಗಿದೆ. ಜಗತ್ತಿನ ೧೨ ಬೃಹತ್ ಕಂಪೆನಿಗಳ ಸಿಇಒಗಳು ಕನ್ನಡಿಗರಾಗಿದ್ದಾರೆ. ಆದರೆ ರಾಜ್ಯ ಮತ್ತು ಕೇಂದ್ರದಲ್ಲಿರುವ ಬಿಜೆಪಿ ಸರಕಾರಗಳು ವಿದ್ಯಾರ್ಥಿಗಳ ಮಧ್ಯೆ ಮತೀಯ ಭಾವನೆ ಸೃಷ್ಟಿಸುತ್ತಲೇ ಇದೆ. ಜೆಡಿಎಸ್ ಸರಕಾರವಿದ್ದಾಗ ಮಕ್ಕಳ ಕೈಗೆ ಲ್ಯಾಪ್‌ಟಾಪ್, ಟ್ಯಾಬ್ ಕೊಟ್ಟಿದ್ದರೆ ಬಿಜೆಪಿ ಸರಕಾರವು ತ್ರಿಶೂಲ, ಬಂದೂಕು ಕೊಟ್ಟು ದಾರಿ ತಪ್ಪಿಸುತ್ತಿದೆ ಎಂದು ಎಂ.ಬಿ.ಸದಾಶಿವ ಆರೋಪಿಸಿದರು.

ಸರಕಾರದ ವೈಫಲ್ಯವನ್ನು ಮರೆಮಾಚಲು ಬಿಜೆಪಿಯು ವಿದ್ಯಾರ್ಥಿಗಳ ಮಧ್ಯೆ ಹಿಜಾಬ್ ಸಮಸ್ಯೆಯನ್ನು ಹುಟ್ಟು ಹಾಕಿ ಜಾತಿ, ಧರ್ಮಗಳ ಆಧಾರದ ಮೇಲೆ ವಿಭಜಿಸಿದೆ. ಮಕ್ಕಳ ಏಕಾಗ್ರತೆಗೆ ಭಂಗ ತಂದಿವೆ. ಚಕ್ರತೀರ್ಥರಂತಹವರ ನೇತೃತ್ವದ ಸಮಿತಿಯನ್ನು ರಚಿಸಿ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಅನ್ಯಾಯ ಎಸಗಿದೆ. ನಾರಾಯಣಗುರು, ಭಗತ್ ಸಿಂಗ್, ಸ್ವಾಮಿ ವಿವೇಕಾನಂದ, ಪೆರಿಯಾರ್‌ರಂತಹ ವಿಶ್ವಮನ್ನಣೆಯ ನಾಯಕರ ವಿಷಯವುಳ್ಳ ಪಠ್ಯವನ್ನು ಕೈ ಬಿಟ್ಟಿದೆ. ಬ್ರಿಟಿಷ್ ಪರವಿರುವಂತಹವರ ವಿಷಯವನ್ನು ಪಠ್ಯದಲ್ಲಿ ಸೇರಿಸಿ ಅನ್ಯಾಯ ಎಸಗಿದೆ ಎಂದು ಎಂ.ಬಿ. ಸದಾಶಿವ ಆರೋಪಿಸಿದರು.

ಪಠ್ಯಪುಸ್ತಕ ಪರಿಷ್ಕರಣೆ ಸಂದರ್ಭ ಯಾರಿಗೂ ಅನ್ಯಾಯವಾಗಿಲ್ಲ. ನಾರಾಯಣ ಗುರುವಿನ ಬಗ್ಗೆಗಿನ ಪಠ್ಯವನ್ನು ಕೈಬಿಟ್ಟಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿರುವುದು ಖಂಡನೀಯ. ಹಾಗಿದ್ದರೆ ಅವರು ಈ ಬಗ್ಗೆ ಸಿಎಂರನ್ನು ಯಾಕೆ ಭೇಟಿ ಮಾಡಿದ್ದು ಎಂದು ಪ್ರಶ್ನಿಸಿದ ಎಂ.ಬಿ.ಸದಾಶಿವ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯು ನೀಡಿದ ವರದಿಯನ್ನು ಬಹಿರಂಗಪಡಿಸಲಿ ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ವಿಟ್ಲ ಮುಹಮ್ಮದ್ ಕುಂಞಿ, ವಸಂತ ಪೂಜಾರಿ, ಸುಶೀಲ್ ನೊರೊನ್ಹಾ, ಪ್ರವೀಣ್ ಜೈನ್ ಉಪಸ್ಥಿತರಿದ್ದರು.

ಎಸೆಸೆಲ್ಸಿ ಫಲಿತಾಂಶ; ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ಪಟ್ಟಿ

೨೦೨೧-೨೨ನೆ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟಗೊಂಡ ಬೆನ್ನಿಗೆ ಸಾಮಾಜಿಕ ಜಾಲತಾಣಗಳಲ್ಲಿ ಜಿಲ್ಲಾವಾರು ಸಾಧನೆಯ ಪಟ್ಟಿಯೊಂದು ಹರಿದಾಡುತ್ತಿದೆ. ಅದನ್ನೇ ಆಧಾರವಾಗಿಟ್ಟುಕೊಂಡು ಜೆಡಿಎಸ್ ನಾಯಕರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಇದಕ್ಕೆ ಡಬಲ್ ಇಂಜಿನ್ ಸರಕಾರವೇ ಕಾರಣ ಎಂದು ಆರೋಪಿಸಿದ್ದಾರೆ.

ಆದರೆ ಇದು ನಕಲಿ ಪಟ್ಟಿ ಎಂದು ಹೇಳಲಾಗುತ್ತಿದೆ. ಈ ಪಟ್ಟಿಯ ಪ್ರಕಾರ ಸದಾ ಒಂದು ಅಥವಾ ಎರಡನೆ ಸ್ಥಾನದಲ್ಲಿ ಗುರುತಿಸಿಕೊಳ್ಳುತ್ತಿದ್ದ ದ.ಕ.ಜಿಲ್ಲೆಯು ೨೦ನೆ ಸ್ಥಾನಕ್ಕೆ ತಳ್ಳಲ್ಪಟ್ಟಿವೆ. ಉಡುಪಿಗೆ ೧೩ನೆ ಸ್ಥಾನ ನೀಡಲಾಗಿದೆ.  ಪ್ರಥಮ ಸ್ಥಾನವು ಹಾಸನದ ಪಾಲಾದರೆ, ದ್ವಿತೀಯ ಸ್ಥಾನವು ಚಿಕ್ಕಬಳ್ಳಾಪುರ, ಮೂರನೆ ಸ್ಥಾನವು ಮಂಡ್ಯಕ್ಕೆ ನೀಡಲಾಗಿದೆ.

ಶೇ.೭೮.೨೦ ಮೂಲಕ ಎ ಗ್ರೇಡ್ ಪಡೆದಿರುವ ದ.ಕ.ಜಿಲ್ಲೆಗೆ ಶೇ.೮೭.೧೫ ನೀಡುವ ಮೂಲಕ ೨೦ನೆ ಸ್ಥಾನಕ್ಕೆ ತಳ್ಳಲಾಗಿದೆ. ಇದು ಕಿಡಿಗೇಡಿಗಳ ಕೃತ್ಯವಾದರೂ ಕೂಡ ದ.ಕ.ಜಿಲ್ಲಾಡಳಿತ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯು ಈ ಬಗ್ಗೆ ಸ್ಪಷ್ಟನೆ ನೀಡದಿರುವುದು ವಿಪರ್ಯಾಸ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X